ಇಂದು ರಾಜ್ಯಸಭೆ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಲಿರುವ ಸುಪ್ರೀಂಕೋರ್ಟ್ ನಿವೃತ್ತ ಸಿಜೆಐ ರಂಜನ್ ಗೊಗೋಯ್

13 ತಿಂಗಳುಗಳ ಕಾಲ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿದ್ದ ರಂಜನ್ ಗೊಗೋಯ್ (65) ಕಳೆದ ನವೆಂಬರ್​ನಂದು ನಿವೃತ್ತರಾದರು. ರಂಜನ್ ಗೊಗೋಯ್ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿರುವುದಕ್ಕೆ ಕೇಂದ್ರ ಸರ್ಕಾರವನ್ನು ವಿಪಕ್ಷಗಳು ತೀವ್ರವಾಗಿ ಟೀಕಿಸಿವೆ.

news18-kannada
Updated:March 19, 2020, 7:01 AM IST
ಇಂದು ರಾಜ್ಯಸಭೆ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಲಿರುವ ಸುಪ್ರೀಂಕೋರ್ಟ್ ನಿವೃತ್ತ ಸಿಜೆಐ ರಂಜನ್ ಗೊಗೋಯ್
ರಂಜನ್ ಗೊಗೋಯ್
  • Share this:
ನವದೆಹಲಿ: ಸುಪ್ರೀಂಕೋರ್ಟ್​ ನಿವೃತ್ತ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ಅವರು ಇಂದು ಬೆಳಗ್ಗೆ 11 ಗಂಟೆಗೆ ರಾಜ್ಯಸಭೆ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ಹೇಳಿವೆ. ನ್ಯಾ.ರಂಜನ್ ಗೊಗೋಯ್ ಅವರು ಅವರನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮಾರ್ಚ್ 16ರಂದು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದ್ದರು.

ರಾಜಕೀಯ ಹಾಗೂ ಧರ್ಮ ಸೂಕ್ಷ್ಮವಾದ ಅಯೋಧ್ಯೆ ಪ್ರಕರಣ ಸೇರಿದಂತೆ ಹಲವು ಪ್ರಮುಖ ಪ್ರಕರಣಗಳ ತೀರ್ಪು ನೀಡಿದ್ದಾರೆ. ಸೋಮವಾರ ಸರ್ಕಾರದಿಂದ ಅವರು ರಾಜ್ಯಸಭೆ ನಾಮನಿರ್ದೇಶನಗೊಂಡರು.






ನಿವೃತ್ತ ನ್ಯಾಯಮೂರ್ತಿ ರಂಜನ್ ಗೊಗೋಯ್ ಅವರು ಮೇಲ್ಮನೆಗೆ ನಾಮನಿರ್ದೇಶನಗೊಂಡ ಸೋಮವಾರ ಸಂಜೆ ಗೃಹ ಸಚಿವಾಲಯ ಅಧಿಸೂಚನೆ ಹೊರಡಿಸಿತ್ತು. ಕೆಟಿಎಸ್ ತುಳಸಿ ಅವರಿಂದ ತೆರವಾದ ಸ್ಥಾನಕ್ಕೆ ರಂಜನ್ ಗೊಗೋಯ್ ಅವರನ್ನು ನಾಮನಿರ್ದೇಶನ ಮಾಡಲಾಗಿದೆ.

ಸುಪ್ರೀಂಕೋರ್ಟ್​ ನಿವೃತ್ತ ಮುಖ್ಯ ನ್ಯಾಯಮೂರ್ತಿಯನ್ನು ರಾಷ್ಟ್ರಪತಿ ರಾಜ್ಯಸಭೆಗೆ ನಾಮನಿರ್ದೇಶನ ಮಾಡಿರುವುದು ಭಾರತದ ಇತಿಹಾಸದಲ್ಲಿ ಇದೇ ಮೊದಲು ಎನ್ನಲಾಗುತ್ತಿದೆ. ಮೂಲತಃ ಅಸ್ಸಾಂನವರಾದ ರಂಜನ್ ಗೊಗೋಯ್​​ ಅವರು ಅಸ್ಸಾಂ ಮಾಜಿ ಮುಖ್ಯಮಂತ್ರಿ ಕೇಶವ್ ಚಂದ್ರ ಗೊಗೋಯ್​​ ಅವರ ಮಗನಾಗಿದ್ದಾರೆ. ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಯಾದ ಈಶಾನ್ಯ ರಾಜ್ಯದ ಮೊದಲಲಿಗ ಎಂಬ ಹೆಗ್ಗಳಿಕೆಗೂ ರಂಜನ್ ಗೊಗೋಯ್ ಪಾತ್ರರಾಗಿದ್ದರು.

ಇದನ್ನು ಓದಿ: ನಿವೃತ್ತ ಸಿಜೆಐ ರಂಜನ್ ಗೊಗೋಯ್ ರಾಜ್ಯಸಭೆಗೆ ನಾಮನಿರ್ದೇಶನ ಪ್ರಶ್ನಿಸಿ ಸುಪ್ರೀಂಕೋರ್ಟ್​ನಲ್ಲಿ ದೂರು ದಾಖಲು

 

13 ತಿಂಗಳುಗಳ ಕಾಲ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿದ್ದ ರಂಜನ್ ಗೊಗೋಯ್ (65) ಕಳೆದ ನವೆಂಬರ್​ನಂದು ನಿವೃತ್ತರಾದರು. ರಂಜನ್ ಗೊಗೋಯ್ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿರುವುದಕ್ಕೆ ಕೇಂದ್ರ ಸರ್ಕಾರವನ್ನು ವಿಪಕ್ಷಗಳು ತೀವ್ರವಾಗಿ ಟೀಕಿಸಿವೆ.
First published: March 19, 2020, 7:01 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading