• ಹೋಂ
  • »
  • ನ್ಯೂಸ್
  • »
  • ದೇಶ-ವಿದೇಶ
  • »
  • ಭಾರತೀಯ ಇತಿಹಾಸ ಅಧ್ಯಯನ ಸಮಿತಿಯಲ್ಲಿ ಕನ್ನಡಿಗರಿಗಿಲ್ಲ ಅವಕಾಶ - ಕೇಂದ್ರದ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಆಕ್ರೋಶ

ಭಾರತೀಯ ಇತಿಹಾಸ ಅಧ್ಯಯನ ಸಮಿತಿಯಲ್ಲಿ ಕನ್ನಡಿಗರಿಗಿಲ್ಲ ಅವಕಾಶ - ಕೇಂದ್ರದ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಆಕ್ರೋಶ

ಮಾಜಿ ಸಿಎಂ ಎಚ್​​ಡಿ ಕುಮಾರಸ್ವಾಮಿ

ಮಾಜಿ ಸಿಎಂ ಎಚ್​​ಡಿ ಕುಮಾರಸ್ವಾಮಿ

ಕನ್ನಡಿಗ ಪ್ರತಿನಿಧಿಗಳೇ ಇಲ್ಲದೇ ಕರ್ನಾಟಕದ ಚರಿತ್ರೆ, ಪರಂಪರೆಯ ನಿಷ್ಪಕ್ಷಪಾತ ಅಧ್ಯಯನ ಸಾಧ್ಯವೇ? ದಕ್ಷಿಣ ಭಾರತೀಯರಿಲ್ಲದೇ ಒಟ್ಟು ಭಾರತದ ಇತಿಹಾಸ ಅಧ್ಯಯನಕ್ಕೆ ಒಳಪಡುವುದಾದರೂ ಹೇಗೆ? ಎಂದು ಎಚ್​ಡಿಕೆ ಪ್ರಶ್ನಿಸಿದ್ಧಾರೆ.

  • Share this:

    ಬೆಂಗಳೂರು(ಸೆ.16): ಭಾರತದ 12 ಸಾವಿರ ವರ್ಷಗಳ ಇತಿಹಾಸ, ಸಂಸ್ಕೃತಿ ಮತ್ತು ಜಗತ್ತಿನ ಇತರ ಸಂಸ್ಕೃತಿಗಳೊಂದಿಗಿನ ಸಂಪರ್ಕದ ಬಗ್ಗೆ ಅಧ್ಯಯನ ನಡೆಸಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ 16 ಸದಸ್ಯರ ತಜ್ಞರ ಸಮಿತಿ ರಚಿಸಿದೆ. ಈ ಬೆನ್ನಲ್ಲೀ ಕೇಂದ್ರ ಸರ್ಕಾರ ರಚಿಸಿರುವ ಸಮಿತಿ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಅಸಮಾಧಾನ ಹೊರಹಾಕಿದ್ದಾರೆ. ಈ ಸಂಬಂಧ ಟ್ವೀಟ್​ ಮಾಡಿರುವ ಎಚ್​​ಡಿಕೆ, ದೇಶದ 12 ಸಾವಿರ ವರ್ಷಗಳ ಇತಿಹಾಸ, ಸಂಸ್ಕೃತಿ ಮತ್ತು ಜಗತ್ತಿನ ಇತರ ಸಂಸ್ಕೃತಿಗಳೊಂದಿಗಿನ ಸಂಪರ್ಕದ ಬಗ್ಗೆ ಅಧ್ಯಯನ ನಡೆಸಲು ಕೇಂದ್ರ ಸರ್ಕಾರ 16 ಸದಸ್ಯರ ತಜ್ಞರ ಸಮಿತಿ ರಚಿಸಿದೆ. ಆದರೆ ಇದರಲ್ಲಿ ಕನ್ನಡಿಗರಾಗಲಿ, ದ್ರಾವಿಡ ಪರಂಪರೆಯ ಜ್ಞಾನವಿರುವ ದಕ್ಷಿಣ ಭಾರತೀಯರಾಗಲಿ, ಮಹಿಳೆಯರಾಗಲಿ ಇಲ್ಲವೇ ಇಲ್ಲವಾಗಿರುವುದು ದುರದೃಷ್ಟಕರ ಎಂದು ಬೇಸರ ವ್ಯಕ್ತಪಡಿಸಿದ್ಧಾರೆ. ಈ ಸಂಬಂಧ ಸರಣಿ ಟ್ವೀಟ್​​ ಮಾಡಿರುವ ಎಚ್​ಡಿಕೆ ಹೀಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿರುದ್ಧ ಕಿಡಿಕಾರಿದ್ದಾರೆ.



    ಕನ್ನಡಿಗ ಪ್ರತಿನಿಧಿಗಳೇ ಇಲ್ಲದೇ ಕರ್ನಾಟಕದ ಚರಿತ್ರೆ, ಪರಂಪರೆಯ ನಿಷ್ಪಕ್ಷಪಾತ ಅಧ್ಯಯನ ಸಾಧ್ಯವೇ? ದಕ್ಷಿಣ ಭಾರತೀಯರಿಲ್ಲದೇ ಒಟ್ಟು ಭಾರತದ ಇತಿಹಾಸ ಅಧ್ಯಯನಕ್ಕೆ ಒಳಪಡುವುದಾದರೂ ಹೇಗೆ? ಈ ದೇಶವನ್ನು ಅಂಬೆಗೆ ಹೋಲಿಸಿದವರು ನಾವು. ಹೆಣ್ಣನ್ನು ಪೂಜಿಸುವ ದೇಶದ ಸಂಸ್ಕೃತಿ ಅಧ್ಯಯನ ಮಾಡುವ ಸಮಿತಿಯಲ್ಲಿ ಮಹಿಳೆಗೆ ಸ್ಥಾನವೇ ಇಲ್ಲವಾಗಿದ್ದು ಹೇಗೆ? ಎಂದು ಕೇಂದ್ರಕ್ಕೆ ಎಚ್​​ಡಿಕೆ ಪ್ರಶ್ನಿಸಿದ್ದಾರೆ.


    ಇತಿಹಾಸ, ಸಂಸ್ಕೃತಿ ವಿಚಾರವಾಗಿ ಪೂರ್ವಾಗ್ರಹಗಳನ್ನು ಹೊಂದಿರುವಂತೆ ಕಾಣುವ, ಉತ್ತರ ಭಾರತೀಯರೇ ತುಂಬಿರುವ ಈ ಸಮಿತಿ ನಡೆಸುವ ಅಧ್ಯಯನದ ವಸ್ತುನಿಷ್ಠತೆ ಬಗ್ಗೆ ಅನುಮಾನಗಳು ದಟ್ಟವಾಗಿವೆ. ಸಮಿತಿಯ ಪುನಾರಚನೆ ಮಾಡುವುದು ಅತ್ಯಗತ್ಯ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕೂಡಲೇ ನಿರ್ಧಾರ ಕೈಗೊಳ್ಳಲಿ ಎಂದಿದ್ಧಾರೆ.


    ಇನ್ನು, ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್​​ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಯಾಗುತ್ತಿದೆ.

    ಇದನ್ನೂ ಓದಿ: ಬಾದಾಮಿ: ಹಳ್ಳಿ ಯುವತಿ ಪೊಲೀಸ್​ ಅಧಿಕಾರಿಯಾದ ರೋಚಕ ಕಥೆ

    Published by:Ganesh Nachikethu
    First published: