ನವದೆಹಲಿ(ಡಿ.01): ನಟಿ ಊರ್ಮಿಳಾ ಮಾತೋಂಡ್ಕರ್ ಕಾಂಗ್ರೆಸ್ ಪಕ್ಷದಿಂದ ಹೊರಬಂದ ಬಳಿಕ ಮತ್ತೆ ತಮ್ಮ ರಾಜಕೀಯ ಪಯಣವನ್ನು ಪ್ರಾರಂಭಿಸಿದ್ದಾರೆ. ಸಿನಿಮಾ ರಂಗದಿಂದ ರಾಜಕೀಯ ಕ್ಷೇತ್ರಕ್ಕೆ ಕಾಲಿಟ್ಟ ಊರ್ಮಿಳಾ ಇಂದು ಮಹಾರಾಷ್ಟ್ರದಲ್ಲಿ ಶಿವಸೇನಾ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. ಕಾಂಗ್ರೆಸ್ ಪಕ್ಷ ಬಿಟ್ಟ ಬಳಿಕ ಊರ್ಮಿಳಾ ಶಿವಸೇನೆ ಪಕ್ಷಕ್ಕೆ ಸೇರುತ್ತಿದ್ದಾರೆ. 46 ವರ್ಷದ ನಟಿ ಊರ್ಮಿಳಾ ಮಾಂತೋಡ್ಕರ್ ಇಂದು ಶಿವಸೇನೆ ಪಕ್ಷ ಸೇರಲಿದ್ದಾರೆ ಎಂದು ಪಕ್ಷದ ಹಿರಿಯ ನಾಯಕ ಹಾಗೂ ವಕ್ತಾರ ಸಂಜಯ್ ರಾವತ್ ತಿಳಿಸಿದ್ದಾರೆ.
ಊರ್ಮಿಳಾ 2019ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ನಿಂದ ಟಿಕೆಟ್ ಪಡೆದು ಮುಂಬೈ ದಕ್ಷಿಣ ಕ್ಷೇತ್ರದಲ್ಲಿ ಸ್ಪರ್ಧೆಗೆ ನಿಂತಿದ್ದರು. ಆದರೆ ಬಿಜೆಪಿ ಸ್ಪರ್ಧಿ ಗೋಪಾಲ್ ಶೆಟ್ಟಿ ವಿರುದ್ಧ ಸೋಲು ಅನುಭವಿಸಿದ್ದರು. ಇದಾದ ಬಳಿಕ ಊರ್ಮಿಳಾ ಸೆಪ್ಟೆಂಬರ್ ತಿಂಗಳಿನಲ್ಲಿ ಕಾಂಗ್ರೆಸ್ ಪಕ್ಷವನ್ನು ತೊರೆದಿದ್ದರು. ಇಂದು ಶಿವಸೇನಾ ಪಕ್ಷವನ್ನು ಸೇರಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಡಿ.1ರಂದು ಸಂಜೆ 4 ಗಂಟೆಗೆ ಊರ್ಮಿಳಾ ಸುದ್ದಿಗೋಷ್ಠಿ ನಡೆಸಿ, ಅವರ ಮುಂದಿನ ರಾಜಕೀಯ ನಿರ್ಧಾರವನ್ನು ತಿಳಿಸಲಿದ್ದಾರೆ.
ಉತ್ತರಾಖಂಡದ ಹರಿದ್ವಾರದಲ್ಲಿ ಲಘು ಭೂಕಂಪ; ರಿಕ್ಟರ್ ಮಾಪನದಲ್ಲಿ 3.9 ತೀವ್ರತೆ ದಾಖಲು!
ಊರ್ಮಿಳಾ ಮಾಂತೋಡ್ಕರ್ ನಾಳೆ ಶಿವಸೇನೆ ಸೇರುವ ಸಾಧ್ಯತೆ ಇದೆ. ಆಕೆ ಶಿವಸೈನಿಕ್. ಅವರು ಶಿವಸೇನೆ ಪಕ್ಷ ಸೇರುತ್ತಿರುವುದು ನಮಗೆ ಸಂತಸದ ವಿಷಯ. ಇವರ ಸೇರ್ಪಡೆ ಪಕ್ಷಕ್ಕೆ ಮತ್ತಷ್ಟು ಶಕ್ತಿ ತಂದುಕೊಡುತ್ತದೆ ಎಂದು ಸಂಜಯ್ ರಾವತ್ ನಿನ್ನೆ ಮಾಧ್ಯಮಗಳೊಂದಿಗೆ ಹೇಳಿದ್ದರು.
ಊರ್ಮಿಳಾ ಮುಂಬೈ ಹುಡುಗಿ. ಅವರು ಮುಂಬೈನಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮಾಡುವ ಇಚ್ಛೆ ಹೊಂದಿದ್ದಾರೆ. ಜನಪ್ರಿಯ ನಟಿಯಾಗಿದ್ದರಿಂದ ದೇಶಾದ್ಯಂತ ಅವರ ಮುಖ ಪರಿಚಯ ಇದೆ. ಅವರು ಕೇವಲ ಮರಾಠಿ ಭಾಷೆ ಮಾತ್ರವಲ್ಲದೇ, ಹಿಂದಿ ಮತ್ತು ಇಂಗ್ಲಿಷ್ ಭಾಷೆಯಲ್ಲಿ ನಿರರ್ಗಳವಾಗಿ ಮಾತನಾಡಬಲ್ಲರು. ಸರ್ಕಾರ ಕೊಟ್ಟ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿಭಾಯಿಸುತ್ತಾರೆ ಎಂಬ ಭರವಸೆ ನಮಗಿದೆ ಎಂದು ಎಂಎಲ್ಸಿ ಮನೀಶ ಕಾಯಂದೆ ಅಭಿಪ್ರಾಯಪಟ್ಟಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ