Arun Jaitley Health Updates: ಮಾಜಿ ಕೇಂದ್ರ ಸಚಿವ, ಮೋದಿ ಸರ್ಕಾರದ ಟ್ರಬಲ್​ ಶೂಟರ್​ ಅರುಣ್​ ಜೇಟ್ಲಿ ತೀವ್ರ ಅಸ್ವಸ್ಥ; ದೆಹಲಿ ಏಮ್ಸ್​ ಆಸ್ಪತ್ರೆಗೆ ದಾಖಲು

Arun Jaitley Health: 2019ರ ಜನವರಿಯಲ್ಲಿ ಜೇಟ್ಲಿ ಅಮೆರಿಕಾದಲ್ಲಿ ಎಡಗಾಲಿನಲ್ಲಿ ಆಗಿದ್ದ ಸಾಫ್ಟ್​ ಟಿಶ್ಯು ಕ್ಯಾನ್ಸರ್​ ಆಪರೇಷನ್​ಗೆ ಒಳಗಾಗಿದ್ದರು. ಮೋದಿ ಸರ್ಕಾರದ ಆರನೇ ಮತ್ತು ಕೊನೆಯ ಬಜೆಟ್​ ಮಂಡನೆ ಮಾಡಲೂ ಸಾಧ್ಯವಾಗದೇ ಪೀಯುಷ್​ ಗೋಯಲ್​ ಬಜೆಟ್​ ಮಂಡಿಸಿದ್ದರು.

Sharath Sharma Kalagaru | news18
Updated:August 10, 2019, 9:22 AM IST
Arun Jaitley Health Updates: ಮಾಜಿ ಕೇಂದ್ರ ಸಚಿವ, ಮೋದಿ ಸರ್ಕಾರದ ಟ್ರಬಲ್​ ಶೂಟರ್​ ಅರುಣ್​ ಜೇಟ್ಲಿ ತೀವ್ರ ಅಸ್ವಸ್ಥ; ದೆಹಲಿ ಏಮ್ಸ್​ ಆಸ್ಪತ್ರೆಗೆ ದಾಖಲು
ಹಣಕಾಸು ಸಚಿವ ಅರುಣ್ ಜೇಟ್ಲಿ.
  • News18
  • Last Updated: August 10, 2019, 9:22 AM IST
  • Share this:
ನವದೆಹಲಿ: ಮಾಜಿ ಕೇಂದ್ರ ಹಣಕಾಸು ಸಚಿವ ಅರುಣ್​ ಜೇಟ್ಲಿ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು ದೆಹಲಿಯ ಏಮ್ಸ್​ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ಸಹ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯದ ಬಗ್ಗೆ ವೈದ್ಯಾಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ. ಕಳೆದೊಂದು ವರ್ಷದಿಂದ ಜೇಟ್ಲಿ ಆರೋಗ್ಯ ಹದಗೆಟ್ಟಿತ್ತು. ಈ ಹಿನ್ನೆಲೆಯಲ್ಲಿ ಅವರು ಕೇಂದ್ರ ಸಚಿವ ಸ್ಥಾನವನ್ನು ತ್ಯಜಿಸಿದ್ದರು. 

ಮೂಲಗಳ ಪ್ರಕಾರ ಶುಕ್ರವಾರ ಮುಂಜಾನೆ ಏಮ್ಸ್​ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ಉಸಿರಾಟ ಸಮಸ್ಯೆಯಿಂದ ಅವರು ಬಳಲುತ್ತಿದ್ದಾರೆ. ಈ ಹಿಂದೆಯೂ ಅವರು ಏಮ್ಸ್​ನಲ್ಲಿ ಚಿಕಿತ್ಸೆ ಪಡೆದಿದ್ದರು.

ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್​ ಶಾ, ಲೋಕಸಭಾ ಸ್ಪೀಕರ್​ ಓಂ ಬಿರ್ಲಾ ಸೇರಿದಂತೆ ಹಲವು ರಾಜಕೀಯ ಮುಖಂಡರು ಈಗಾಗಲೇ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.

ಅರುಣ್​ ಜೇಟ್ಲಿ ಮೂಲತಃ ವಕೀಲರಾಗಿದ್ದು, ನರೇಂದ್ರ ಮೋದಿಉವರ ಸಚಿವ ಸಂಪುಟದಲ್ಲಿ ಪ್ರಭಾವಿ ನಾಯಕರಾಗಿದ್ದವರು. ಜತೆಗೆ ಮೋದಿ ಸರ್ಕಾರದ ಟ್ರಬಲ್​ ಶೂಟರ್​ ಎಂದೂ ಕರೆಸಿಕೊಂಡಿದ್ದಾರೆ.

Arun Jaitley Health Bulletin of AIMS Hospital
ಏಮ್ಸ್​ ಆಸ್ಪತ್ರೆಯ ಬಿಡುಗಡೆ ಮಾಡಿರುವ ಪ್ರಕಟಣೆ


2019ರ ಜನವರಿಯಲ್ಲಿ ಜೇಟ್ಲಿ ಅಮೆರಿಕಾದಲ್ಲಿ ಎಡಗಾಲಿನಲ್ಲಿ ಆಗಿದ್ದ ಸಾಫ್ಟ್​ ಟಿಶ್ಯು ಕ್ಯಾನ್ಸರ್​ ಆಪರೇಷನ್​ಗೆ ಒಳಗಾಗಿದ್ದರು. ಮೋದಿ ಸರ್ಕಾರದ ಆರನೇ ಮತ್ತು ಕೊನೆಯ ಬಜೆಟ್​ ಮಂಡನೆ ಮಾಡಲೂ ಸಾಧ್ಯವಾಗದೇ ಪೀಯುಷ್​ ಗೋಯಲ್​ ಬಜೆಟ್​ ಮಂಡಿಸಿದ್ದರು. ಮೋದಿ ನೇತೃತ್ವದ ಬಿಜೆಪಿ ಲೋಕಸಭಾ ಚುನಾವಣೆಯಲ್ಲಿ ಪ್ರಚಂಡ ಬಹುಮತದೊಂದಿಗೆ ಎರಡನೇ ಬಾರಿ ಅಧಿಕಾರಕ್ಕೆ ಬಂದಾಗ ಜೇಟ್ಲಿ ಅವರೇ ಸಚಿವ ಸಂಪುಟದಿಂದ ದೂರ ಉಳಿಯುವ ನಿರ್ಧಾರವನ್ನು ತಿಳಿಸಿದ್ದರು.
First published: August 9, 2019, 8:49 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading