ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಅವರು ಏಳು ತಿಂಗಳ ಬಂಧನದ ನಂತರ ಇದೀಗ ಬಿಡುಗಡೆಯಾಗಿದ್ದಾರೆ. ಕಾಶ್ಮೀರಕ್ಕೆ ಕಾಯ್ದೆ 370ರ ಅಡಿಯಲ್ಲಿ ನೀಡಿದ್ದ ವಿಶೇಷ ಸವಲತ್ತನ್ನು ಹಿಂಪಡೆದ ಬೆನ್ನಲ್ಲೇ ಫಾರೂಕ್ ಅಬ್ದುಲ್ಲಾರನ್ನು ಬಂಧಿಸಲಾಗಿತ್ತು. ಅದೇ ರೀತಿ ಕಾಶ್ಮೀರದ ಮಾಜಿ ಮುಖ್ಯಮಂತ್ರಿಗಳಾದ ಓಮರ್ ಅಬ್ದುಲ್ಲಾ, ಮೆಹಬೂಬಾ ಮುಫ್ತಿ ಸೇರಿದಂತೆ ಹಲವರು ಇನ್ನೂ ವಶದಲ್ಲಿದ್ದಾರೆ.
ಸಾರ್ವಜನಿಕ ಸುರಕ್ಷತಾ ಕಾಯ್ದೆಯಡಿ ಕಾಶ್ಮೀರ ರಾಜಕೀಯ ನಾಯಕರನ್ನು ವಶಕ್ಕೆ ಪಡೆಯಲಾಗಿತ್ತು. ಸಾಲು ಸಾಲು ಬಂಧನಗಳನ್ನು ಕೇಂದ್ರ ಸಮರ್ಥಿಸಿಕೊಂಡಿತ್ತು. ರಾಜಕೀಯ ನಾಯಕರನ್ನು ಬಿಡುಗಡೆ ಮಾಡಿದರೆ ಸಾರ್ವಜನಿಕರ ಸುರಕ್ಷತೆಗೆ ಧಕ್ಕೆಯಾಗಲಿದೆ ಮತ್ತು ಈ ನಾಯಕರು ಜನರನ್ನು ಧಂಗೆ ಏಳಿಸುವ ಸಾಧ್ಯತೆ ಇದೆ ಎಂಬ ಕಾರಣ ನೀಡಿ ಬಂಧಿಸಲಾಗಿತ್ತು.
ಓಮರ್ ಅಬ್ದುಲ್ಲಾ ತಂಗಿ ಬಂಧನ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಸುಪ್ರೀಂ ಕೋರ್ಟ್ ಅರ್ಜಿ ವಿಚಾರಣೆಯನ್ನು ಮುಂದೂಡಿದೆ. ಇನ್ನು ಕೆಲವೇ ದಿನಗಳಲ್ಲಿ ಮೆಹಬೂಬಾ ಮುಫ್ತಿ ಮತ್ತು ಓಮರ್ ಅಬ್ದುಲ್ಲಾ ಕೂಡ ಬಿಡುಗಡೆಯಾಗುವ ಸಾಧ್ಯತೆಯಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ