Pranab Mukherjee: ಪ್ರಣಬ್​ ಮುಖರ್ಜಿ ಆರೋಗ್ಯ ಸ್ಥಿರ; ಮಾಹಿತಿ ನೀಡಿದ ಮಗ ಅಭಿಜಿತ್​

ಬುಧವಾರ ಆಸ್ಪತ್ರೆಯ ವೈದ್ಯಾಧಿಕಾರಿಗಳು ಪ್ರಣಬ್​ ಆರೋಗ್ಯ ತುಂಬಾನೇ ಗಂಭೀರವಾಗಿದೆ ಎಂದು ಹೇಳಿದ್ದರು. ಈ ಬೆನ್ನಲ್ಲೇ ಅಭಿಜಿತ್​ ತಂದೆಯ ಆರೋಗ್ಯ ಸ್ಥಿರವಾಗಿರುವ ಬಗ್ಗೆ ಮಾಹಿತಿ ನೀಡಿದ್ದಾರೆ.

news18-kannada
Updated:August 13, 2020, 9:36 AM IST
Pranab Mukherjee: ಪ್ರಣಬ್​ ಮುಖರ್ಜಿ ಆರೋಗ್ಯ ಸ್ಥಿರ; ಮಾಹಿತಿ ನೀಡಿದ ಮಗ ಅಭಿಜಿತ್​
ಪ್ರಣಬ್ ಮುಖರ್ಜಿ
  • Share this:
ನವದೆಹಲಿ (ಆ.13): ತೀವ್ರ ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರನ್ನು ರಿಸರ್ಚ್ ಆಂಡ್ ರೆಫೆರೆಲ್ (ಆರ್ ಅಂಡ್ ಆರ್) ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಸದ್ಯ ಅವರಿಗೆ ಚಿಕಿತ್ಸೆ ಮುಂದುವರಿದಿದ್ದು, ಆರೋಗ್ಯದ ಸ್ಥಿರವಾಗಿದೆ ಎಂದು ಪ್ರಣಬ್ ಮಗ ಅಭಿಜಿತ್​ ಮುಖರ್ಜಿ ತಿಳಿಸಿದ್ದಾರೆ.

4 ವರ್ಷದ ಪ್ರಣಬ್ ಮುಖರ್ಜಿ ಅವರನ್ನು ಭಾರತೀಯ ಸೇನೆಯ ಈ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರ ಮಿದುಳಿನಲ್ಲಿ ರಕ್ತ ಹೆಪ್ಪುಗಟ್ಟಿ (Blood clot) ಸಮಸ್ಯೆ ಉದ್ಭವವಾಗಿತ್ತು. ತುರ್ತಾಗಿ ಮಿದುಳು ಶಸ್ತ್ರ ಚಿಕಿತ್ಸೆ ಮಾಡುವ ಮುನ್ನ ನಡೆಸಲಾಗಿದ್ದ ಕೊರೋನಾ ಪರೀಕ್ಷೆಯಲ್ಲಿ ಪಾಸಿಟಿವ್ ಬಂದಿತ್ತು. ಅದಾದ ಬಳಿಕ ಬ್ರೇನ್ ಸರ್ಜರಿ ಮಾಡಲಾಗಿತ್ತು.

ಈ ಬಗ್ಗೆ ಟ್ವೀಟ್​ ಮಾಡಿರುವ ಅಭಿಜಿತ್​, ನಿಮ್ಮೆಲ್ಲರ ಆಶೀರ್ವಾದದಿಂದ ನನ್ನ ತಂದೆಯ ಆರೋಗ್ಯ ಸ್ಥಿರವಾಗಿದೆ. ಅವರು ಬೇಗ ಗುಣಮುಖರಾಗಲು ನಿಮ್ಮ ಹಾರೈಕೆ ಮುಂದುವರಿಸಿ ಎಂದು ಕೋರಿದ್ದಾರೆ.

ಬುಧವಾರ ಆಸ್ಪತ್ರೆಯ ವೈದ್ಯಾಧಿಕಾರಿಗಳು ಪ್ರಣಬ್​ ಆರೋಗ್ಯ ತುಂಬಾನೇ ಗಂಭೀರವಾಗಿದೆ ಎಂದು ಹೇಳಿದ್ದರು. ಈ ಬೆನ್ನಲ್ಲೇ ಅಭಿಜಿತ್​ ತಂದೆಯ ಆರೋಗ್ಯ ಸ್ಥಿರವಾಗಿರುವ ಬಗ್ಗೆ ಮಾಹಿತಿ ನೀಡಿದ್ದಾರೆ.

ಬಂಗಾಳದಲ್ಲಿ 1935, ಡಿಸೆಂಬರ್ 11ರಂದು ಜನಿಸಿದ ಪ್ರಣಬ್ ಮುಖರ್ಜಿ ಕಾಂಗ್ರೆಸ್ ಮೂಲಕ ರಾಜಕೀಯ ಜೀವನ ಪ್ರಾರಂಭಿಸಿದರು. 2012ರಿಂದ 2017ರವರೆಗೆ ಭಾರತದ 13ನೇ ರಾಷ್ಟ್ರಪತಿಯಾಗಿ ಅತ್ಯುನ್ನತ ಹುದ್ದೆ ಅಲಂಕರಿಸಿದ್ದಾರೆ. ರಾಷ್ಟ್ರಪತಿಗಳಾಗುವ ಮುನ್ನ ಅವರು ವಿದೇಶಾಂಗ ಸಚಿವ, ರಕ್ಷಣಾ ಸಚಿವ ಮತ್ತು ಹಣಕಾಸು ಸಚಿವರಾಗಿಯೂ ಕೆಲಸ ಮಾಡಿದ್ದಾರೆ. ಅಪಾರ ರಾಜಕೀಯ ಅನುಭವ ಹೊಂದಿರುವ ಅವರು ರಾಷ್ಟ್ರಪತಿ ಅಧಿಕಾರ ಪೂರ್ಣಗೊಂಡ ಬಳಿಕ ಸಕ್ರಿಯ ರಾಜಕಾರಣದಿಂದ ದೂರವೇ ಉಳಿದಿದ್ದಾರೆ.
Published by: Rajesh Duggumane
First published: August 13, 2020, 8:47 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading