ಮಾಜಿ ರಾಷ್ಟ್ರಪತಿ ಪ್ರಣಬ್​ ಮುಖರ್ಜಿ ಆರೋಗ್ಯದಲ್ಲಿ ಸುಧಾರಣೆ ಇಲ್ಲ ಎಂದ ವೈದ್ಯರು

ಪ್ರಣಬ್​ ಮುಖರ್ಜಿ ವೆಂಟಿಲೇಟರ್​ ಸಹಾಯದಿಂದ ಉಸಿರಾಡುತ್ತಿದ್ದಾರೆ. ಅವರ ಆರೋಗ್ಯ ತೀವ್ರವಾಗಿ ಹದಗೆಟ್ಟಿದೆ. ನಾವು ಎಷ್ಟೇ ಪ್ರಯತ್ನಿಸದರೂ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿಲ್ಲ ಎಂದು ಸೇನಾ ಆಸ್ಪತ್ರೆ ವೈದ್ಯರು ಹೇಳಿದ್ದಾರೆ.

ಪ್ರಣಬ್ ಮುಖರ್ಜಿ

ಪ್ರಣಬ್ ಮುಖರ್ಜಿ

 • Share this:
  ನವದೆಹಲಿ (ಆ. 31): ಶ್ವಾಸಕೋಶದ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಆರೋಗ್ಯದಲ್ಲಿ ಯಾವುದೇ ಸುಧಾರಣೆ ಕಂಡುಬಂದಿಲ್ಲ. ಅವರ ಸ್ಥಿತಿ ದಿನ ಕಳೆದಂತೆ ಹದಗೆಡುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ.

  ಈ ಬಗ್ಗೆ ಸೇನಾ ಆಸ್ಪತ್ರೆ ಮಾಹಿತಿ ನೀಡಿದೆ. ಶ್ವಾಸಕೋಶದ ಸೋಂಕಿನಿಂದ ಪ್ರಣಬ್ ಮುಖರ್ಜಿ ಆ. 10ರಂದು ದೆಹಲಿಯ ಸೇನಾ ಸಂಶೋಧನೆ ಮತ್ತು ರೆಫರಲ್ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಅವರ ಮೂತ್ರಪಿಂಡದಲ್ಲೂ ಸಮಸ್ಯೆಯಾಗಿದೆ ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. 84 ವರ್ಷದ ಪ್ರಣಬ್ ಮುಖರ್ಜಿ ಅವರ ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿದ್ದರಿಂದ ಇತ್ತೀಚೆಗೆ ಸೇನಾ ಆಸ್ಪತ್ರೆಯಲ್ಲಿ ಅವರಿಗೆ ಆಪರೇಷನ್ ಮಾಡಲಾಗಿತ್ತು. ಅದಾದ ನಂತರವೂ ಅವರ ಆರೋಗ್ಯ ಸುಧಾರಿಸಿರಲಿಲ್ಲ.

  ಪ್ರಣಬ್​ ಮುಖರ್ಜಿ ವೆಂಟಿಲೇಟರ್​ ಸಹಾಯದಿಂದ ಉಸಿರಾಡುತ್ತಿದ್ದಾರೆ. ಅವರ ಆರೋಗ್ಯ ತೀವ್ರವಾಗಿ ಹದಗೆಟ್ಟಿದೆ. ನಾವು ಎಷ್ಟೇ ಪ್ರಯತ್ನಿಸದರೂ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿಲ್ಲ ಎಂದು ಸೇನಾ ಆಸ್ಪತ್ರೆ ವೈದ್ಯರು ಹೇಳಿದ್ದಾರೆ.

  ಬಂಗಾಳದಲ್ಲಿ 1935, ಡಿಸೆಂಬರ್ 11ರಂದು ಜನಿಸಿದ ಪ್ರಣಬ್ ಮುಖರ್ಜಿ ಕಾಂಗ್ರೆಸ್ ಮೂಲಕ ರಾಜಕೀಯ ಜೀವನ ಪ್ರಾರಂಭಿಸಿದರು. 2012ರಿಂದ 2017ರವರೆಗೆ ಭಾರತದ 13ನೇ ರಾಷ್ಟ್ರಪತಿಯಾಗಿ ಅತ್ಯುನ್ನತ ಹುದ್ದೆ ಅಲಂಕರಿಸಿದ್ದಾರೆ. ರಾಷ್ಟ್ರಪತಿಗಳಾಗುವ ಮುನ್ನ ಅವರು ವಿದೇಶಾಂಗ ಸಚಿವ, ರಕ್ಷಣಾ ಸಚಿವ ಮತ್ತು ಹಣಕಾಸು ಸಚಿವರಾಗಿಯೂ ಕೆಲಸ ಮಾಡಿದ್ದಾರೆ. ಅಪಾರ ರಾಜಕೀಯ ಅನುಭವ ಹೊಂದಿರುವ ಅವರು ರಾಷ್ಟ್ರಪತಿ ಅಧಿಕಾರ ಪೂರ್ಣಗೊಂಡ ಬಳಿಕ ಸಕ್ರಿಯ ರಾಜಕಾರಣದಿಂದ ದೂರವೇ ಉಳಿದಿದ್ದಾರೆ.
  Published by:Rajesh Duggumane
  First published: