• ಹೋಂ
  • »
  • ನ್ಯೂಸ್
  • »
  • ದೇಶ-ವಿದೇಶ
  • »
  • Rahul Gandhi: ಪ್ರಜಾಪ್ರತಿನಿಧಿ ಕಾಯ್ದೆ ಉಲ್ಲಂಘನೆಯಡಿ ರಾಹುಲ್ ಗಾಂಧಿ ಲೋಕಸಭಾ ಸದಸ್ಯ ಸ್ಥಾನದಿಂದ ಅನರ್ಹ!

Rahul Gandhi: ಪ್ರಜಾಪ್ರತಿನಿಧಿ ಕಾಯ್ದೆ ಉಲ್ಲಂಘನೆಯಡಿ ರಾಹುಲ್ ಗಾಂಧಿ ಲೋಕಸಭಾ ಸದಸ್ಯ ಸ್ಥಾನದಿಂದ ಅನರ್ಹ!

ರಾಹುಲ್ ಗಾಂಧಿ

ರಾಹುಲ್ ಗಾಂಧಿ

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತ್‌ನ ಸೂರತ್‌ ಕೋರ್ಟ್‌ ರಾಹುಲ್ ಗಾಂಧಿ ಅವರನ್ನು ದೋಷಿ ಎಂದು ತೀರ್ಪು ನೀಡಿದ ಹಿನ್ನೆಲೆಯಲ್ಲಿ ಲೋಕಸಭಾ ಸ್ಪೀಕರ್ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರನ್ನು ಲೋಕಸಭಾ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಿ ಆದೇಶ ಹೊರಡಿಸಿದ್ದಾರೆ.

ಮುಂದೆ ಓದಿ ...
  • News18 Kannada
  • 3-MIN READ
  • Last Updated :
  • New Delhi, India
  • Share this:

ನವ ದೆಹಲಿ: ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ (Rahul Gandhi) ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸುವ (Rahul Gandhi Disqualified) ಮೂಲಕ ಲೋಕಸಭಾ ಸ್ಪೀಕರ್ ಓಂ ಬಿರ್ಲಾ (Om Birla) ಆದೇಶ ಹೊರಡಿಸಿದ್ದಾರೆ. ರಾಷ್ಟ್ರ ರಾಜಕಾರಣದಲ್ಲಿ ಇದೊಂದು ಮಹತ್ವದ ಬೆಳಣಿಗೆಯಾಗಿದ್ದು, ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತ್‌ನ ಸೂರತ್‌ ಕೋರ್ಟ್‌ ರಾಹುಲ್ ಗಾಂಧಿ ಅವರನ್ನು ದೋಷಿ ಎಂದು ತೀರ್ಪು ನೀಡಿದ ಹಿನ್ನೆಲೆಯಲ್ಲಿ ಲೋಕಸಭಾ ಸ್ಪೀಕರ್ ಈ ತೀರ್ಮಾನ ಕೈಗೊಂಡಿದ್ದಾರೆ.


ಕೇರಳದ ವಯನಾಡ್‌ ಲೋಕಸಭಾ ಕ್ಷೇತ್ರದಿಂದ ಸಂಸದನಾಗಿ ಆಯ್ಕೆಯಾಗಿದ್ದ ರಾಹುಲ್ ಗಾಂಧಿ ಅವರು 2019ರಲ್ಲಿ ಸಾರ್ವಜನಿಕ ಸಮಾರಂಭದಲ್ಲಿ ಮಾತನಾಡುತ್ತಿದ್ದ ವೇಳೆ ‘ಹುಡುಕಿದರೆ ಇನ್ನೊಂದಷ್ಟು ಜನ ಮೋದಿಗಳು ಸಿಗುತ್ತಾರೆ. ನೀರವ್ ಮೋದಿ, ಲಲಿತ್ ಮೋದಿ, ನರೇಂದ್ರ ಮೋದಿ ಹೀಗೆ ಎಲ್ಲಾ ಕಳ್ಳರ ಹೆಸರು ಮೋದಿ ಅಂತಾನೆ ಬರುತ್ತೆ’ ಎಂದು ಹೇಳಿದ್ದರು. ರಾಹುಲ್ ಗಾಂಧಿ ಹೇಳಿಕೆ ವಿರುದ್ಧ ಗುಜರಾತ್‌ನಲ್ಲಿ ಪ್ರಕರಣವನ್ನೂ ದಾಖಲಿಸಲಾಗಿತ್ತು.


ಇದನ್ನೂ ಓದಿ: Rahul Gandhi: ಭಾರತದ ಗೌರವ ಕಾಪಾಡೋದನ್ನ ಇಂದಿರಾ ಗಾಂಧಿಯಿಂದ ಕಲಿಯಿರಿ! ರಾಹುಲ್ ಗಾಂಧಿಗೆ ವಿದೇಶಿ ಪತ್ರಕರ್ತನಿಂದ ಕ್ಲಾಸ್!


ಈ ವಿಚಾರಕ್ಕೆ ಸಂಬಂಧಿಸಿದಂತೆ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿ ಅವರಿಗೆ ಗುಜರಾತ್‌ನ ಸೂರತ್ ನ್ಯಾಯಾಲಯ ಗುರುವಾರ ಎರಡು ವರ್ಷಗಳ ಕಾಲ ಜೈಲು ಶಿಕ್ಷೆಯನ್ನು ವಿಧಿಸಿ ಆದೇಶ ಪ್ರಕಟಿಸಿತ್ತು. ಅಲ್ಲದೇ, ಐಪಿಸಿ ಸೆಕ್ಷನ್ 499 ಮತ್ತು 500 ರ ಅಡಿ ರಾಹುಲ್ ಗಾಂಧಿಯನ್ನು ತಪ್ಪಿತಸ್ಥರೆಂದು ಪರಿಗಣಿಸಿದ ನ್ಯಾಯಾಲಯ ಅವರಿಗೆ ಜಾಮೀನು ನೀಡಿದ್ದು, ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಲು 30 ದಿನಗಳವರೆಗೆ ಶಿಕ್ಷೆಯನ್ನು ಅಮಾನತುಗೊಳಿಸಿದೆ.


ಇನ್ನೊಂದೆಡೆ ರಾಹುಲ್ ಗಾಂಧಿ ಅವರನ್ನು ಲೋಕಸಭಾ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಿರುವ ಬೆನ್ನಲ್ಲೇ ಕಾಂಗ್ರೆಸ್‌ ನಾಯಕರು ವ್ಯಾಪಕ ವಿರೋಧ ವ್ಯಕ್ತಪಡಿಸಿದ್ದು, ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: Rahul Gandhi: ರಷ್ಯಾದಂತೆ ಚೀನಾ ಭಾರತದ ಮೇಲೆ ದಾಳಿ ಮಾಡಬಹುದು! ಕಮಲ್ ಹಾಸನ್​ ಇಂಟರ್​ ವ್ಯೂನಲ್ಲಿ ರಾಹುಲ್ ಗಾಂಧಿ ಆತಂಕದ ಮಾತು


ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್‌ ಮುಖಂಡ ಕೆಸಿ ವೇಣುಗೋಪಾಲ್, ‘ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಅದಾನಿ ವ್ಯವಹಾರದ ಬಗ್ಗೆ ಸಂಸತ್‌ನಲ್ಲಿ ಪ್ರಶ್ನೆ ಎತ್ತಿದ ದಿನವೇ ಅವರ ಧ್ವನಿಯನ್ನು ಹತ್ತಿಕ್ಕುವ ಷಡ್ಯಂತ್ರ ಮಾಡಲಾಗಿತ್ತು. ಇದು ಬಿಜೆಪಿ ಸರ್ಕಾರದ ಸರ್ವಾಧಿಕಾರಿ ಮತ್ತು ಪ್ರಜಾಪ್ರಭುತ್ವ ವಿರೋಧಿ ನಡೆಯ ಸ್ಪಷ್ಟ ನಿದರ್ಶನ ಎಂದು ಕಿಡಿಕಾರಿದ್ದಾರೆ.



ಸಂಜೆ 5 ಗಂಟೆಗೆ ಎಐಸಿಸಿ ಸಭೆ


ಇನ್ನು ರಾಹುಲ್ ಗಾಂಧಿ ಅವರನ್ನು ಅನರ್ಹಗೊಳಿಸಿದ ಬೆನ್ನಲ್ಲೇ ಕಾಂಗ್ರೆಸ್‌ ಅಲರ್ಟ್ ಆಗಿದ್ದು, ಅನರ್ಹತೆಯ ವಿರುದ್ಧ ಕಾನೂನು ಸಮರ ಆರಂಭಿಸಲು ನಿರ್ಧಾರ ಮಾಡಿದೆ. ಇದಕ್ಕೆ ಸಂಬಂಧಿಸಿಂತೆ ಇಂದು ಸಂಜೆ 5 ಗಂಟೆಗೆ ಸರಿಯಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಎಐಸಿಸಿಸಿ ಸ್ಟೀರಿಂಗ್ ಕಮಿಟಿ ಸಭೆ ನಡೆಯಲಿದೆ. ರಾಹುಲ್ ಗಾಂಧಿ ಅವರನ್ನು ಅಮಾನತುಗೊಳಿಸಿದ್ದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷದ ಮುಂದಿನ ನಡೆ ಏನು? ಇದರ ವಿರುದ್ಧ ಯಾವ ರೀತಿ ಕಾನೂನು ಸಮರ ಆರಂಭಿಸಬಹುದು ಮುಂತಾದ ವಿಚಾರಗಳಿಗೆ ಸಂಬಂಧಿಸಿದಂತೆ ತುರ್ತು ಸಭೆಯಲ್ಲಿ ಚರ್ಚೆ ನಡೆಯಲಿದೆ ಎಂದು ತಿಳಿದು ಬಂದಿದೆ.


ಇದನ್ನೂ ಓದಿ: Congress: ಸಿದ್ದರಾಮಯ್ಯ ನಿರ್ಧಾರ ಹಿಂದಿದ್ಯಾ ರಾಹುಲ್ ಗಾಂಧಿ ಸಲಹೆ? ರಾಜ್ಯ ರಾಜಕಾರಣದಲ್ಲಿ ಬಿಗ್ ಟ್ವಿಸ್ಟ್

First published: