ನವದೆಹಲಿ (ಅ. 13): ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ (Former Prime Minister Manmohan Singh) ಅಸ್ವಸ್ಥರಾಗಿದ್ದು, ಅವರನ್ನು ದೆಹಲಿ ಏಮ್ಸ್ (delhi AIIMS) ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮೂಲಗಳ ಪ್ರಕಾರ 88 ವರ್ಷದ ಮನಮೋಹನ್ ಸಿಂಗ್ ಅವರು ಜ್ವರದಿಂದ ಬಳಲುತ್ತಿದ್ದು, ಅವರಲ್ಲಿ ವೀಕ್ನೆಸ್ ಹೆಚ್ಚಾಗಿದೆ. ಈ ಹಿನ್ನಲೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದೆ. ತಜ್ಞರ ತಪಾಸಣೆ ನಡೆಯುತ್ತಿದ್ದು, ಅವರ ಆರೋಗ್ಯ ಸ್ಥಿರವಾಗಿದೆ. ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಏಮ್ಸ್ ವೈದ್ಯರು ತಿಳಿಸಿದ್ದಾರೆ ಎಂದು ಟ್ರಿಬ್ಯೂನ್ ವರದಿ ಮಾಡಿದೆ.
ಈ ವರ್ಷದ ಆರಂಭದಲ್ಲೂ ಅಂದರೆ ಕಳೆದ ಏಪ್ರಿಲ್ನಲ್ಲೂ ಕೂಡ ಮನಮೋಹನ ಸಿಂಗ್ ಅವರು ಕೋವಿಡ್ 19 ಸೋಂಕಿಗೆ ತುತ್ತಾಗಿದ್ದರು. ಸೋಂಕಿನ ಹಿನ್ನಲೆ ಆಸ್ಪತ್ರೆಗೆ ದಾಖಲಾಗಿದ್ದ ಅವರು ಬಳಿಕ ಗುಣಮುಖರಾಗಿ ಬಿಡುಗಡೆ ಹೊಂದಿದ್ದರು.
ಪ್ರಸ್ತುತ ಕಾಂಗ್ರೆಸ್ನ ರಾಜ್ಯಸಭಾ ಸಂಸದರಾಗಿದ್ದಾರೆ. ಉತ್ತಮ ಆರ್ಥಿಕ ತಜ್ಞರಾಗಿರುವ ಅವರು, 2004 ರಿಂದ 2014ರವರೆಗೆ ಹತ್ತು ವರ್ಷಗಳ ಕಾಲ ದೇಶದ ಪ್ರಧಾನ ಮಂತ್ರಿಯಾಗಿ ಅವರು ಸೇವೆ ಸಲ್ಲಿಸಿದರು.
Published by:Seema R
First published:
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ