HOME » NEWS » National-international » FOUR KILLED 11 MISSING AS HEAVY RAINS WASH AWAY HOUSES IN UTTARAKHAND LG

ಉತ್ತರಾಖಂಡದಲ್ಲಿ ಮಳೆಯ ಆರ್ಭಟಕ್ಕೆ ಕೊಚ್ಚಿ ಹೋದ ಮನೆಗಳು; ನಾಲ್ವರು ಸಾವು, ಕಣ್ಮರೆಯಾದ 11 ಮಂದಿ

ಇನ್ನು ಮುಂಜಾಗ್ರತಾ ಕ್ರಮವಾಗಿ ತಗ್ಗು ಪ್ರದೇಶದ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಗೆ ರಸ್ತೆಗಳೆಲ್ಲವೂ ನದಿಯಂತಾಗಿದ್ದು, ಸಂಚಾರ ವ್ಯವಸ್ಥೆ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಜಿಲ್ಲೆಯ ಮುಖ್ಯ   ರಸ್ತೆಗಳಲ್ಲಿ ನೀರು ತುಂಬಿ ಹರಿಯುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

news18-kannada
Updated:July 20, 2020, 3:02 PM IST
ಉತ್ತರಾಖಂಡದಲ್ಲಿ ಮಳೆಯ ಆರ್ಭಟಕ್ಕೆ ಕೊಚ್ಚಿ ಹೋದ ಮನೆಗಳು; ನಾಲ್ವರು ಸಾವು, ಕಣ್ಮರೆಯಾದ 11 ಮಂದಿ
ಸಾಂದರ್ಭಿಕ ಚಿತ್ರ
  • Share this:
ಉತ್ತರಾಖಂಡ(ಜು.20): ಉತ್ತರಾಖಂಡ ರಾಜ್ಯದಲ್ಲಿ ಮಳೆಯ ಆರ್ಭಟ ಮುಂದುವರೆದಿದೆ.  ಅಲ್ಲಿನ ಪಿತೋರ್​ಗರ್​ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಗೈಲಾ ಗ್ರಾಮದಲ್ಲಿ ಪ್ರವಾಹ ಸ್ಥಿತಿ ನಿರ್ಮಾಣವಾಗಿದೆ. ಇಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಮನೆಗಳು ಕೊಚ್ಚಿ ಹೋಗಿವೆ. ಈ ಪರಿಣಾಮ ಮೂರು ಮಂದಿ ಸಾವನ್ನಪ್ಪಿದ್ದು, 5 ಜನರು ಗಾಯಗೊಂಡಿದ್ದಾರೆ.

ಪಕ್ಕದ ತಂಗಾ ಗ್ರಾಮದಲ್ಲಿ ಭಾರೀ ಮಳೆಗೆ ಓರ್ವ ಮೃತಪಟ್ಟಿದ್ದರೆ, ಸುಮಾರು 11 ಮಂದಿ ಕಣ್ಮರೆಯಾಗಿದ್ದಾರೆ. ಗೋರಿ ನದಿಯು ಪ್ರವಾಹ ಮಟ್ಟ ಮೀರಿ ಹರಿಯುತ್ತಿದ್ದು, ಇದರ ಪ್ರಹಾರಕ್ಕೆ ಮನೆಗಳು ಕೊಚ್ಚಿಹೋಗಿವೆ. ಅದೃಷ್ಟವಶಾತ್ ಇಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನು ಮುಂಜಾಗ್ರತಾ ಕ್ರಮವಾಗಿ ತಗ್ಗು ಪ್ರದೇಶದ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಗೆ ರಸ್ತೆಗಳೆಲ್ಲವೂ ನದಿಯಂತಾಗಿದ್ದು, ಸಂಚಾರ ವ್ಯವಸ್ಥೆ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಜಿಲ್ಲೆಯ ಮುಖ್ಯ   ರಸ್ತೆಗಳಲ್ಲಿ ನೀರು ತುಂಬಿ ಹರಿಯುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇಂದಿನಿಂದ ಜಾರಿಯಾಗಲಿದೆ ಕೇಂದ್ರದ ನೂತನ ಗ್ರಾಹಕರ ರಕ್ಷಣಾ ಕಾಯ್ದೆ 2019; ಇಲ್ಲಿದೆ ಕಾಯ್ದೆಯ ಸಂಪೂರ್ಣ ಮಾಹಿತಿ

ಪ್ರವಾಹ ಸಂತ್ರಸ್ತರಿಗೆ ಪರಿಹಾರವಾಗಿ 20 ಕೆ.ಜಿ ದಿನಸಿ ಹಾಗೂ 1.19 ಲಕ್ಷ ಮೊತ್ತದಲ್ಲಿ ಇನ್ನಿತರೆ ಅಗತ್ಯ ವಸ್ತುಗಳನ್ನುನೀಡಲಾಗಿದೆ. ಅಧಿಕಾರಿಗಳ ತಂಡವು ಪ್ರವಾಹ ಪೀಡಿತ ಸ್ಥಳಗಳಿಗೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

ತಾವಘಾಟರ್ ನಿಂದ ಲಿಪುಲೇಖ್​ಗೆ ಸಂಪರ್ಕ ಕಲ್ಪಿಸುವ ರಸ್ತೆಯು ಭಾರೀ ಮಳೆಗೆ ಸಂಪೂರ್ಣ ಬಂದ್ ಆಗಿದೆ. ಇನ್ನು ಜೌಲ್ಜುಬಿ-ಮುನ್ಸಿಯಾರಿ-ಥಾಲ್​ಗೆ ಸಂಪರ್ಕ ಕಲ್ಪಿಸುವ ರಸ್ತೆಗಳು ಸಹ ಜಲಾವೃತಗೊಂಡಿದ್ದು, ಸಂಚಾರ ವ್ಯವಸ್ಥೆಯನ್ನು ಬಂದ್ ಮಾಡಲಾಗಿದೆ.
Published by: Latha CG
First published: July 20, 2020, 3:00 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories