ಅರುಣಾಚಲ ಪ್ರದೇಶದಲ್ಲಿ ಭೂಕುಸಿತ; 8 ತಿಂಗಳ ಮಗು ಸೇರಿ ಒಂದೇ ಕುಟುಂಬದ ನಾಲ್ವರು ಜೀವಂತ ಸಮಾಧಿ

ಜೊತೆಗೆ ಘಟನೆಯಲ್ಲಿ ಸಾವನ್ನಪ್ಪಿದ ಕುಟುಂಬಸ್ಥರಿಗೆ 4 ಲಕ್ಷ ಪರಿಹಾರ ಘೋಷಿಸಿದ್ದಾರೆ. ಕಳೆದೆರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಭೂ ಕುಸಿತವಾಗುತ್ತಿದೆ. ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸಿಎಂ ಆತಂಕ ವ್ಯಕ್ತಪಡಿಸಿದ್ದಾರೆ.

news18-kannada
Updated:July 10, 2020, 5:13 PM IST
ಅರುಣಾಚಲ ಪ್ರದೇಶದಲ್ಲಿ ಭೂಕುಸಿತ; 8 ತಿಂಗಳ ಮಗು ಸೇರಿ ಒಂದೇ ಕುಟುಂಬದ ನಾಲ್ವರು ಜೀವಂತ ಸಮಾಧಿ
ಸಾಂದರ್ಭಿಕ ಚಿತ್ರ(ಪಿಟಿಐ ಫೈಲ್​ ಫೋಟೋ)
  • Share this:
ಅರುಣಾಚಲಪ್ರದೇಶ(ಜು.10): ಮಳೆರಾಯನ ಆರ್ಭಟಕ್ಕೆ ಉತ್ತರ ಭಾರತದ ಕೆಲ ರಾಜ್ಯಗಳು ಅಕ್ಷರಶಃ ನಲುಗಿ ಹೋಗಿವೆ. ಅರುಣಾಚಲ ಪ್ರದೇಶದಲ್ಲಿ ಹಲವು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಲೇ ಇದೆ. ಹೀಗಾಗಿ ಅಲ್ಲಿ ಭೂಕುಸಿತಗಳು ಸಂಭವಿಸುತ್ತಿವೆ. ನಿರಂತರ ಮಳೆ ಮತ್ತು ಭೂಕುಸಿತದಿಂದಾಗಿ ಅಲ್ಲೊಂದು ದುರಂತವೂ ನಡೆದು ಹೋಗಿದೆ.

ಇಂದು ಮುಂಜಾನೆ 2.30ರ ಸಮಯದಲ್ಲಿ ಸಂಭವಿಸಿದ ಭೂ ಕುಸಿತದಿಂದಾಗಿ 8 ತಿಂಗಳ ಕಂದಮ್ಮ ಸೇರಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಘಟನೆ ಪಪುಂಪರೆ ಜಿಲ್ಲೆಯ ತಿಗ್ದೋ ಗ್ರಾಮದಲ್ಲಿ ನಡೆದಿದೆ. ಈ ಗ್ರಾಮ ಅರುಣಾಚಲ ಪ್ರದೇಶ ರಾಜಧಾನಿ ಇಟಾನಗರದ ಸಮೀಪದಲ್ಲಿದೆ.

ಕುಟುಂಬದ ನಾಲ್ವರು ಮಲಗಿದ್ದಲ್ಲಿಯೇ ಜೀವಂತ ಸಮಾಧಿಯಾಗಿದ್ದಾರೆ. ವಿಷಯ ತಿಳಿದ ಬಳಿಕ ಸ್ಥಳಕ್ಕಾಗಮಿಸಿದ ಪೊಲೀಸರು ಮತ್ತು ರಕ್ಷಣಾ ಸಿಬ್ಬಂದಿ ಮಣ್ಣಿನಡಿ ಸಿಲುಕಿದ್ದ ಮೃತದೇಹಗಳನ್ನು ಹೊರಗೆ ತೆಗೆದಿದ್ದಾರೆ.

ಕೊರೋನಾ ತಡೆಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಸೆಲ್ಫ್​ ಲಾಕ್​ಡೌನ್; ಮಧ್ಯಾಹ್ನದ ಬಳಿಕ ಅಂಗಡಿ-ಮುಂಗಟ್ಟು ಬಂದ್

ಸಿಎಂ ಪೇಮ ಖಂಡು ಈ ದುರಂತ ಕುರಿತಾಗಿ ವಿಷಾದ ವ್ಯಕ್ತಪಡಿಸಿದ್ದಾರೆ. ಇಂದು ಮುಂಜಾನೆ ತಿಗ್ದೋ ಗ್ರಾಮದಲ್ಲಿ ಭೂ ಕುಸಿತದಿಂದಾಗಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿರುವುದು ನಿಜಕ್ಕೂ ವಿಷಾದನೀಯ ಹಾಗೂ ದುರಂತ ಎಂದು ಅರುಣಾಚಲ ಪ್ರದೇಶ ಸಿಎಂ ಟ್ವೀಟ್ ಮಾಡಿದ್ದಾರೆ.

ಜೊತೆಗೆ ಘಟನೆಯಲ್ಲಿ ಸಾವನ್ನಪ್ಪಿದ ಕುಟುಂಬಸ್ಥರಿಗೆ 4 ಲಕ್ಷ ಪರಿಹಾರ ಘೋಷಿಸಿದ್ದಾರೆ. ಕಳೆದೆರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಭೂ ಕುಸಿತವಾಗುತ್ತಿದೆ. ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸಿಎಂ ಆತಂಕ ವ್ಯಕ್ತಪಡಿಸಿದ್ದಾರೆ.
ಭಾರತೀಯ ಹವಾಮಾನ ಇಲಾಖೆಯ ಪ್ರಕಾರ ಮುಂದಿನ ಕೆಲ ದಿನಗಳಲ್ಲಿ ರಾಜ್ಯಾದ್ಯಂತ ಇನ್ನೂ ಅಧಿಕ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಹೀಗಾಗಿ ಮುನ್ನೆಚ್ಚರಿಕೆಯಿಂದ ಇರಿ ಹಾಗೂ ಅಪಾಯ ಪ್ರದೇಶಗಳಿಂದ ದೂರವಿರಿ ಎಂದು ಸಾರ್ವಜನಿಕರಲ್ಲಿ ಸಿಎಂ ಮನವಿ ಮಾಡಿದ್ದಾರೆ.
Published by: Latha CG
First published: July 10, 2020, 5:13 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading