HOME » NEWS » National-international » FOUR MILITANTS KILLED IN ENCOUNTER WITH SECURITY FORCES IN SHOPIAN RH

ಕಾಶ್ಮೀರದಲ್ಲಿ ಗುಂಡಿನ ಚಕಮಕಿ; ನಾಲ್ವರು ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಸಿಬ್ಬಂದಿ

ಕಳೆದ 24 ಗಂಟೆಯಲ್ಲಿ ಶೋಪೆನ್​ ಜಿಲ್ಲೆಯಲ್ಲಿ ನಡೆದ ಎರಡನೇ ಎನ್​ಕೌಂಟರ್ ಇದಾಗಿದೆ. ಭಾನುವಾರ ನಡೆದ ಗುಂಡಿನ ಚಕಮಕಿಯಲ್ಲಿ ಹಿಜ್ಬುಲ್ ಮುಜಾಹಿದ್ದಿನ್ ಸಂಘಟನೆಯ ಐವರು ಉಗ್ರರನ್ನು ಭದ್ರತಾ ಸಿಬ್ಬಂದಿ ಹೊಡೆದುರುಳಿಸಿದ್ದರು.

news18-kannada
Updated:June 8, 2020, 9:50 AM IST
ಕಾಶ್ಮೀರದಲ್ಲಿ ಗುಂಡಿನ ಚಕಮಕಿ; ನಾಲ್ವರು ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಸಿಬ್ಬಂದಿ
ಸಾಂದರ್ಭಿಕ ಚಿತ್ರ
  • Share this:
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಶೋಪೆನ್​ ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದ್ದು, ನಾಲ್ವರು ಉಗ್ರರನ್ನು ಭದ್ರತಾ ಸಿಬ್ಬಂದಿ ಹೊಡೆದುರುಳಿಸಿದ್ದಾರೆ.

ದಕ್ಷಿಣ ಕಾಶ್ಮೀರದ ಪಿಂಜೋರಾ ಭಾಗದಲ್ಲಿ ಉಗ್ರರು ಇದ್ದಾರೆ ಎಂಬ ಮಾಹಿತಿ ಪಡೆದ ಭದ್ರತಾ ಸಿಬ್ಬಂದಿ ಬೆಳಗ್ಗೆಯೇ ಪತ್ತೆ ಕಾರ್ಯ ಆರಂಭಿಸಿದರು. ಈ ವೇಳೆ ಉಗ್ರರು ಭದ್ರತಾ ಸಿಬ್ಬಂದಿ ಮೇಲೆ ಗುಂಡು ಹಾರಿಸಿದ್ದಾರೆ. ಅದಕ್ಕೆ ಪ್ರತಿಯಾಗಿ ಭದ್ರತಾ ಸಿಬ್ಬಂದಿ ಕೂಡ ಗುಂಡು ಹಾರಿಸಿ, ನಾಲ್ವರು ಉಗ್ರರನ್ನು ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಗುಂಡಿಗೆ ಬಲಿಯಾದ ಉಗ್ರರು ಯಾವ ಗುಂಪಿಗೆ ಸೇರಿದವರು ಅಥವಾ ಅವರು ಯಾರು ಎಂಬುದು ಇನ್ನು ಗುರುತು ಸಿಕ್ಕಿಲ್ಲ.

ಕಳೆದ 24 ಗಂಟೆಯಲ್ಲಿ ಶೋಪೆನ್​ ಜಿಲ್ಲೆಯಲ್ಲಿ ನಡೆದ ಎರಡನೇ ಎನ್​ಕೌಂಟರ್ ಇದಾಗಿದೆ. ಭಾನುವಾರ ನಡೆದ ಗುಂಡಿನ ಚಕಮಕಿಯಲ್ಲಿ ಹಿಜ್ಬುಲ್ ಮುಜಾಹಿದ್ದಿನ್ ಸಂಘಟನೆಯ ಐವರು ಉಗ್ರರನ್ನು ಭದ್ರತಾ ಸಿಬ್ಬಂದಿ ಹೊಡೆದುರುಳಿಸಿದ್ದರು.

ಇದನ್ನು ಓದಿ: Chiranjeevi Sarja Funeral: ಕನಕಪುರ ರಸ್ತೆಯಲ್ಲಿರುವ ಧ್ರುವ ಸರ್ಜಾ ಫಾರ್ಮ್​ ಹೌಸ್​ನಲ್ಲಿ ಇಂದು ಚಿರು ಸರ್ಜಾ ಅಂತ್ಯಕ್ರಿಯೆ
First published: June 8, 2020, 9:50 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories