Delhiಯಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ; ಅಪರಾಧ ತನಿಖಾ ತಂಡದ ಮೇಲೆ ಕಲ್ಲು ತೂರಾಟ

ಕಾನೂನು ಕೈಗೆ ಎತ್ತಿಕೊಂಡ ಆರೋಪದ ಮೇಲೆ ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ. ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಘಟನೆ ಚಿತ್ರಣ(ಚಿತ್ರ ಕೃಪೆ: ಎಎನ್​ಐ)

ಘಟನೆ ಚಿತ್ರಣ(ಚಿತ್ರ ಕೃಪೆ: ಎಎನ್​ಐ)

 • Share this:
  ದೆಹಲಿಯ ಜಹಾಂಗೀರಪುರಿಯಲ್ಲಿ (Jahangirpuri) ಸೋಮವಾರ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಉದ್ರಿಕ್ತ ಗುಂಪು  ಇಂದು ಪ್ರಕರಣ ತನಿಖೆ ನಡೆಸುತ್ತಿದ್ದ ತನಿಖಾ ತಂಡದ (Crime Branch Team) ಸದಸ್ಯರ ಮೇಲೆ ಕಲ್ಲು  ತೂರಾಟ ನಡೆಸಿರುವ ಘಟನೆ ವರದಿಯಾಗಿದೆ. ಈ ವೇಳೆ  ವ್ಯಕ್ತಿಯೊಬ್ಬ ಗುಂಡು ಹಾರಿಸಿರುವುದು ವರದಿ ಆಗಿದೆ. ಪರಿಸ್ಥಿತಿ ನಿಯಂತ್ರಣಕ್ಕೆ ಪೊಲೀಸರು ಮುಂದಾಗಿದ್ದಾರೆ. ಶನಿವಾರ ಸಂಜೆ ಹನುಮ ಜಯಂತಿ ಮೆರವಣಿಗೆಯ ಸಂದರ್ಭದಲ್ಲಿ ಈ ಪ್ರದೇಶದಲ್ಲಿ ಕೋಮು ಘರ್ಷಣೆ ಸಂಭವಿಸಿತು. ಈ ಘಟನೆ ಸಂಬಂಧ 23ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶನಿವಾರದ ಘರ್ಷಣೆಗೆ ಸಂಬಂಧಿಸಿದಂತೆ ಮಹಿಳೆಯೊಬ್ಬರನ್ನು ವಿಚಾರಣೆಗೆ ಕರೆದೊಯ್ಯಲಾಗಿದೆ. ಈ ವೇಳೆ ಸುಮಾರು 50 ಮಹಿಳೆಯರು  ದೆಹಲಿಯ ಜಹಾಂಗೀರ್ಪುರಿಯಲ್ಲಿ ಪ್ರತಿಭಟನೆ ನಡೆಸಿದ್ದು, ಕಲ್ಲುಗಳನ್ನು ಎಸೆಯಲು ಪ್ರಾರಂಭಿಸಿದರು ಎಂದು ಇಂಡಿಯಾ ಟುಡೇ ವರದಿ ಮಾಡಿದೆ.

  ವಿಚಾರಣೆಗೆ ತೆರಳಿದ್ದ ತನಿಖಾ ತಂಡ
  ಆರೋಪಿ ಸೋನು ಅವರ ಹೆಂಡತಿ ಶನಿವಾರದ ಘರ್ಷಣೆಯ ವೇಳೆ ಗುಂಡು ಹಾರಿಸಿದ್ದರು, ಈ ಸಂಬಂಧ ಪೊಲೀಸ್ ವಿಚಾರಣೆಗೆ ಮಹಿಳೆಯನ್ನು ಕರೆದೊಯ್ಯಲಾಗಿದ್ದು, ಇದಾದ ಬಳಿಕ ಅನೇಕ ಮನೆಗಳ ಮೇಲೆ ಕಲ್ಲು ತೂರಾಟ ನಡೆಸಿರುವ ಘಟನೆ ನಡೆದಿದೆ.
  ಘಟನೆ ಸಂಬಂಧ ಪ್ರತಿಕ್ರಿಯಿಸಿರುವ ವಾಯುವ್ಯ ದೆಹಲಿ ಡಿಎಸ್ಪಿ ,  ಸೋನು ಅವರ ಕುಟುಂಬ ಸದಸ್ಯರು ತಲೆ ಮರೆಸಿಕೊಂಡಿದ್ದು, ಅವರಿಗಾಗಿ ಹುಡುಕಲು ತನಿಖಾ ತಂಡ ಮನೆಗೆ ಹೋದಾಗ ಪೊಲೀಸರ ಮೇಲೆ ಎರಡು ಕಲ್ಲು ತೂರಿದರು. ಕಾನೂನು ಕೈಗೆ ಎತ್ತಿಕೊಂಡ ಆರೋಪದ ಮೇಲೆ ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ. ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

  ಶನಿವಾರ ಹಿಂಸಾಚಾರ ನಡೆದ ಸ್ಥಳದಿಂದ 100 ಮೀಟರ್ ದೂರದಲ್ಲಿ ಘಟನೆ ನಡೆದಿದೆ. ಭಾರತೀಯ ಕೇಂದ್ರೀಯ ಮೀಸಲು ಪೊಲೀಸ್ ಪಡೆಯ ಕ್ಷಿಪ್ರ ಕಾರ್ಯಾಚರಣೆ ಪಡೆ ಸ್ಥಳದಲ್ಲಿ ಮಾನವ ಸರಪಳಿ ರಚಿಸಿದೆ.

  ಘಟನೆ ಸಂಬಂಧ 23 ಮಂದಿ ಬಂಧನ

  ಘಟನೆ ಸಂಬಂಧ 23 ಜನರನ್ನು ಬಂಧಿಸಲಾಗಿದೆ. . ಯಾವುದೇ ವ್ಯಕ್ತಿಯ ವರ್ಗ, ಮತ, ಸಮುದಾಯ ಮತ್ತು ಧರ್ಮದ ಹೊರತಾಗಿ ತಪ್ಪಿತಸ್ಥರೆಂದು ಕಂಡುಬಂದರೆ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಪ್ರಕರಣವನ್ನು ಅಪರಾಧ ವಿಭಾಗದ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ನಾಲ್ಕು ವಿಧಿವಿಜ್ಞಾನ ತಂಡಗಳು ಇಂದು ಅಪರಾಧ ನಡೆದ ಸ್ಥಳಕ್ಕೆ ಭೇಟಿ ನೀಡಿ ಮಾದರಿಗಳನ್ನು ಸಂಗ್ರಹಿಸಿವೆ. ಸಿಸಿಟಿವಿ ದೃಶ್ಯಾವಳಿ ಮತ್ತು ಡಿಜಿಟಲ್ ಮಾಧ್ಯಮದ ವಿಶ್ಲೇಷಣೆ ನಡೆಸಲಾಗುತ್ತಿದೆ.

  ಇದನ್ನು ಓದಿ: IPS ಅಧಿಕಾರಿಗಳನ್ನು ಕೇಂದ್ರದ ಸುಪರ್ದಿಗೆ ತೆಗೆದುಕೊಳ್ಳುವ ಬಗ್ಗೆ PMOಗೆ ಕೋರಿದ ಗೃಹ ಇಲಾಖೆ

  ವದಂತಿಗೆ ಕಿವಿಕೊಡಬೇಡಿ

  ಕೆಲವರು ಸಾಮಾಜಿಕ ಜಾಲತಾಣಗಳ ಮೂಲಕ ಶಾಂತಿ ಕದಡಲು ಯತ್ನಿಸುತ್ತಿದ್ದಾರೆ. ಈ ಹಿನ್ನಲೆ ಸಾಮಾಜಿಕ ಮಾಧ್ಯಮವನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ. ತಪ್ಪು ಮಾಹಿತಿ ಹರಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರು ವದಂತಿಗಳಿಗೆ ಕಿವಿಗೊಡಬಾರದು ಎಂದು ಇದೇ ವೇಳೆ ಮನವಿ ಮಾಡಿದ್ದಾರೆ.

  ಇದನ್ನು ಓದಿ: ಬಿಜೆಪಿ ಕಾರ್ಯಕರ್ತರೇ ಎಚ್ಚರಿಕೆಯಿಂದ ಇರಿ"! ಹೀಗಂತ ಹೇಳಿದ್ದೇಕೆ ಗೊತ್ತಾ ಅಣ್ಣಾಮಲೈ?

  ಬಂಧಿತರಿಂದ ಶಸ್ತ್ರಾಸ್ತ್ರ ವಶಕ್ಕೆ

  ಬಂಧಿತರಿಂದ ಮೂರು ದೇಶ ನಿರ್ಮಿತ ಪಿಸ್ತೂಲ್‌ಗಳು ಮತ್ತು ಐದು ಕತ್ತಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಈ ಹಿಂದೆ ತಿಳಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳನ್ನು ಈಗಾಗಲೇ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
  ಬಂಧಿತರಲ್ಲಿ ಅಸ್ಲಂ ಕೂಡ ದೆಹಲಿ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಮೆದಲಾಲ್ ಮೀನಾ ಮೇಲೆ ಗುಂಡು ಹಾರಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಆತನಿಂದ ದೇಶಿಯ ಪಿಸ್ತೂಲ್ ವಶಪಡಿಸಿಕೊಳ್ಳಲಾಗಿದೆ.

  ತನ್ನೊಂದಿಗೆ ನಾಲ್ಕೈದು ಜನರನ್ನು ಕರೆತಂದು ಮಸೀದಿ ಬಳಿ ಮೆರವಣಿಗೆಯ ನಡೆಸುತ್ತಿದ್ದ ಸದಸ್ಯರ ಜೊತೆ ವಾಗ್ವಾದಕ್ಕಿಳಿದಿದ್ದ ಅನ್ಸಾರ್ ಎಂಬ ಮತ್ತೊಬ್ಬ ವ್ಯಕ್ತಿಯನ್ನೂ ಬಂಧಿಸಲಾಗಿದೆ. ಈ ಎರಡು ಗುಂಪುಗಳ ಮಾತಿನ ಚಕಮಕಿ ಕಲ್ಲು ತೂರಾಟಕ್ಕೆ ಕಾರಣವಾಗಿತ್ತು
  Published by:Seema R
  First published: