Petrol Price Today: 3 ದಿನಗಳಿಂದ ಇಳಿಕೆ ಕಂಡಿದ್ದ ಡೀಸೆಲ್​ ದರ ಇಂದು ಸ್ಥಿರ; ಪೆಟ್ರೋಲ್​ ಬೆಲೆಯಲ್ಲೂ ಯಥಾಸ್ಥಿತಿ

ಇತ್ತೀಚೆಗಷ್ಟೇ ತಮಿಳುನಾಡು ಸರ್ಕಾರ ಆಗಸ್ಟ್ 14ರಂದು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ವ್ಯಾಟ್ ತೆರಿಗೆಯನ್ನ 3 ರೂಪಾಯಿಯಷ್ಟು ಕಡಿತಗೊಳಿಸಿತ್ತು. ಪರಿಣಾಮವಾಗಿ ಚೆನ್ನೈ ಹಾಗೂ ಇತರ ತಮಿಳುನಾಡು ಜಿಲ್ಲೆಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ತಗ್ಗಿದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
    Petrol, Diesel Prices on August 21 ಬೆಂಗಳೂರು(ಆ. 21): ಸತತ ಮೂರು ದಿನಗಳಿಂದ ಇಳಿಕೆ ಕಂಡಿದ್ದ ಡೀಸೆಲ್ ದರ ಇಂದು ಯಥಾಸ್ಥಿತಿ ಕಾಯ್ದುಕೊಂಡಿದೆ. ನಿನ್ನೆ ಬೆಂಗಳೂರಿನಲ್ಲಿ ಡೀಸೆಲ್ ಒಂದು ಲೀಟರ್​ಗೆ 21 ಪೈಸೆಯಷ್ಟು ಇಳಿಕೆಯಾಗಿತ್ತು. ಶುಕ್ರವಾರ ಬೆಂಗಳೂರಿನಲ್ಲಿ ಡೀಸೆಲ್ ರೇಟ್ ಲೀಟರ್​ಗೆ 94.65 ಇತ್ತು. ಆಗಸ್ಟ್ 18ರಂದು ಕೂಡ ಡೀಸೆಲ್ ದರ 21 ಪೈಸೆ ಇಳಿಕೆ ಕಂಡಿತ್ತು. ಆಗಸ್ಟ್​ 19ರಂದು 19 ಪೈಸೆ ತಗ್ಗಿತ್ತು. ಆಗಸ್ಟ್ 12ರಂದು 6 ಪೈಸೆ ಬೆಲೆ ಹೆಚ್ಚಳ ಕಂಡಿದ್ದ ಡೀಸೆಲ್ ಅದಾದ ಬಳಿಕ ಏರಿಕೆ ಕಂಡಿಲ್ಲ. ಇದೇ ವೇಳೆ, ಪೆಟ್ರೋಲ್ ದರ ಯಥಾಸ್ಥಿತಿ ಮುಂದುವರಿದಿದೆ. ಆಗಸ್ಟ್ 10 ಮತ್ತು 11ರಂದು ಏರುಪೇರು ಆಗಿದ್ದು ಬಿಟ್ಟರೆ ಉಳಿದಂತೆ ಕಳೆದ 35 ದಿನಗಳಿಂದ ಪೆಟ್ರೋಲ್ ದರ ವ್ಯತ್ಯಾಸ ಕಂಡಿಲ್ಲ. ಬೆಂಗಳೂರಿನಲ್ಲಿ ಸದ್ಯ ಪೆಟ್ರೋಲ್ ದರ ಲೀಟರ್​ಗೆ 105.25 ಇದೆ. ಚೆನ್ನೈನಲ್ಲಿ ತೆರಿಗೆ ಇಳಿಕೆಯಿಂದಾಗಿ ಅಲ್ಲಿ ಪೆಟ್ರೋಲ್ ದರ ನೂರು ರೂಗಿಂತ ಕೆಳಗೆ ಇದೆ.

    ಭಾರತದಲ್ಲಿ ಪೆಟ್ರೋಲಿಯಂ ಉತ್ಪನ್ನಗಳ ಬೆಲೆಗಳು ಮಾರುಕಟ್ಟೆ ನಿಯಂತ್ರಿತವಾಗಿವೆ ಎಂದು ಸರ್ಕಾರ ಹೇಳುತ್ತದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಛಾ ತೈಲ ಬೆಲೆಯಲ್ಲಾಗುವ ಬದಲಾವಣೆಯು ಭಾರತದಲ್ಲಿ ಪೆಟ್ರೋಲಿಯಂ ಉತ್ಪನ್ನಗಳ ಬೆಲೆಯ ಮೇಲೆ ಪರಿಣಾಮ ಬೀರುತ್ತವೆ. ಜೊತೆಗೆ ಇಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪ್ರತ್ಯೇಕವಾಗಿ ತೆರಿಗೆ ಹಾಕುತ್ತವೆ. ಪೆಟ್ರೋಲ್ ಬೆಲೆಯಲ್ಲಿ ಶೇ. 60 ರಷ್ಟು ಭಾಗ ತೆರಿಗೆಯೇ ಆಗಿರುತ್ತದೆ ಎಂಬುದು ಗಮನಾರ್ಹ.

    ಕೇಂದ್ರ ಸರ್ಕಾರ ಪ್ರತೀ ಲೀಟರ್ ಪೆಟ್ರೋಲ್​ಗೆ ವಿಧಿಸುವ ಅಬಕಾರಿ ಸುಂಕದ ಮೊತ್ತ 32.90 ರೂ ಇರುತ್ತದೆ. ಹಾಗೆಯೇ, ಡೀಸೆಲ್ ಬೆಲೆಯಲ್ಲಿ ಶೇ. 54ರಷ್ಟು ತೆರಿಗೆ ಇದೆ. ಇದರಲ್ಲಿ ಅಬಕಾರಿ ಸುಂಕದ ಮೊತ್ತ 31.80 ರೂ ಇದೆ. ಇನ್ನು, ರಾಜ್ಯ ಸರ್ಕಾರಗಳೂ ಕೂಡ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ತಮ್ಮದೇ ಮೌಲ್ಯ ವರ್ಧಿತ ತೆರಿಗೆ (VAT – Value Added Tax) ತೆರಿಗೆ ವಿಧಿಸುತ್ತವೆ.

    ಇದನ್ನೂ ಓದಿ:Karnataka Weather Today: ರಾಜ್ಯದಲ್ಲಿ ಇನ್ನೂ ನಾಲ್ಕು ದಿನ ಭಾರೀ ಮಳೆ; 9 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

    ಒಂದೊಂದು ರಾಜ್ಯದಲ್ಲಿ ಒಂದೊಂದು ರೀತಿಯ ವ್ಯಾಟ್ ತೆರಿಗೆ ಇರುವುದರಿಂದ ವಿವಿಧ ರಾಜ್ಯಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ವ್ಯತ್ಯಾಸವಾಗುತ್ತದೆ. ರಾಜಸ್ಥಾನ, ಮಧ್ಯ ಪ್ರದೇಶ, ಆಂಧ್ರ ಪ್ರದೇಶ, ತೆಲಂಗಾಣ ರಾಜ್ಯಗಳಲ್ಲಿ ಅತಿ ಹೆಚ್ಚು ವ್ಯಾಟ್ ತೆರಿಗೆ ಇದೆ. ಇತ್ತೀಚೆಗಷ್ಟೇ ತಮಿಳುನಾಡು ಸರ್ಕಾರ ಆಗಸ್ಟ್ 14ರಂದು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ವ್ಯಾಟ್ ತೆರಿಗೆಯನ್ನ 3 ರೂಪಾಯಿಯಷ್ಟು ಕಡಿತಗೊಳಿಸಿತ್ತು. ಪರಿಣಾಮವಾಗಿ ಚೆನ್ನೈ ಹಾಗೂ ಇತರ ತಮಿಳುನಾಡು ಜಿಲ್ಲೆಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ತಗ್ಗಿದೆ.

    ಪೆಟ್ರೋಲ್ ಮತ್ತು ಡೀಸೆಲ್ ದರ:

    ಬೆಂಗಳೂರು:
    ಪೆಟ್ರೋಲ್ ದರ: 105.25 ರೂ
    ಡೀಸೆಲ್ ದರ: 94.65 ರೂ

    ದೆಹಲಿ:
    ಪೆಟ್ರೋಲ್ ದರ: 101.84 ರೂ
    ಡೀಸೆಲ್ ದರ: 89.27 ರೂ

    ಮುಂಬೈ:
    ಪೆಟ್ರೋಲ್ ದರ: 107.83 ರೂ
    ಡೀಸೆಲ್ ದರ: 96.84 ರೂ

    ಕೋಲ್ಕತಾ:
    ಪೆಟ್ರೋಲ್ ದರ: 102.08 ರೂ
    ಡೀಸೆಲ್ ದರ: 92.32

    ಚೆನ್ನೈ:
    ಪೆಟ್ರೋಲ್ ದರ: 99.47
    ಡೀಸೆಲ್ ದರ: 93.84



    ದೇಶದ 20 ರಾಜ್ಯಗಳಲ್ಲಿ ಪೆಟ್ರೋಲ್ ಬೆಲೆ ನೂರು ರೂ ಗಡಿ ದಾಟಿದೆ. ಮಧ್ಯಪ್ರದೇಶ ರಾಜಧಾನಿ ಭೋಪಾಲ್​ನಲ್ಲಿ ಪೆಟ್ರೋಲ್ ಬೆಲೆ 110 ರೂ ದಾಟಿದೆ. ದೇಶದಲ್ಲೇ ಅತಿ ದುಬಾರಿ ಪೆಟ್ರೋಲ್ ಇರುವುದು ರಾಜಸ್ಥಾನದ ಶ್ರೀ ಗಂಗಾನಗರ್ ಜಿಲ್ಲೆಯಲ್ಲಿ. ಇಲ್ಲಿ ಪೆಟ್ರೋಲ್ ಬೆಲೆ 113 ರೂ ದಾಟಿದೆ. ಈ ಜಿಲ್ಲೆಯಲ್ಲಿ ಡೀಸೆಲ್ ಬೆಲೆ ಕೂಡ ಕೆಲ ದಿನಗಳ ಹಿಂದೆಯೇ ಶತಕ ಬಾರಿಸಿದೆ. ಇಲ್ಲಿ ಡೀಸೆಲ್ ಬೆಲೆ ಲೀಟರ್​ಗೆ 103.15 ರೂ ಇದೆ. ರಾಜಸ್ಥಾನ, ಒಡಿಶಾ ಮತ್ತು ಮಧ್ಯ ಪ್ರದೇಶದ ಕೆಲ ಜಿಲ್ಲೆಗಳಲ್ಲಿ ಡೀಸೆಲ್ ಬೆಲೆ ಶತಕ ದಾಟಿ ಮುಂದೆ ಹೋಗಿದೆ.

    ಇದನ್ನೂ ಓದಿ:ಇಂದು ಆಲಮಟ್ಟಿ ಡ್ಯಾಂಗೆ ಬಾಗಿನ ಅರ್ಪಿಸಲಿರುವ ಸಿಎಂ; ಸಂತ್ರಸ್ಥರ ಬೇಡಿಕೆ ಈಡೇರಿಸ್ತಾರಾ ಬೊಮ್ಮಾಯಿ?

    ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರೂ ಕೈ ಜೋಡಿಸಬೇಕು.
    Published by:Latha CG
    First published: