HOME » NEWS » National-international » FUEL PRICES WILL COME DOWN AFTER WINTERS SAYS PETROLEUM MINISTER DHARMENDRA PRADHAN MAK

Petrol Price: ಚಳಿಗಾಲದ ನಂತರ ಇಂಧನಗಳ ಬೆಲೆಯಲ್ಲಿ ಇಳಿಕೆಯಾಗಲಿವೆ: ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿಕೆ

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪೆಟ್ರೋಲಿಯಂ ಬೆಲೆಯಲ್ಲಿನ ಹೆಚ್ಚಳವು ಗ್ರಾಹಕರ ಮೇಲೂ ಪರಿಣಾಮ ಬೀರಿದೆ. ಚಳಿಗಾಲ ಹೋದಂತೆ ಬೆಲೆಗಳು ಸ್ವಲ್ಪ ಕಡಿಮೆಯಾಗುತ್ತವೆ. ಇದು ಅಂತರರಾಷ್ಟ್ರೀಯ ವಿಷಯವಾಗಿದ್ದು, ಬೇಡಿಕೆಯ ಹೆಚ್ಚಳದಿಂದಾಗಿ ಬೆಲೆ ಹೆಚ್ಚಾಗಿದೆ ಎಂದು ಸಚಿವ ಧರ್ಮೇಂದ್ರ ಪ್ರಧಾನ್ ತಿಳಿಸಿದ್ದಾರೆ.

news18-kannada
Updated:February 26, 2021, 5:12 PM IST
Petrol Price: ಚಳಿಗಾಲದ ನಂತರ ಇಂಧನಗಳ ಬೆಲೆಯಲ್ಲಿ ಇಳಿಕೆಯಾಗಲಿವೆ: ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿಕೆ
ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್.
  • Share this:
ನವ ದೆಹಲಿ (ಫೆಬ್ರವರಿ 26); ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್​ ಬೆಲೆ ದಿನಿದಿಂದ ದಿನಕ್ಕೆ ಏರುತ್ತಲೇ ಇದೆ. ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಏರಿಕೆ ಪರಿಣಾಮಗಳು ಇತರೆ ದಿನನಿತ್ಯ ವಸ್ತುಗಳ ಬೆಲೆ ಏರಿಕೆಗೂ ಪತ್ಯಕ್ಷವಾಗಿ ಕಾರಣವಾಗಿದೆ. ಹೀಗಾಗಿ ಬೆಲೆ ಏರಿಕೆಯಿಂದಾಗಿ ಜನ ಸಾಮಾನ್ಯರು ಸಂಕಷ್ಟಕ್ಕೆ ಎದುರಾಗಿದ್ದಾರೆ. ಇನ್ನೂ ಕೆಲವು ರಾಜ್ಯಗಳಲ್ಲಿ ಪೆಟ್ರೋಲ್ ಬೆಲೆ 100 ರೂ. ಗಡಿದಾಟಿದ್ದು, ಜನ ರಸ್ತೆಗಿಳಿದು ಪ್ರತಿಭಟಿಸುತ್ತಿದ್ದಾರೆ. ಈ ನಡುವೆ ಇಂದು ಮಹತ್ವದ ಹೇಳಿಕೆ ನೀಡಿರುವ ಕೇಂದ್ರದ ತೈಲ ಖಾತೆ ಸಚಿವ ಧರ್ಮೇಂದ್ರ ಪ್ರಧಾನ್, "ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪ್ರಸ್ತುತ ಬೇಡಿಕೆ ಅಧಿಕವಾಗಿರುವ ಕಾರಣ ಬೆಲೆ ಏರಿಕೆಯಾಗಿದೆ. ಆದರೆ, ಚಳಿ ಗಾಲದ ನಂತರ ಪೆಟ್ರೋಲ್ ಮತ್ತು ಡೀಸೆಲ್​ ಬೆಲೆಯಲ್ಲಿ ಗಣನೀಯ ಇಳಿಕೆಯಾಗಲಿದೆ" ಎಂದು ಹೇಳಿದ್ದಾರೆ.

"ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪೆಟ್ರೋಲಿಯಂ ಬೆಲೆಯಲ್ಲಿನ ಹೆಚ್ಚಳವು ಗ್ರಾಹಕರ ಮೇಲೂ ಪರಿಣಾಮ ಬೀರಿದೆ. ಚಳಿಗಾಲ ಹೋದಂತೆ ಬೆಲೆಗಳು ಸ್ವಲ್ಪ ಕಡಿಮೆಯಾಗುತ್ತವೆ. ಇದು ಅಂತರರಾಷ್ಟ್ರೀಯ ವಿಷಯವಾಗಿದ್ದು, ಬೇಡಿಕೆಯ ಹೆಚ್ಚಳದಿಂದಾಗಿ ಬೆಲೆ ಹೆಚ್ಚಾಗಿದೆ. ಚಳಿಗಾಲದಲ್ಲಿ ಕಚ್ಛಾತೈಲಗಳ ಬೇಡಿಕೆ ಗಣನೀಯವಾಗಿ ಕುಗ್ಗಲಿದ್ದು, ಬೆಲೆಯೂ ಇಳಿಯಲಿದೆ" ಎಂದು ಪೆಟ್ರೋಲಿಯಂ ಸಚಿವರು ಸುದ್ದಿ ಸಂಸ್ಥೆ ಎಎನ್‌ಐಗೆ ತಿಳಿಸಿದ್ದಾರೆ.

ಶುಕ್ರವಾರ, ಪೆಟ್ರೋಲ್ ಪ್ರತಿ ಲೀಟರ್‌ಗೆ ದೆಹಲಿಯಲ್ಲಿ 90.93 ಮತ್ತು ಡೀಸೆಲ್ 81.31 ಕ್ಕೆ ಮಾರಾಟವಾಗುತ್ತಿದೆ. ಮುಂಬೈನಲ್ಲಿ ಪೆಟ್ರೋಲ್ ಬೆಲೆ ಲೀಟರ್​ಗೆ 97.34 ಮತ್ತು ಡೀಸೆಲ್​ ಲೀಟರ್‌ಗೆ 88.44 ರೂ ಆಗಿದೆ. ಕೋಲ್ಕತ್ತಾದಲ್ಲಿ ಪೆಟ್ರೋಲ್‌ಗೆ ಪ್ರತಿ ಲೀಟರ್‌ಗೆ. 94.68 ಮತ್ತು ಡೀಸೆಲ್‌ಗೆ 84.20 ಬೆಲೆಯಿದ್ದರೆ, ಬೆಂಗಳೂರಿನಲ್ಲಿ ಕ್ರಮವಾಗಿ. 93.98 ಮತ್ತು 86.21 ರೂ.ಗೆ ಮಾರಾಟ ಮಾಡಲಾಗುತ್ತಿದೆ.

"ಬೇಡಿಕೆ ಹೆಚ್ಚಾಗಿದ್ದು ಪೂರೈಕೆಯಲ್ಲಿ ವ್ಯತ್ಯಯ ಉಂಟಾದ ಕಾರಣದಿಂದಾಗಿ ಬೆಲೆ ಏರಿಕೆ ಉಂಟಾಗಿದೆ. ಈ ತಿಂಗಳ ದ್ವಿತಿಯಾರ್ಧದಲ್ಲಿ ಗ್ರಾಹಕರು ಪೆಟ್ರೋಲ್​ಗಾಗಿಯೇ ಅಧಿಕ ಹಣ ಖರ್ಚು ಮಾಡಿದ್ದಾರೆ. ಹೀಗಾಗಿ ಉತ್ಪಾದನಾ ಕಡಿತವನ್ನು ಸರಾಗಗೊಳಿಸುವಂತೆ ಭಾರತವು ಪೆಟ್ರೋಲಿಯಂ ರಫ್ತು ಮಾಡುವ ದೇಶಗಳ (ಒಪೆಕ್) ಮತ್ತು ಒಪೆಕ್ ಪ್ಲಸ್‌ನ ಸಂಘಟನೆಯನ್ನು ಒತ್ತಾಯಿಸಿದೆ. ಹೀಗಾಗಿ ಬೆಲೆ ಏರಿಕೆ ಕ್ರಮೇಣ ಹಿಡಿತಕ್ಕೆ ಬರಲಿದೆ. ಕೋವಿಡ್​ ಪರಿಸ್ಥಿತಿಯೂ ಸಹ ತೈಲ ಉತ್ಪಾದನೆ ಮೇಲೆ ಪ್ರಭಾವ ಬೀರಿದೆ" ಎಂದು ಸಚಿವ ಧರ್ಮೇಂದ್ರ ಪ್ರಧಾನ್ ತಿಳಿಸಿದ್ದಾರೆ.

ಇದನ್ನೂ ಓದಿ: Gold Loan Waiver: ಕೃಷಿ ಸಾಲದ ಬಳಿಕ ಚಿನ್ನದ ಮೇಲಿನ ಸಾಲ ಮನ್ನಾ ಘೋಷಿಸಿದ ತಮಿಳುನಾಡು ಸಿಎಂ

"ಪೆಟ್ರೋಲಿಯಂ ಉತ್ಪನ್ನಗಳನ್ನು ಶೀಘ್ರದಲ್ಲಿಯೇ ಜಿಎಸ್​ಟಿ ವ್ಯಾಪ್ತಿಗೆ ತರಲು ಸರಕು ಮತ್ತು ಸೇವಾ ತೆರಿಗೆ (ಜಿಎಸ್​ಟಿ) ಮಂಡಳಿಗೆ ಮನವಿ ಮಾಡಿದ್ದೇನೆ. ಪೆಟ್ರೋಲಿಯಂ ಉತ್ಪನ್ನಗಳನ್ನು ಜಿಎಸ್​ಟಿ ವ್ಯಾಪ್ತಿಗೆ ತಂದರೆ ಅದು ಸಾಮಾನ್ಯ ಜನರಿಗೆ ದೊಡ್ಡ ಪರಿಹಾರವಾಗುತ್ತದೆ. ತೈಲ ಮತ್ತು ಅನಿಲ ಕ್ಷೇತ್ರದ ಬೆಳವಣಿಗೆಗೆ ಇದು ತುಂಬಾ ಸಹಕಾರಿಯಾಗಲಿದೆ" ಎಂದು ತಿಳಿಸಿದ್ದಾರೆ.
ಏತನ್ಮಧ್ಯೆ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳ ಮೇಲಿನ ತೆರಿಗೆಯನ್ನು ತಗ್ಗಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಂಘಟಿತ ಕ್ರಮ ಕೈಗೊಳ್ಳುವ ಅಗತ್ಯವಿದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ (ಆರ್​ಬಿಐ) ಗವರ್ನರ್ ಶಕ್ತಿಕಾಂತ ದಾಸ್ ಗುರುವಾರ ಅಭಿಪ್ರಾಯಪಟ್ಟಿದ್ದರು.
Published by: MAshok Kumar
First published: February 26, 2021, 4:57 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories