HOME » NEWS » National-international » GANG RAPE VICTIMS FATHER DIES IN ACCIDENT IN KANPUR SESR

Uttar pradesh: ಮಗಳ ಮೇಲಿನ ಸಾಮೂಹಿಕ ಅತ್ಯಾಚಾರದ ದೂರು ದಾಖಲಿಸಿದ ತಂದೆ ಅಪಘಾತದಲ್ಲಿ ಸಾವು

13 ವರ್ಷದ ಬಾಲಕಿ ಸಾಮೂಹಿಕ ಅತ್ಯಾಚಾರ ಪ್ರಕರಣ ದಾಖಲಿಸುತ್ತಿದ್ದಂತೆ ಆರೋಪಿಯ ಸಹೋದರನೊಬ್ಬ ತನಗೆ ಜೀವ ಬೆದರಿಕೆ ಹಾಕುತ್ತಿದ್ದಾನೆ ಎಂದು ಸಂತ್ರಸ್ತೆ ತಂದೆ ಪೊಲೀಸರು ಮುಂದೆ ತಿಳಿಸಿದ್ದರು.

news18-kannada
Updated:March 10, 2021, 3:07 PM IST
Uttar pradesh: ಮಗಳ ಮೇಲಿನ ಸಾಮೂಹಿಕ ಅತ್ಯಾಚಾರದ ದೂರು ದಾಖಲಿಸಿದ ತಂದೆ ಅಪಘಾತದಲ್ಲಿ ಸಾವು
ಸಾಂದರ್ಭಿಕ ಚಿತ್ರ
  • Share this:
ಕಾನ್ಫುರ (ಮಾ. 10): 13 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದ ಎರಡು ದಿನಗಳ ಬಳಿಕ ಆಕೆಯ ತಂದೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಅತ್ಯಾಚಾರದ ಆರೋಪಿಯೇ ಈ ಅಪಘಾತವನ್ನು ನಡೆಸಿರುವ ಸಾಧ್ಯತೆ ಇದೆ ಎಂದು ಕುಟುಂಬ ಸದಸ್ಯರು ಮತ್ತು ಗ್ರಾಮಸ್ಥರು ಆರೋಪಿಸಿದ್ದಾರೆ. ಬಾಲಕಿಯನ್ನು ಆರೋಗ್ಯ ತಪಾಸಣೆಗೆ ಒಳಪಡಿಸಿರುವ ಆಸ್ಪತ್ರೆಯ ಮುಂಭಾಗದಲ್ಲಿ ಆಕೆಯ ತಂದೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ ಎಂದು ಕಾನ್ಫುರ ಪೊಲೀಸರು ತಿಳಿಸಿದ್ದಾರೆ. ಈ ಅಪಘಾತ ಕೊಲೆ ಯತ್ನವಾಗಿದ್ದು ಕೊಲೆ ಪ್ರಕರಣದ ಅಡಿ ಘಟನೆಯನ್ನು ತನಿಖೆ ನಡೆಸಬೇಕು ಎಂದು ಸ್ಥಳೀಯರು ಕಾನ್ಫುರ -ಸಾಗತ್​ ಹೆದ್ದಾರಿಯನ್ನು ತಡೆದು ಪ್ರತಿಭಟನೆ ನಡೆಸಿದರು. 13 ವರ್ಷದ ಬಾಲಕಿ ಸಾಮೂಹಿಕ ಅತ್ಯಾಚಾರ ಪ್ರಕರಣ ದಾಖಲಿಸುತ್ತಿದ್ದಂತೆ ಆರೋಪಿಯ ಸಹೋದರನೊಬ್ಬ ತನಗೆ ಜೀವ ಬೆದರಿಕೆ ಹಾಕುತ್ತಿದ್ದಾನೆ ಎಂದು ಸಂತ್ರಸ್ತೆ ತಂದೆ ಪೊಲೀಸರು ಮುಂದೆ ತಿಳಿಸಿದ್ದರು.

ಕಾನ್ಪರದ ಸಜೆತಿ ಪೊಲೀಸ್​ ಠಾಣಾ ವ್ಯಾಪ್ತಿಯ ಅಪ್ರಾಪ್ತ ಬಾಲಕಿಯನ್ನು ಅದೇ ಹಳ್ಳಿಯ ಕೆಲವರು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂದು ಸಂತ್ರಸ್ತೆ ಕುಟುಂಬ ದೂರು ದಾಖಲಿಸಿತ್ತು. ದೂರಿನಲ್ಲಿ ಅದೇ ಗ್ರಾಮದ ಗೋಲು ಯಾದವ್​ ಮತ್ತು ದೀಪು ಯಾದವ್​ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ನಡೆಸಿದ್ದಾರೆ. ಅಲ್ಲದೇ ಈ ಪ್ರಕರಣದ ಕುರಿತು ಪೊಲೀಸರಿಗೆ ದೂರು ನೀಡದಂತೆ ಬೆದರಿಕೆಯನ್ನು ಹಾಕಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಸಂತ್ರಸ್ತೆಯ ತಂದೆಯ ದೂರಿನ ಅನ್ವಯ ಕಾನ್ಫರ ಪೊಲೀಸರು ಮಂಗಳವಾರ ಸಾಮೂಹಿಕ ಅತ್ಯಾಚಾರ ಮತ್ತು ಕ್ರಿಮಿನಲ್​ ಬೆದರಿಕೆಯ ದೂರನ್ನು ದಾಖಲಿಸಿಕೊಂಡಿದ್ದರು. ಪ್ರಕರಣದ ಆರೋಪಿಯಾಗಿರುವ ದೀಪು ಯಾದವ್​ ತಂದೆ ಪೊಲೀಸ್​ ಸಿಬ್ಬಂದಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಮಾಹಿತಿ ಲಭ್ಯವಾಗಿದೆ.


ಇನ್ನು ಪ್ರಕರಣದ ಕುರಿತು ಮಾತನಾಡಿರುವ ಕಾನ್ಪುರ ಡಿಐಜಿ ಪ್ರೀತಿಂದರ್​ ಸಿಂಗ್​, ಪ್ರಕರಣದ ಪ್ರಮುಖ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಭಾಗಿಯಾದ ಇನ್ನಿತರ ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರ ಶೋಧ ನಡೆಸಲಾಗಿದೆ. ಸಂತ್ರಸ್ತೆಯ ತಂದೆ ಸಾವು ದುರಂತ. ಸಂತ್ರಸ್ತೆಗಾಗಿ ಚಹಾತಂದು ಕೊಡಲು ಅವರು ಹೊರ ಬಂದಾಗ ಟ್ರಕ್​ ಅವರ ಮೇಲೆ ಹರಿದಿದೆ. ಅವರನ್ನು ತಕ್ಷಣಕ್ಕೆ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅವರು ಉಳಿಯಲು ಸಾಧ್ಯವಾಗಲಿಲ್ಲ. ಈ ಬಗ್ಗೆ ಕೂಡ ದೂರು ದಾಖಲಿಸಿದ್ದು, ತನಿಖೆ ನಡೆಸುತ್ತಿದ್ದೇವೆ ಎಂದರು.

ಈ ಎರಡು ಘಟನೆ ಕುರಿತು ಆಕ್ರೋಶ ವ್ಯಕ್ತವಾದ ಹಿನ್ನಲೆ ಉತ್ತರ ಪ್ರದೇಶ ಪೊಲೀಸರು ಎರಡು ತನಿಖೆಯನ್ನು ತ್ವರಿತ ವಾಗಿ ತನಿಖೆಗೆ ನಿರ್ದೇಶಿಸಿರುವುದಾಗಿ ಟ್ವೀಟ್​ ಮೂಲಕ ತಿಳಿಸಿದ್ದಾರೆ. ಅಪಘಘಾತ ನಡೆಸಿದ ಚಾಲಕನನ್ನು ಶೀಘ್ರವಾಗಿ ಬಂಧಿಸುವುದಾಗಿ ತಳಿಸಿದೆ.
Published by: Seema R
First published: March 10, 2021, 3:07 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories