ಕೋಲ್ಕತ್ತ: ಭಾರತ ಕ್ರಿಕೆಟ್ ತಂಡ ಮಾಜಿ ನಾಯಕ ಸೌರವ್ ಗಂಗೂಲಿ ಅವರಿಗೆ ಇಂದು ಮತ್ತೆ ಎದೆನೋವು ಕಾಣಿಸಿಕೊಂಡ ಪರಿಣಾಮ ಇಂದು ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕುಟುಂಬ ಸದಸ್ಯರು ನೀಡಿರುವ ಮಾಹಿತಿಯ ಪ್ರಕಾರ ಬುಧವಾರ ಬೆಳಗ್ಗೆ ಸೌರವ್ ಗಂಗೂಲಿ ಅವರಿಗೆ ಸಣ್ಣ ಪ್ರಮಾಣದ ಎದೆ ನೋವು ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಕೋಲ್ಕತ್ತಾದ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಮಂಗಳವಾರ ಸಂಜೆ ಗಂಗೂಲಿ ಅವರಿಗೆ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡಿತ್ತು. ಆ ಬಳಿಕ ಮತ್ತೆ ಬುಧವಾರ ಬೆಳಿಗ್ಗೆ ಸಣ್ಣ ಪ್ರಮಾಣದಲ್ಲಿ ಎದೆ ನೋವು ಕಾಣಿಸಿಕೊಂಡಿದೆ. ಹಾಗಾಗಿ ಅವರನ್ನು ಇಂದು ಕೋಲ್ಕತ್ತದ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಸ್ತುತ ಅವರನ್ನು ಐಸಿಯುನಲ್ಲಿ ಇರಿಸಲಾಗಿದ್ದು, ವೈದ್ಯರಾದ ಅಫ್ತಬ್ ಖಾನ್ ಮತ್ತು ಸರೋಜ್ ಮಂಡಲ್ ಅವರು ಗಂಗೂಲಿ ಆರೋಗ್ಯದ ಬಗ್ಗೆ ನಿಗಾ ವಹಿಸಿದ್ದಾರೆ.
ಮಧ್ಯಾಹ್ನ ಸುಮಾರು 2.45ರಲ್ಲಿ ಸೌರವ್ ಗಂಗೂಲಿ ಅವರನ್ನು ಗ್ರೀನ್ ಕಾರಿಡಾರ್ ಮೂಲಕ ಅಪೋಲೊ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಈ ವೇಳೆ ಗಂಗೂಲಿ ಆಗಮನಕ್ಕಾಗಿ ವೈದ್ಯರ ತಂಡ ಕಾಯುತ್ತಿತ್ತು. ಆಸ್ಪತ್ರೆಗೆ ಬಂದ ಗಂಗೂಲಿ ಸ್ಟ್ರಚ್ಚರ್ ನಿರಾಕರಿಸಿ, ಆಸ್ಪತ್ರೆ ಒಳಗೆ ಅವರೇ ನಡೆದುಕೊಂಡು ಹೋದರು.
ಕಳೆದ ತಿಂಗಳು ಲಘು ಹೃದಯಾಘಾತಕ್ಕೆ ಒಳಗಾಗಿದ್ದ ಸೌರವ್ ಗಂಗೂಲಿ ಅವರಿಗೆ ಸ್ಟಂಟ್ಸ್ಗಳನ್ನು ಅಳವಡಿಸಲಾಗಿತ್ತು. ಉಳಿದ ಹೃದಯನಾಳಗಳಲ್ಲಿ ರಕ್ತ ಹೆಪ್ಪುಗಟ್ಟಿದ್ದರಿಂದ ಮತ್ತೊಮ್ಮೆ ಆಂಜಿಯೋಪ್ಲಾಸ್ಟಿ ಚಿಕಿತ್ಸೆ ಮಾಡಿಸಿಕೊಳ್ಳಲು ಸಲಹೆ ನೀಡಿದ್ದರು. ಆರೋಗ್ಯದಲ್ಲಿ ಚೇತರಿಕೆ ಕಂಡುಬಂದ ಬಳಿಕ ಜನವರಿ 7ರಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ