ನವದೆಹಲಿ (ಆಗಸ್ಟ್ 24): ನೆರೆಯ ಚೀನಾ ಜೊತೆ ಮೂಡಿರುವ ಬಿಕ್ಕಟ್ಟನ್ನು ಪರಿಹರಿಸಲು ಸೇನೆಯನ್ನು ಬಳಕೆ ಮಾಡಲು ನಾವು ಸಿದ್ಧರಿದ್ದೇವೆ ಎಂದು ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಹೇಳಿದ್ದಾರೆ. ಈ ಮೂಲಕ ಚೀನಾಗೆ ತಕ್ಕ ಸಂದೇಶ ನೀಡಿದ್ದಾರೆ.
ಈ ಬಗ್ಗೆ ಆಂಗ್ಲ ಮಾಧ್ಯಮವೊಂದರ ಜೊತೆ ಮಾತನಾಡಿರುವ ಅವರು, ಚೀನಾ ಜೊತೆಗೆ ಶಾಂತಿಯುತ ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳಲು ಬೇಕಿರುವ ಎಲ್ಲ ರೀತಿಯ ಕ್ರಮಗಳನ್ನು ನಾವು ಅನುಸರಿಸುತ್ತೇವೆ. ಒಂದೊಮ್ಮೆ ಮಾತುಕತೆ ವಿಫಲವಾದರೆ ಸೇನೆಯನ್ನು ಬಳಕೆ ಮಾಡಿಕೊಂಡು ಸಮಸ್ಯೆಗೆ ಪರಿಹಾರ ಕಂಡುಕೊಳ್ಳುತ್ತೇವೆ ಎಂದು ಅವರು ಹೇಳಿದ್ದಾರೆ.
ಚೀನಾ ಹಾಗೂ ಭಾರತದ ಗಡಿ ಭಾಗದಲ್ಲಿ ಎರಡೂ ರಾಷ್ಟ್ರಗಳ ಸೈನಿಕರ ನಡುವೆ ಘರ್ಷಣೆ ಏರ್ಪಟ್ಟಿತ್ತು. ಈ ವೇಳೆ ಉಭಯ ರಾಷ್ಟ್ರಗಳ ಸೈನಿಕರು ಮೃತಪಟ್ಟಿದ್ದರು. ಈ ಘಟನೆ ನಡೆದು ನಂತರ ಭಾರತ ಸಮಸ್ಯೆಯನ್ನು ಪರಿಹರಿಸಿಕೊಳ್ಳಲು ಪ್ರಯತ್ನಿಸುತ್ತಲೇ ಇದೆ. ಆದರೆ, ಈವರೆಗೆ ಮಾತುಕತೆ ಫಲಪ್ರಧವಾಗಿಲ್ಲ.
ಇದನ್ನೂ ಓದಿ: ಚೀನಿ ಜಂಟಿ ಉದ್ಯಮಕ್ಕೆ ನೀಡಿದ್ದ ’ಒಂದೇ ಭಾರತ್’ ಹೈಸ್ಪೀಡ್ ರೈಲಿನ ಟೆಂಡರ್ ರದ್ದುಗೊಳಿಸಿದ ಕೇಂದ್ರ ಸರ್ಕಾರ
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ