Gold Price: ನಿರಂತರವಾಗಿ ಏರಿಕೆಯಾಗುತ್ತಲೇ ಇದೆ ಚಿನ್ನ-ಬೆಳ್ಳಿ ದರ; ಇಂದಿನ ಬೆಲೆಯೆಷ್ಟು?

Gold Silver Price: ಗುಡ್​ ರಿಟರ್ನ್ಸ್​ ವೆಬ್​ಸೈಟ್​​​ ಪ್ರಕಾರ, ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ 10 ಗ್ರಾಂ 22 ಕ್ಯಾರಟ್ ಚಿನ್ನದ ಬೆಲೆ 47,000 ರೂಪಾಯಿ ಇದೆ.

news18-kannada
Updated:June 23, 2020, 10:27 AM IST
Gold Price: ನಿರಂತರವಾಗಿ ಏರಿಕೆಯಾಗುತ್ತಲೇ ಇದೆ ಚಿನ್ನ-ಬೆಳ್ಳಿ ದರ; ಇಂದಿನ ಬೆಲೆಯೆಷ್ಟು?
ಚಿನ್ನ
  • Share this:
ನವದೆಹಲಿ(ಜೂ.23): ವಿಶ್ವದೆಲ್ಲೆಡೆ ಕೊರೋನಾ ಆರ್ಭಟ ಹೆಚ್ಚಾಗುತ್ತಿರುವ ನಡುವೆಯೇ ಭಾರತದಲ್ಲಿ ಚಿನ್ನ ಮತ್ತು ಬೆಳ್ಳಿಯ ದರ ನಾಗಾಲೋಟದಲ್ಲಿ ಏರಿಕೆಯಾಗುತ್ತಿದೆ. ಕಳೆದ ಕೆಲ ದಿನಗಳಿಂದ ಚಿನ್ನ ಮತ್ತು ಬೆಳ್ಳಿಯ ಬೆಲೆ ನಿರಂತರವಾಗಿ ಹೆಚ್ಚಾಗುತ್ತಲೇ ಇದೆ.

ಇಂದು 10 ಗ್ರಾಂ ಚಿನ್ನದ ಬೆಲೆ 47,960 ರೂನಿಂದ 48,190 ರೂಪಾಯಿಗೆ ಏರಿಕೆಯಾಗಿದೆ. ಇದೇ ವೇಳೆ ಬೆಳ್ಳಿ ದರದಲ್ಲಿ ಕೂಡ ಏರಿಕೆ ಕಂಡಿದ್ದು, 1 ಕೆ.ಜಿ ಬೆಳ್ಳಿ 48,670 ರೂಪಾಯಿಯಿಂದ 48,800 ರೂಪಾಯಿಗೆ ಏರಿಕೆಯಾಗಿದೆ. ಈ ಮೂಲಕ ದೇಶಾದ್ಯಂತ ಚಿನ್ನದ ಬೆಲೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ.

ಚಾಮರಾಜನಗರದ ಭೂಮಾಪಕಿಗೆ ಕೊರೋನಾ; ಮಿನಿವಿಧಾನಸೌಧ ಸಂಪೂರ್ಣ ಬಂದ್

ಗುಡ್​ ರಿಟರ್ನ್ಸ್​ ವೆಬ್​ವೈಟ್​ ಪ್ರಕಾರ, ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ 10 ಗ್ರಾಂ 22 ಕ್ಯಾರಟ್ ಚಿನ್ನದ ಬೆಲೆ 47,000 ರೂಪಾಯಿ ಇದೆ. ಚೆನ್ನೈನಲ್ಲಿ 46,290 ರೂಪಾಯಿ, ಮುಂಬೈನಲ್ಲಿ 46,600 ರೂ ಇದೆ ಎಂದು ತಿಳಿದು ಬಂದಿದೆ. ಇನ್ನು, ಚೆನ್ನೈನಲ್ಲಿ 24 ಕ್ಯಾರಟ್ ಚಿನ್ನದ ಬೆಲೆ 50,580 ರೂಪಾಯಿಗೆ ಏರಿಕೆಯಾಗಿದೆ.

ಅಬಕಾರಿ ಸುಂಕ, ರಾಜ್ಯ ತೆರಿಗೆಗಳು ಮತ್ತು ಶುಲ್ಕ ವಿಧಿಸುವಿಕೆಯಿಂದಾಗಿ ಭಾರತದಾದ್ಯಂತ ಚಿನ್ನಾಭರಣಗಳ ಬೆಲೆಗಳು ಬದಲಾಗುತ್ತಿವೆ ಎಂದು ತಿಳಿದು ಬಂದಿದೆ.

ಸೋಮವಾರ ಚಿನ್ನದ ಬೆಲೆಯಲ್ಲಿ ಶೇ. 1ರಷ್ಟು ಏರಿಕೆಯಾಗಿದೆ. ಮುಂದಿನ ದಿನಗಳಲ್ಲಿ ಚಿನ್ನದ ಬೆಲೆ ಇನ್ನೂ ಸಹ ಏರಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. 
First published: June 23, 2020, 10:04 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading