Gold Price Today: ಚಿನ್ನದ ಬೆಲೆ ಮತ್ತೆ ಇಳಿಕೆ; ಬೆಳ್ಳಿ ದರದಲ್ಲಿ ಇಂದು ಕೊಂಚ ಏರಿಕೆ

Gold Silver Price: ಬಜೆಟ್ ಘೋಷಣೆಯಾದ ಬಳಿಕ ಚಿನ್ನದ ಬೆಲೆ ಇಳಿಮುಖವಾಗುತ್ತಿದೆ. ನೀವೇನಾದರೂ ಚಿನ್ನ ಖರೀದಿಸಲು ಯೋಚಿಸುತ್ತಿದ್ದರೆ ಇಂದು ಯಾವ ಯಾವ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ ಎಂಬ ಬಗ್ಗೆ ಇಲ್ಲಿದೆ ಮಾಹಿತಿ.

ಚಿನ್ನ

ಚಿನ್ನ

  • Share this:
    Gold Rate Today | ಮೂರ್ನಾಲ್ಕು ದಿನಗಳಿಂದ ಭಾರತದಲ್ಲಿ ಚಿನ್ನದ ಬೆಲೆ ಭಾರೀ ಇಳಿಕೆಯಾಗಿದೆ. 2 ದಿನಗಳ ಹಿಂದೆ 24 ಕ್ಯಾರೆಟ್ ಚಿನ್ನಕ್ಕೆ 49 ಸಾವಿರ ರೂ. ಇದ್ದ ಚಿನ್ನದ ದರ ನಿನ್ನೆಯಿಂದ ಎರಡೂವರೆ ಸಾವಿರ ರೂ ಕಡಿಮೆಯಾಗಿದೆ. ಬಜೆಟ್ ಘೋಷಣೆಯಾದ ಬಳಿಕ ಚಿನ್ನದ ಬೆಲೆ ಇಳಿಮುಖವಾಗುತ್ತಿದೆ. ಆದರೂ ದೇಶದ ನಾನಾ ನಗರಗಳಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ 49,000 ರೂ. ದಾಟಿದೆ. ನೀವೇನಾದರೂ ಚಿನ್ನ ಖರೀದಿಸಲು ಯೋಚಿಸುತ್ತಿದ್ದರೆ ಇಂದು ಯಾವ ಯಾವ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ ಎಂಬ ಬಗ್ಗೆ ಇಲ್ಲಿದೆ ಮಾಹಿತಿ.

    ಬೆಂಗಳೂರಿನಲ್ಲಿ ಇಂದು 24 ಕ್ಯಾರೆಟ್ ಚಿನ್ನದ ಬೆಲೆ 47,720 ರೂ. ಆಗಿದೆ. 22 ಕ್ಯಾರೆಟ್​ನ 10 ಗ್ರಾಂ ಚಿನ್ನಕ್ಕೆ ಬೆಂಗಳೂರಿನಲ್ಲಿ 43,740 ರೂ. ಆಗಿದೆ. ಬೆಳ್ಳಿ ಬೆಲೆಯಲ್ಲೂ ಭಾರೀ ಇಳಿಕೆಯಾಗಿದ್ದು, 74 ಸಾವಿರದ ಗಡಿ ದಾಟಿದ್ದ ಬೆಳ್ಳಿ ಬೆಲೆ ಇಂದು 68 ಸಾವಿರಕ್ಕೆ ಕುಸಿದಿದೆ.

    ಭಾರತದಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ ಇಂದು 46,370 ರೂ. ಆಗಿದೆ. 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ಇಂದು 47,370 ರೂ. ಆಗಿದೆ. ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ವ್ಯತ್ಯಾಸವಾಗಲಿದೆ. ಬೆಂಗಳೂರಿನಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ ಇಂದು 47,740 ರೂ. ಆಗಿದೆ. ಹಾಗೇ, 22 ಕ್ಯಾರೆಟ್​ನ 10 ಗ್ರಾಂ ಚಿನ್ನಕ್ಕೆ ಇಂದು 43,720 ರೂ. ಆಗಿದೆ. ಮೈಸೂರು, ವಿಶಾಖಪಟ್ಟಣಂ, ಮಂಗಳೂರು, ವಿಜಯವಾಡ, ಮುಂಬೈ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಹೆಚ್ಚೂ ಕಡಿಮೆ ಇದೇ ಬೆಲೆಯಿದೆ.

    ಬೆಂಗಳೂರಿನಲ್ಲಿ ಚಿನ್ನದ ಬೆಲೆ ಕಡಿಮೆಯಾಗಿದೆ. ಆದರೆ, ಬೇರೆಲ್ಲ ನಗರಗಳಿಗೆ ಹೋಲಿಸಿದರೆ ಚೆನ್ನೈ, ದೆಹಲಿ, ಕೊಲ್ಕತ್ತಾ, ಲಕ್ನೋ, ಕೊಯಮತ್ತೂರು, ಮಧುರೈ, ಜೈಪುರ, ಅಹಮದಾಬಾದ್, ಚಂಡೀಗಢದಲ್ಲಿ ಚಿನ್ನದ ಬೆಲೆ ಭಾರೀ ಏರಿಕೆಯಾಗಿದೆ. ಈ ನಗರಗಳಲ್ಲಿ ಚಿನ್ನದ ಬೆಲೆ 49,000 ರೂ. ದಾಟಿದೆ.

    ಇದನ್ನೂ ಓದಿ: Bengaluru Water Supply | ಬೆಂಗಳೂರಿನ ಈ ಏರಿಯಾಗಳಲ್ಲಿ ಇಂದು ಕಾವೇರಿ ನೀರು ಬರುವುದಿಲ್ಲ

    ಭಾರತದಲ್ಲಿ ಬೆಳ್ಳಿ ಬೆಲೆಯಲ್ಲಿ ಇಂದು ಕೊಂಚ ಏರಿಕೆಯಾಗಿದೆ. ನಿನ್ನೆ 1 ಕೆಜಿಗೆ 67 ಸಾವಿರ ರೂ. ಇದ್ದ ಬೆಳ್ಳಿ ದರ ಇಂದು 68,700 ರೂ. ಆಗಿದೆ. ಬೆಂಗಳೂರು, ಮೈಸೂರು, ಮಂಗಳೂರಿನಲ್ಲಿ 1 ಕೆಜಿ ಬೆಳ್ಳಿಯ ಬೆಲೆಯಲ್ಲಿ ಕೊಂಚ ಏರಿಕೆಯಾಗಿದ್ದು, ಇಂದು 68,200 ರೂ. ಆಗಿದೆ. ಉಳಿದಂತೆ ಚೆನ್ನೈ, ಹೈದರಾಬಾದ್, ಕೊಯಮತ್ತೂರು, ಭುವನೇಶ್ವರ, ಮಧುರೈ, ವಿಜಯವಾಡ, ವಿಶಾಖಪಟ್ಟಣಂನಲ್ಲಿ ಬೆಳ್ಳಿಯ ಬೆಲೆ 72,500 ರೂ. ದಾಟಿದೆ.

    ಕಷ್ಟಕಾಲದಲ್ಲಿ ನೆರವಾಗುವ ಚಿನ್ನದ ಮೇಲೆ ಹೂಡಿಕೆ ಮಾಡುವುದು ಈಗಿನ ಪದ್ಧತಿಯಲ್ಲ. ಬಂಗಾರವನ್ನು ಖರೀದಿಸಿಟ್ಟರೆ ನಮ್ಮ ಆಪತ್ಕಾಲದಲ್ಲಿ ಉಪಯೋಗಕ್ಕೆ ಬರುತ್ತದೆ ಎಂಬುದು ಬಹುತೇಕ ಎಲ್ಲ ಭಾರತೀಯರ ಲೆಕ್ಕಾಚಾರ. ಹೀಗಾಗಿ, ಕೈಯಲ್ಲಿ ಹಣವಿದ್ದಾಗ ಚಿನ್ನದ ಮೇಲೆ ಹೂಡಿಕೆ ಮಾಡುವವರ ಸಂಖ್ಯೆ ಇಂದಿಗೂ ಕಡಿಮೆಯಾಗಿಲ್ಲ. ಆದರೆ, ಕೊರೋನಾದಿಂದಾಗಿ ಚಿನ್ನವನ್ನು ಕೊಳ್ಳುವವರ ಸಂಖ್ಯೆ ಹೇಗೆ ಕಡಿಮೆಯಾಯಿತೋ ಅದೇರೀತಿ ಚಿನ್ನದ ಪೂರೈಕೆಯಲ್ಲಿಯೂ ವ್ಯತ್ಯಯವಾಯಿತು. ಇದರಿಂದ ಬಂಗಾರದ ಬೆಲೆ ಗಗನಕ್ಕೇರಿತ್ತು.

    ಕೊರೋನಾ ವೈರಸ್​ ಹರಡುವಿಕೆ ಹೆಚ್ಚಾದ ಬೆನ್ನಲ್ಲೇ ಬಹುತೇಕ ಆರ್ಥಿಕ ವ್ಯವಹಾರಗಳು ಸ್ಥಗಿತಗೊಂಡಿದ್ದವು. ರಿಯಲ್​ ಎಸ್ಟೇಟ್​ ಸೇರಿ ಸಾಕಷ್ಟು ಉದ್ಯಮಗಳು ನೆಲ ಕಚ್ಚಿದ್ದವು. ಇದರ ನೇರ ಪರಿಣಾಮ ಚಿನ್ನದ ಮಾರುಕಟ್ಟೆಯ ಮೇಲೆ ಉಂಟಾಗಿತ್ತು. ಲಾಕ್​ಡೌನ್​ ತೆರವಾಗುತ್ತಿದ್ದಂತೆ ನಿಧಾನವಾಗಿ ಆರ್ಥಿಕ ಚಟುವಟಿಕೆಗಳು ಚೇತರಿಕೆ ಪಡೆದುಕೊಳ್ಳುತ್ತಿವೆ.
    Published by:Sushma Chakre
    First published: