Gold Rate Today | ಭಾರತದಲ್ಲಿ ಎರಡು ದಿನಗಳಿಂದ ಏರಿಕೆಯಾಗಿದ್ದ ಚಿನ್ನದ ಬೆಲೆ ಇಂದು ಮತ್ತೆ ಕೊಂಚ ಇಳಿಕೆಯಾಗಿದೆ. ದೇಶದ ನಾನಾ ನಗರಗಳಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ 50,000 ರೂ. ದಾಟಿದೆ. ನೀವೇನಾದರೂ ಚಿನ್ನ ಖರೀದಿಸಲು ಯೋಚಿಸುತ್ತಿದ್ದರೆ ಇಂದು ಯಾವ ಯಾವ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ ಎಂಬ ಬಗ್ಗೆ ಇಲ್ಲಿದೆ ಮಾಹಿತಿ. ಬೆಂಗಳೂರಿನಲ್ಲಿ ಚಿನ್ನದ ಬೆಲೆ ಭಾರೀ ಇಳಿಕೆಯಾಗಿದ್ದು, 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ಇಂದು 47,350 ರೂ. ಆಗಿದೆ. 22 ಕ್ಯಾರೆಟ್ನ 10 ಗ್ರಾಂ ಚಿನ್ನಕ್ಕೆ ಬೆಂಗಳೂರಿನಲ್ಲಿ ಇಂದು 43,400 ರೂ. ಆಗಿದೆ. ಬೆಳ್ಳಿ ಬೆಲೆಯಲ್ಲಿ ಇಳಿಕೆಯಾಗಿದ್ದು, ನಿನ್ನೆ 70 ಸಾವಿರವಿದ್ದ ಬೆಳ್ಳಿ ಬೆಲೆ ಇಂದು 69 ಸಾವಿರಕ್ಕೆ ಇಳಿಕೆಯಾಗಿದೆ.
ಭಾರತದಲ್ಲಿ 2 ದಿನಗಳ ಹಿಂದೆ 46,400 ರೂ. ಇದ್ದ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ ಇಂದು 45,680 ರೂ.ಗೆ ಇಳಿಕೆಯಾಗಿದೆ. 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 48,020 ರೂ. ಇದ್ದುದು ಇಂದು 46,680 ರೂ. ಆಗಿದೆ. ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ವ್ಯತ್ಯಾಸವಾಗಲಿದೆ. ಬೆಂಗಳೂರಿನಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ 47,350 ರೂ. ಆಗಿದೆ. ಹಾಗೇ, 22 ಕ್ಯಾರೆಟ್ನ 10 ಗ್ರಾಂ ಚಿನ್ನಕ್ಕೆ ಇಂದು 43,400 ರೂ. ಆಗಿದೆ. ಮೈಸೂರು, ವಿಶಾಖಪಟ್ಟಣಂ, ಮಂಗಳೂರು, ವಿಜಯವಾಡ, ಮುಂಬೈ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಹೆಚ್ಚೂ ಕಡಿಮೆ ಇದೇ ಬೆಲೆಯಿದೆ.
ಬೇರೆಲ್ಲ ನಗರಗಳಿಗೆ ಹೋಲಿಸಿದರೆ ಚೆನ್ನೈ, ದೆಹಲಿ, ಕೊಲ್ಕತ್ತಾ, ಲಕ್ನೋ, ಕೊಯಮತ್ತೂರು, ಮಧುರೈ, ಜೈಪುರ, ಅಹಮದಾಬಾದ್, ಚಂಡೀಗಢದಲ್ಲಿ ಚಿನ್ನದ ಬೆಲೆ ಭಾರೀ ಏರಿಕೆಯಾಗಿದೆ. ಈ ನಗರಗಳಲ್ಲಿ ಚಿನ್ನದ ಬೆಲೆ 50,000 ರೂ. ದಾಟಿದೆ.
ಇದನ್ನೂ ಓದಿ: Petrol Price: ಗಗನಕ್ಕೇರಿದ ಪೆಟ್ರೋಲ್-ಡೀಸೆಲ್ ಬೆಲೆ; ರಾಜಸ್ಥಾನದಲ್ಲಿ 1 ಲೀಟರ್ ಪೆಟ್ರೋಲ್ಗೆ 100 ರೂ!
ಭಾರತದಲ್ಲಿ ಬೆಳ್ಳಿ ಬೆಲೆ ಮತ್ತೆ ಇಳಿಕೆಯಾಗಿದ್ದು, ನಿನ್ನೆ 70 ಸಾವಿರವಿದ್ದ ಬೆಳ್ಳಿ ಬೆಲೆ ಇಂದು 1 ಕೆಜಿಗೆ 69,500 ರೂ. ಆಗಿದೆ. ಬೆಂಗಳೂರು, ಮೈಸೂರು, ಮಂಗಳೂರಿನಲ್ಲಿ 1 ಕೆಜಿ ಬೆಳ್ಳಿಯ ಬೆಲೆಯಲ್ಲಿ ಏರಿಕೆಯಾಗಿದ್ದು, ಇಂದು 71,200 ರೂ. ಆಗಿದೆ. ಉಳಿದಂತೆ ಚೆನ್ನೈ, ಹೈದರಾಬಾದ್, ಕೊಯಮತ್ತೂರು, ಭುವನೇಶ್ವರ, ಮಧುರೈ, ವಿಜಯವಾಡ, ವಿಶಾಖಪಟ್ಟಣಂನಲ್ಲಿ ಬೆಳ್ಳಿಯ ಬೆಲೆ 75,000 ರೂ. ದಾಟಿದೆ.
ಕಷ್ಟಕಾಲದಲ್ಲಿ ನೆರವಾಗುವ ಚಿನ್ನದ ಮೇಲೆ ಹೂಡಿಕೆ ಮಾಡುವುದು ಈಗಿನ ಪದ್ಧತಿಯಲ್ಲ. ಬಂಗಾರವನ್ನು ಖರೀದಿಸಿಟ್ಟರೆ ನಮ್ಮ ಆಪತ್ಕಾಲದಲ್ಲಿ ಉಪಯೋಗಕ್ಕೆ ಬರುತ್ತದೆ ಎಂಬುದು ಬಹುತೇಕ ಎಲ್ಲ ಭಾರತೀಯರ ಲೆಕ್ಕಾಚಾರ. ಹೀಗಾಗಿ, ಕೈಯಲ್ಲಿ ಹಣವಿದ್ದಾಗ ಚಿನ್ನದ ಮೇಲೆ ಹೂಡಿಕೆ ಮಾಡುವವರ ಸಂಖ್ಯೆ ಇಂದಿಗೂ ಕಡಿಮೆಯಾಗಿಲ್ಲ. ಆದರೆ, ಕೊರೋನಾದಿಂದಾಗಿ ಚಿನ್ನವನ್ನು ಕೊಳ್ಳುವವರ ಸಂಖ್ಯೆ ಹೇಗೆ ಕಡಿಮೆಯಾಯಿತೋ ಅದೇರೀತಿ ಚಿನ್ನದ ಪೂರೈಕೆಯಲ್ಲಿಯೂ ವ್ಯತ್ಯಯವಾಯಿತು. ಇದರಿಂದ ಬಂಗಾರದ ಬೆಲೆ ಗಗನಕ್ಕೇರಿತ್ತು.
ಕೊರೋನಾ ವೈರಸ್ ಹರಡುವಿಕೆ ಹೆಚ್ಚಾದ ಬೆನ್ನಲ್ಲೇ ಬಹುತೇಕ ಆರ್ಥಿಕ ವ್ಯವಹಾರಗಳು ಸ್ಥಗಿತಗೊಂಡಿದ್ದವು. ರಿಯಲ್ ಎಸ್ಟೇಟ್ ಸೇರಿ ಸಾಕಷ್ಟು ಉದ್ಯಮಗಳು ನೆಲ ಕಚ್ಚಿದ್ದವು. ಇದರ ನೇರ ಪರಿಣಾಮ ಚಿನ್ನದ ಮಾರುಕಟ್ಟೆಯ ಮೇಲೆ ಉಂಟಾಗಿತ್ತು. ಲಾಕ್ಡೌನ್ ತೆರವಾಗುತ್ತಿದ್ದಂತೆ ನಿಧಾನವಾಗಿ ಆರ್ಥಿಕ ಚಟುವಟಿಕೆಗಳು ಚೇತರಿಕೆ ಪಡೆದುಕೊಳ್ಳುತ್ತಿವೆ.