Gold Rate: ಸತತ ಎರಡನೇ ದಿನವೂ ಏರಿಕೆ ಕಂಡ ಚಿನ್ನ; ಇಲ್ಲಿದೆ ಇಂದಿನ ಆಭರಣ ದರ

ಕಳೆದ ವಾರ ಬೆಳ್ಳಿ ದರ 4 ದಿನ ಇಳಿಕೆ ಹಾಗೂ 2  ದಿನ ಏರಿಕೆ ಕಂಡಿದೆ.  ಈ ಮೂಲಕ ಬೆಳ್ಳಿ ದರ 2100 ಇಳಿಕೆ  ಕಂಡಂತಾಗಿತ್ತು. ಗುರುವಾರ ಕೆಜಿ ಬೆಳ್ಳಿಗೆ 500 ರೂಪಾಯಿ ಇಳಿಕೆ ಕಾಣುವ ಮೂಲಕ 63,000 ರೂಪಾಯಿ ಆಗಿದೆ.

news18-kannada
Updated:October 23, 2020, 9:42 AM IST
Gold Rate: ಸತತ ಎರಡನೇ ದಿನವೂ ಏರಿಕೆ ಕಂಡ ಚಿನ್ನ; ಇಲ್ಲಿದೆ ಇಂದಿನ ಆಭರಣ ದರ
ಸಾಂದರ್ಭಿಕ ಚಿತ್ರ
  • Share this:
Gold Price Today: ಬೆಂಗಳೂರು (ಅಕ್ಟೋಬರ್ 23): ಕೊರೋನಾ ವೈರಸ್​ ಹರಡುವಿಕೆ ಹೆಚ್ಚಿದ ಬೆನ್ನಲ್ಲೇ ಬಹುತೇಕ ಆರ್ಥಿಕ ವ್ಯವಹಾರಗಳು ಸ್ಥಗಿತಗೊಂಡಿದ್ದವು. ರಿಯಲ್​ ಎಸ್ಟೇಟ್​ ಸೇರಿ ಸಾಕಷ್ಟು ಉದ್ಯಮಗಳು ನೆಲಕಚ್ಚಿದ್ದವು. ಇದರ ನೇರ ಪರಿಣಾಮ ಚಿನ್ನದ ಮಾರುಕಟ್ಟೆಯ ಮೇಲೆ ಉಂಟಾಗಿತ್ತು. ಜನರು ಚಿನ್ನದ ಮೇಲೆ ಹೂಡಿಕೆ ಮಾಡಲು ಮುಂದೆ ಬಂದಿದ್ದರು. ಈಗ ನಿಧಾನವಾಗಿ ಆರ್ಥಿಕ ಚಟುವಟಿಕೆಗಳು ಚೇತರಿಕೆ ಪಡೆದುಕೊಳ್ಳುತ್ತಿವೆ. ಈ ಮಧ್ಯೆ ಚಿನ್ನದ ಬೆಲೆ ಏರಿಳಿತ ಕಾಣುತ್ತಿದೆ. ಕಳೆದ ಸೋಮವಾರದಿಂದ ಶನಿವಾರದವರೆಗೆ ಚಿನ್ನದ ದರ ಮೂರು ದಿನ ಏರಿಕೆ ಕಂಡು ಎರಡು ದಿನ ಇಳಿಕೆ ಕಂಡಿದೆ. ಈ ಮೂಲಕ 10ಗ್ರಾಂ ಆಭರಣ ಚಿನ್ನ ಕಳೆದ  ವಾರ ಒಟ್ಟು 260 ರೂಪಾಯಿ ಇಳಿಕೆ ಕಂಡಂತಾಗಿದೆ.

ವಾರದ ಆರಂಭದಲ್ಲಿ ಎರಡು ದಿನದಲ್ಲಿ ಇಳಿಕೆ ಕಂಡ ಚಿನ್ನ ಬುಧವಾರ ಹಾಗೂ ಗುರುವಾರ ಏರಿಕೆ ಕಂಡಿದೆ. ಚಿನ್ನದ ದರ ಏರಿಕೆ ಕಂಡಿದೆ.  ಆಭರಣ ಚಿನ್ನ 10 ಗ್ರಾಂಗೆ 150 ರೂಪಾಯಿ ಏರಿಕೆ ಕಾಣುವ ಮೂಲಕ 47,200 ರೂಪಾಯಿ ಆಗಿದೆ. ಇನ್ನು, ಶುದ್ಧ ಚಿನ್ನ 10 ಗ್ರಾಂಗೆ 170 ರೂಪಾಯಿ ಏರಿಕೆ ಕಾಣುವ ಮೂಲಕ 51,490 ರೂಪಾಯಿ ಇದೆ.

ಕಳೆದ ವಾರ ಬೆಳ್ಳಿ ದರ 4 ದಿನ ಇಳಿಕೆ ಹಾಗೂ 2  ದಿನ ಏರಿಕೆ ಕಂಡಿದೆ.  ಈ ಮೂಲಕ ಬೆಳ್ಳಿ ದರ 2100 ಇಳಿಕೆ  ಕಂಡಂತಾಗಿತ್ತು. ಗುರುವಾರ ಕೆಜಿ ಬೆಳ್ಳಿಗೆ 500 ರೂಪಾಯಿ ಇಳಿಕೆ ಕಾಣುವ ಮೂಲಕ 63,000 ರೂಪಾಯಿ ಆಗಿದೆ.

ಅನೇಕ ವಿಚಾರಗಳು ಚಿನ್ನದ ಬೆಲೆಯನ್ನು ನಿರ್ಧರಿಸುತ್ತವೆ. ಹಣ ದುಬ್ಬರ, ಅಂತಾರಾಷ್ಟ್ರೀಯ ಮಾರುಕಟ್ಟೆ ಬೆಲೆ, ಬಡ್ಡಿ ದರ, ಜ್ಯುವೆಲರಿ ಮಾರುಕಟ್ಟೆ ಮತ್ತು ವ್ಯಾಪಾರ ಯುದ್ಧಗಳು ಚಿನ್ನದ ಬೆಲೆ ಏರಿಳಿತಕ್ಕೆ ನೇರ ಕಾರಣವಾಗುತ್ತವೆ. ಸದ್ಯ ಕೊರೋನಾ ವೈರಸ್​ ಇರುವುದರಿಂದ ಜನರಿಗೆ ಬೇರೆಲ್ಲೂ ಹೂಡಿಕೆ ಮಾಡಲು ಕ್ಷೇತ್ರಗಳು ಸಿಗುತ್ತಿಲ್ಲ. ಹೀಗಾಗಿ, ಚಿನ್ನದ ಮೇಲೆ ಹೂಡಿಕೆ ಮಾಡುತ್ತಿದ್ದಾರೆ. ಇದರಿಂದ ಸಹಜವಾಗಿಯೇ ಚಿನ್ನದ ದರದಲ್ಲಿ ಏರಿಕೆ ಕಂಡಿತ್ತು.

Gold prices: Gold at Rs 65,000 by Diwali? What experts say? here is the details,
Gold prices


ಮತ್ತೆ ಏರಿಕೆ ಕಾಣಲಿದೆ ಚಿನ್ನ?:
ವಿಶ್ವದ ಆರ್ಥಿಕತೆ ತಲೆಕೆಳೆಗಾಗಿದೆ. ಹೀಗಾಗಿ ಯಾವ ಮಾರುಕಟ್ಟೆಯ ಮೇಲೂ ಖಚಿತವಾಗಿ ಏನನ್ನೂ ಹೇಳಲೂ ಸಾಧ್ಯವಾಗುತ್ತಿಲ್ಲ. ಹೀಗಾಗಿ ಮುಂದಿನ ದಿನಗಳಲ್ಲಿ ಚಿನ್ನದ ದರ ಏರಿಕೆ ಆಗಲಿದೆ ಎಂದು ತಜ್ಞರು ಹೇಳುತ್ತಿದ್ದಾರೆ.
Published by: Rajesh Duggumane
First published: October 23, 2020, 9:42 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading