Gold Rate Today: ಹಬ್ಬದ ಸಮಯದಲ್ಲೇ ಗ್ರಾಹಕರಿಗೆ ಕಹಿ ಸುದ್ದಿ; ಸತತ ಏರಿಕೆ ಕಾಣುತ್ತಲೇ ಇದೆ ಚಿನ್ನದ ದರ
ಕಳೆದ ವಾರ ಬೆಳ್ಳಿ ದರ 3 ದಿನ ಇಳಿಕೆ ಹಾಗೂ 4 ದಿನ ಏರಿಕೆ ಕಂಡಿದೆ. ಈ ಮೂಲಕ ಬೆಳ್ಳಿ ದರ 2000 ಇಳಿಕೆ ಕಂಡಂತಾಗಿತ್ತು. ಮಂಗಳವಾರ ಕೆಜಿ ಬೆಳ್ಳಿಗೆ 2000 ರೂಪಾಯಿ ಏರಿಕೆ ಆಗಿದೆ. ಈ ಮೂಲಕ 64,500 ರೂಪಾಯಿ ಆಗಿದೆ.
Gold Price Today: ಬೆಂಗಳೂರು (ನವೆಂಬರ್ 7): ಕೊರೋನಾ ವೈರಸ್ ಹರಡುವಿಕೆ ಹೆಚ್ಚಿದ ಬೆನ್ನಲ್ಲೇ ಬಹುತೇಕ ಆರ್ಥಿಕ ವ್ಯವಹಾರಗಳು ಸ್ಥಗಿತಗೊಂಡಿದ್ದವು. ರಿಯಲ್ ಎಸ್ಟೇಟ್ ಸೇರಿ ಸಾಕಷ್ಟು ಉದ್ಯಮಗಳು ನೆಲಕಚ್ಚಿದ್ದವು. ಇದರ ನೇರ ಪರಿಣಾಮ ಚಿನ್ನದ ಮಾರುಕಟ್ಟೆಯ ಮೇಲೆ ಉಂಟಾಗಿತ್ತು. ಜನರು ಚಿನ್ನದ ಮೇಲೆ ಹೂಡಿಕೆ ಮಾಡಲು ಮುಂದೆ ಬಂದಿದ್ದರು. ಈಗ ನಿಧಾನವಾಗಿ ಆರ್ಥಿಕ ಚಟುವಟಿಕೆಗಳು ಚೇತರಿಕೆ ಪಡೆದುಕೊಳ್ಳುತ್ತಿವೆ. ಈ ಮಧ್ಯೆ ಚಿನ್ನದ ಬೆಲೆ ಏರಿಳಿತ ಕಾಣುತ್ತಿದೆ. ಕಳೆದ ಸೋಮವಾರದಿಂದ ಶನಿವಾರದವರೆಗೆ ಚಿನ್ನದ ದರ ಮೂರು ದಿನ ಏರಿಕೆ ಕಂಡು ಮೂರು ದಿನ ಇಳಿಕೆ ಕಂಡಿದೆ. ಈ ಮೂಲಕ 10ಗ್ರಾಂ ಆಭರಣ ಚಿನ್ನ ಕಳೆದ ವಾರ ಒಟ್ಟು 670 ರೂಪಾಯಿ ಏರಿಕೆ ಕಂಡಂತಾಗಿತ್ತು.
ಶುಕ್ರವಾರ ಆಭರಣ ಚಿನ್ನದ ದರ 10 ರೂಪಾಯಿ ಏರಿಕೆ ಕಂಡಿದೆ. ಈ ಮೂಲಕ 400 ಗ್ರಾಂ ಚಿನ್ನ 48,000 ರೂಪಾಯಿ ಆಗಿದೆ. ಶುದ್ಧ ಚಿನ್ನದ ದರ 10 ಗ್ರಾಂಗೆ 430 ರೂಪಾಯಿ ಏರಿಕೆ ಆಗಿದೆ. ಈ ಮೂಲಕ 52, 360 ರೂಪಾಯಿ ಆಗಿದೆ.
ಕಳೆದ ವಾರ ಬೆಳ್ಳಿ ದರ 3 ದಿನ ಇಳಿಕೆ ಹಾಗೂ 4 ದಿನ ಏರಿಕೆ ಕಂಡಿದೆ. ಈ ಮೂಲಕ ಬೆಳ್ಳಿ ದರ 2000 ಇಳಿಕೆ ಕಂಡಂತಾಗಿತ್ತು. ಮಂಗಳವಾರ ಕೆಜಿ ಬೆಳ್ಳಿಗೆ 2000 ರೂಪಾಯಿ ಏರಿಕೆ ಆಗಿದೆ. ಈ ಮೂಲಕ 64,500 ರೂಪಾಯಿ ಆಗಿದೆ.
ಅನೇಕ ವಿಚಾರಗಳು ಚಿನ್ನದ ಬೆಲೆಯನ್ನು ನಿರ್ಧರಿಸುತ್ತವೆ. ಹಣ ದುಬ್ಬರ, ಅಂತಾರಾಷ್ಟ್ರೀಯ ಮಾರುಕಟ್ಟೆ ಬೆಲೆ, ಬಡ್ಡಿ ದರ, ಜ್ಯುವೆಲರಿ ಮಾರುಕಟ್ಟೆ ಮತ್ತು ವ್ಯಾಪಾರ ಯುದ್ಧಗಳು ಚಿನ್ನದ ಬೆಲೆ ಏರಿಳಿತಕ್ಕೆ ನೇರ ಕಾರಣವಾಗುತ್ತವೆ. ಸದ್ಯ ಕೊರೋನಾ ವೈರಸ್ ಇರುವುದರಿಂದ ಜನರಿಗೆ ಬೇರೆಲ್ಲೂ ಹೂಡಿಕೆ ಮಾಡಲು ಕ್ಷೇತ್ರಗಳು ಸಿಗುತ್ತಿಲ್ಲ. ಹೀಗಾಗಿ, ಚಿನ್ನದ ಮೇಲೆ ಹೂಡಿಕೆ ಮಾಡುತ್ತಿದ್ದಾರೆ. ಇದರಿಂದ ಸಹಜವಾಗಿಯೇ ಚಿನ್ನದ ದರದಲ್ಲಿ ಏರಿಕೆ ಕಂಡಿತ್ತು.
Gold Jewellery
ಮತ್ತೆ ಏರಿಕೆ ಕಾಣಲಿದೆ ಚಿನ್ನ?: ವಿಶ್ವದ ಆರ್ಥಿಕತೆ ತಲೆಕೆಳೆಗಾಗಿದೆ. ಹೀಗಾಗಿ ಯಾವ ಮಾರುಕಟ್ಟೆಯ ಮೇಲೂ ಖಚಿತವಾಗಿ ಏನನ್ನೂ ಹೇಳಲೂ ಸಾಧ್ಯವಾಗುತ್ತಿಲ್ಲ. ಹೀಗಾಗಿ ಮುಂದಿನ ದಿನಗಳಲ್ಲಿ ಚಿನ್ನದ ದರ ಏರಿಕೆ ಆಗಲಿದೆ ಎಂದು ತಜ್ಞರು ಹೇಳುತ್ತಿದ್ದಾರೆ.
Published by:Rajesh Duggumane
First published:
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ