ಮಹಾರಾಷ್ಟ್ರ ಸರ್ಕಾರಿ ನೌಕರರಿಗೆ ಗುಡ್​ನ್ಯೂಸ್; ವಾರದಲ್ಲಿ ಐದು ದಿನ ಮಾತ್ರ ಕೆಲಸ

ಸರ್ಕಾರಿ ನೌಕರರ ಕಾರ್ಯಕ್ಷಮತೆ ಹೆಚ್ಚಿಸಲು ಹಾಗೂ ಅವರ ವೈಯಕ್ತಿಕ ಜೀವನವನ್ನು ಗಮನದಲ್ಲಿ ಇಟ್ಟುಕೊಂಡು ಕೆಲಸದ ಅವಧಿಯನ್ನು ವಾರದಲ್ಲಿ 5 ದಿನಕ್ಕೆ ನಿಗದಿ ಮಾಡಲಾಗಿದೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ.

ಉದ್ಧವ್ ಠಾಕ್ರೆ

ಉದ್ಧವ್ ಠಾಕ್ರೆ

 • Share this:
  ಮುಂಬೈ: ಮಹಾರಾಷ್ಟ್ರದ ಸರ್ಕಾರಿ ಅಧಿಕಾರಿ ಮತ್ತು ನೌಕರರು ಇನ್ನು ಮುಂದೆ ವಾರಕ್ಕೆ ಐದೇ ದಿನ ಕೆಲಸ ನಿಗದಿ ಮಾಡಿ, ಸರ್ಕಾರ ಆದೇಶ ಹೊರಡಿಸಿದೆ. ಫೆಬ್ರವರಿ 29ರ ಬಳಿಕ ಅನ್ವಯವಾಗುವಂತೆ ಇನ್ಮುಂದೆ ಮಹಾರಾಷ್ಟ್ರದ ಸರ್ಕಾರಿ ನೌಕರರಿಗೆ ವಾರಾಂತ್ಯದ ರಜೆ ದೊರಕಲಿದೆ.

  ಸರ್ಕಾರಿ ಉದ್ಯೋಗಿಗಳು ವಾರದಲ್ಲಿ ಐದು ದಿನ ಮಾತ್ರ ಕರ್ತವ್ಯ ನಿರ್ವಹಿಸಬೇಕು ಎಂದು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದಲ್ಲಿ ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ತೆಗೆದುಕೊಳ್ಳಲಾಗಿದೆ.

  ಸರ್ಕಾರಿ ನೌಕರರ ಕಾರ್ಯಕ್ಷಮತೆ ಹೆಚ್ಚಿಸಲು ಹಾಗೂ ಅವರ ವೈಯಕ್ತಿಕ ಜೀವನವನ್ನು ಗಮನದಲ್ಲಿ ಇಟ್ಟುಕೊಂಡು ಕೆಲಸದ ಅವಧಿಯನ್ನು ವಾರದಲ್ಲಿ 5 ದಿನಕ್ಕೆ ನಿಗದಿ ಮಾಡಲಾಗಿದೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ.

  ಇದನ್ನು ಓದಿ: 26/11 ಮುಂಬೈ ದಾಳಿಯ ರೂವಾರಿ ಹಫೀಜ್ ಸಯೀದ್​ಗೆ 5 ವರ್ಷ ಜೈಲು ಶಿಕ್ಷೆ ವಿಧಿಸಿದ ಪಾಕ್ ನ್ಯಾಯಾಲಯ

  ಸರ್ಕಾರಿ, ಅರೆ ಸರ್ಕಾರಿ, ಸ್ಥಳೀಯ ಆಡಳಿತದಲ್ಲಿ 20 ಲಕ್ಷಕ್ಕೂ ಹೆಚ್ಚು ಉದ್ಯೋಗಿಗಳು ಮಹಾರಾಷ್ಟ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರೆಲ್ಲರಿಗೂ ಈ ನೂತನ ನಿಯಮ ಅನ್ವಯವಾಗಲಿದೆ. ಆದರೆ, ದಿನದ ಕೆಲಸದ ಅವಧಿಯನ್ನು 45 ನಿಮಿಷಗಳಷ್ಟು ಅಧಿಕಗೊಳಿಸಲಾಗಿದೆ. ಬೆಳಗಿನ ಸಮಯ 9.45ರಿಂದ ಸಾಯಂಕಾಲ 5.30ರವರೆಗೆ ಹಾಗೂ ಬೆಳಗ್ಗೆ 10 ಗಂಟೆಯಿಂದ ಸಂಜೆ 5.45ರವರೆಗೆ ಕೆಲಸದ ಅವಧಿ ನಿಗದಿ ಮಾಡಲಾಗಿದೆ.
  First published: