ಮಹಾರಾಷ್ಟ್ರ ಸರ್ಕಾರ ರಚನೆಗೆ ಫಡ್ನವೀಸ್​ಗೆ ರಾಜ್ಯಪಾಲರ ಆಹ್ವಾನ, ಶಿವಸೇನೆ ನಿಲುವು ಇನ್ನೂ ಬದಲಿಲ್ಲ

ಕಳೆದ ಅಕ್ಟೋಬರ್ 21ರಂದು ಮಹಾರಾಷ್ಟ್ರ ವಿಧಾನಸಭೆಗೆ ಚುನಾವಣೆ ನಡೆದಿತ್ತು. ಅ.24ರಂದು ಫಲಿತಾಂಶ ಪ್ರಕಟವಾಗಿತ್ತು. ಆದಾಗ್ಯೂ, ಫಲಿತಾಂಶ ಪ್ರಕಟಗೊಂಡು 15 ದಿನ ಕಳೆದರೂ ಯಾವೊಂದು ಪಕ್ಷ ಅಥವಾ ಮೈತ್ರಿಕೂಟ ಸರ್ಕಾರ ರಚನೆಗೆ ಹಕ್ಕು ಮುಂದಾಗಲಿಲ್ಲ.

HR Ramesh | news18-kannada
Updated:November 9, 2019, 8:03 PM IST
ಮಹಾರಾಷ್ಟ್ರ ಸರ್ಕಾರ ರಚನೆಗೆ ಫಡ್ನವೀಸ್​ಗೆ ರಾಜ್ಯಪಾಲರ ಆಹ್ವಾನ, ಶಿವಸೇನೆ ನಿಲುವು ಇನ್ನೂ ಬದಲಿಲ್ಲ
ಶುಕ್ರವಾರ ರಾಜ್ಯಪಾಲರನ್ನು ಭೇಟಿಯಾಗಿದ್ದ ದೇವೇಂದ್ರ ಫಡ್ನವೀಸ್
  • Share this:
ಮುಂಬೈ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಬಿಜೆಪಿಗೆ ಸರ್ಕಾರ ರಚನೆಗೆ ಪ್ರಕ್ರಿಯೆ ಆರಂಭಿಸುವಂತೆ ದೇವೇಂದ್ರ ಫಡ್ನವೀಸ್ ಅವರಿಗೆ ರಾಜ್ಯಪಾಲ ಭಗತ್ ಸಿಂಗ್ ಕೌಶ್ಯತ್ರಿ ಅವರು ಆಹ್ವಾನ ನೀಡಿದ್ದಾರೆ.

ಕಳೆದ ಅಕ್ಟೋಬರ್ 21ರಂದು ಮಹಾರಾಷ್ಟ್ರ ವಿಧಾನಸಭೆಗೆ ಚುನಾವಣೆ ನಡೆದಿತ್ತು. ಅ.24ರಂದು ಫಲಿತಾಂಶ ಪ್ರಕಟವಾಗಿತ್ತು. ಆದಾಗ್ಯೂ, ಫಲಿತಾಂಶ ಪ್ರಕಟಗೊಂಡು 15 ದಿನ ಕಳೆದರೂ ಯಾವೊಂದು ಪಕ್ಷ ಅಥವಾ ಮೈತ್ರಿಕೂಟ ಸರ್ಕಾರ ರಚನೆಗೆ ಹಕ್ಕು ಮುಂದಾಗಲಿಲ್ಲ. ಹೀಗಾಗಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಬಿಜೆಪಿಗೆ ಸರ್ಕಾರ ರಚಿಸುವಂತೆ ಇಂದು ರಾಜ್ಯಪಾಲರು ಆಹ್ವಾನ ನೀಡಿದ್ದಾರೆ.

ಮಹಾರಾಷ್ಟ್ರದಲ್ಲಿ ಬಿಜೆಪಿ-ಶಿವಸೇನೆ ಮೈತ್ರಿಯಾಗಿಯೇ ಚುನಾವಣೆ ಎದುರಿಸಿದ್ದವು. ಆದರೆ, ಫಲಿತಾಂಶ ಪ್ರಕಟಗೊಂಡ ಬಳಿಕ, ಬಿಜೆಪಿ ನಿರೀಕ್ಷಿತ ಗೆಲುವು ಸಾಧಿಸದ ಕಾರಣಕ್ಕೆ, ಶಿವಸೇನೆ ಮುಖ್ಯಮಂತ್ರಿ ಸ್ಥಾನ ಹಂಚಿಕೆಯ ಬೇಡಿಕೆಯನ್ನು ಮುಂದಿಟ್ಟರು. ಆದರೆ, ಬಿಜೆಪಿ ಮಾತ್ರ ಸಿಎಂ ಸ್ಥಾನ ಬಿಟ್ಟುಕೊಡಲು ಸುತಾರಾಂ ಒಪ್ಪದ ಕಾರಣ ಮೈತ್ರಿಯಲ್ಲಿ ಹಗ್ಗಜಗ್ಗಾಟ ಈಗಲೂ ಮುಂದುವರೆದಿದೆ. ಏತನ್ಮಧ್ಯೆ ಮಹಾರಾಷ್ಟ್ರ ಹಾಲಿ ವಿಧಾನಸಭೆಯ ಅವಧಿ ಇಂದಿಗೆ ಮುಕ್ತಾಯಗೊಳ್ಳಲಿದೆ. ನೆನ್ನೆ ಸರ್ಕಾರ ರಚನೆಗೆ ಹಕ್ಕು ಮಂಡಿಸದೆ ದೇವೇಂದ್ರ ಫಡ್ನವೀಸ್ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದೀಗ ಸ್ವಸಾಮರ್ಥ್ಯದ ಮೇಲೆ ಸರ್ಕಾರ ರಚನೆ ಮಾಡುವಂತೆ ಬಿಜೆಪಿ ಶಾಸಕರಿಗೆ ರಾಜ್ಯಪಾಲರು ತಿಳಿಸಿದ್ದಾರೆ. ಸರ್ಕಾರ ರಚನೆ ಬಳಿಕ ಬಿಜೆಪಿ ಬಹುಮತ ಸಾಬೀತು ಪಡಿಸಬೇಕಾಗುತ್ತದೆ.

ಇದನ್ನು ಓದಿ: ಬಗೆಹರಿಯದ ಮಹಾ ಬಿಕ್ಕಟ್ಟು; ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ದೇವೇಂದ್ರ ಫಡ್ನವೀಸ್

First published: November 9, 2019, 8:01 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading