• ಹೋಂ
 • »
 • ನ್ಯೂಸ್
 • »
 • ದೇಶ-ವಿದೇಶ
 • »
 • Mekedatu: ಮೇಕೆದಾಟು ಯೋಜನೆ ಬಗ್ಗೆ ಸಚಿವ ಕಾರಜೋಳ ಚರ್ಚೆ, ಶೀಘ್ರವೇ ಸಿಗುತ್ತಾ ಕೇಂದ್ರದ ಗ್ರೀನ್‌ ಸಿಗ್ನಲ್?

Mekedatu: ಮೇಕೆದಾಟು ಯೋಜನೆ ಬಗ್ಗೆ ಸಚಿವ ಕಾರಜೋಳ ಚರ್ಚೆ, ಶೀಘ್ರವೇ ಸಿಗುತ್ತಾ ಕೇಂದ್ರದ ಗ್ರೀನ್‌ ಸಿಗ್ನಲ್?

ಗೋವಿಂದ ಕಾರಜೋಳ ಮತ್ತು ಗಜೇಂದ್ರ ಸಿಂಗ್ ಶೇಖಾವತ್

ಗೋವಿಂದ ಕಾರಜೋಳ ಮತ್ತು ಗಜೇಂದ್ರ ಸಿಂಗ್ ಶೇಖಾವತ್

ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್ ಮುಂದಿನ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಸಭೆಯಲ್ಲಿ ಮೇಕೆದಾಟು ಯೋಜನೆಗೆ ಅನುಮತಿ ನೀಡುವ ಬಗ್ಗೆ ಚರ್ಚೆ ಮಾಡಲು ಅವಕಾಶ ಕೊಡಬಾರದು ಎಂದು ಹೇಳಿದ್ದಾರೆ. ಆದರೆ ಮೇಕೆದಾಟು ಯೋಜನೆ ಬಗ್ಗೆ ಚರ್ಚೆಗೆ ಅವಕಾಶ ಕೊಡಿ ಎಂದು ಕರ್ನಾಟಕ ಕೇಳುತ್ತಿದೆ.

 • Share this:

ನವದೆಹಲಿ, ಜೂ. 16: ಬೆಂಗಳೂರಿನ ಕುಡಿಯುವ ನೀರಿಗಾಗಿ ರೂಪಿಸಿದ ಮೇಕೆದಾಟು (Mekedatu) ಅಣೆಕಟ್ಟು ನಿರ್ಮಾಣ ಯೋಜನೆಗೆ ಅನುಮತಿ ನೀಡದಂತೆ ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ (Prime Minister Narendara Modi) ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ (Tamil Nadu Chief Minister M.K. Stalin) ಪತ್ರ ಬರೆದ ಹಿನ್ನೆಲೆಯಲ್ಲಿ ರಾಜ್ಯ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ (Govind Karjol) ಅವರು ಕೇಂದ್ರದ ಜಲಸಂಪನ್ಮೂಲ ಸಚಿವ ಗಜೇಂದ್ರ ಸಿಂಗ್ ಶೇಖಾವತ್ (Gajendra Sing Shekhawath) ಅವರನ್ನು ಭೇಟಿ ಸಮಾಲೋಚನೆ ನಡೆಸಿದ್ದಾರೆ.


CWMA ಸಭೆಯ ಅಜೆಂಡಾ ಬಗ್ಗೆ ಚರ್ಚೆ


ಪ್ರಧಾನ ಮಂತ್ರಿಗೆ ಬರೆದ ಪತ್ರದಲ್ಲಿ ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, ಮುಂದಿನ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಸಭೆಯಲ್ಲಿ ಮೇಕೆದಾಟು ಯೋಜನೆಗೆ ಅನುಮತಿ ನೀಡುವ ಬಗ್ಗೆ ಚರ್ಚೆ ಮಾಡಲು ಅವಕಾಶ ಕೊಡಬಾರದು ಎಂದು ಹೇಳಿದ್ದಾರೆ. ಮೇಕೆದಾಟು ಯೋಜನೆ ಬಗ್ಗೆ ಚರ್ಚೆಗೆ ಅವಕಾಶ ಕೊಡಿ ಎಂದು ಕರ್ನಾಟಕ ಕೇಳುತ್ತಿದೆ. ಈ ಹಿನ್ನೆಲೆಯಲ್ಲಿ ಗೋವಿಂದ ಕಾರಜೋಳ ಅವರು ಕೇಂದ್ರದ ಜಲಸಂಪನ್ಮೂಲ ಸಚಿವ ಗಜೇಂದ್ರ ಸಿಂಗ್ ಶೆಖಾವತ್ ಅವರನ್ನು ಭೇಟಿ ಮಾಡಿದ್ದಾರೆ.


ಭದ್ರ ಮೇಲ್ದಂಡೆ ಯೋಜನೆ ಬಗ್ಗೆ ಚರ್ಚೆ


ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಗೋವಿಂದ ಕಾರಜೋಳ, 'ವಿವಿಧ ಹಂತಗಳಲ್ಲಿ ಬಾಕಿ ಇರುವ ಕರ್ನಾಟಕದ ಪ್ರಸ್ತಾವನೆಗಳನ್ನು ಅನುಮೋದಿಸಲು, ಮಂಜೂರಿ ಪಡೆಯಲು ಹಲವಾರು ಕೇಂದ್ರ ಸಚಿವರು, ಅಧಿಕಾರಿಗಳು ಮತ್ತು ಇತರ  ನಾಯಕರೊಂದಿಗೆ ಚರ್ಚಿಸಲಾಗಿದೆ.  ಕರ್ನಾಟಕದ ಭದ್ರಾ ಮೇಲ್ದಂಡೆ ಯೋಜನೆಯು ಬೃಹತ್ ನೀರಾವರಿ ಯೋಜನೆಯಾಗಿದ್ದು 29.90 ಟಿಎಂಸಿ ನೀರಿನ ಬಳಕೆಯೊಂದಿಗೆ (ತುಂಗಾ ನದಿಯಿಂದ 17.40 ಟಿಎಂಸಿ ಮತ್ತು ಭದ್ರಾ ಜಲಾಶಯದಿಂದ 12.50 ಟಿಎಂಸಿ ) ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ಹಾಗೂ ದಾವಣಗೆರೆ ಜಿಲ್ಲೆಗಳ 2,25,515 ಹೆಕ್ಟೇರ್ (5,57,022 ಎಕರೆ ) ಪ್ರದೇಶಕ್ಕೆ ಸೂಕ್ಷ್ಮ ನೀರಾವರಿ ಮೂಲಕ ನೀರಾವರಿ ಸೌಲಭ್ಯವನ್ನು ಕಲ್ಪಿಸಲು ಹಾಗೂ ಈ ಜಿಲ್ಲೆಗಳ 367 ಕೆರೆಗಳನ್ನು ಅವುಗಳ ಸಾಮರ್ಥ್ಯದ ಶೇಕಡಾ 50 ರಷ್ಟನ್ನು ತುಂಬಿಸುವ ಯೋಜನೆಯಾಗಿದೆ ಎಂದು ಹೇಳಿದ್ದಾರೆ.


ಇದನ್ನೂ ಓದಿ: ATMನಲ್ಲಿ ಒಂದು ಬಾರಿ ಕಾರ್ಡ್ ಹಾಕಿದ್ರೆ 5 ಬಾರಿ ಹಣ ಬರುತ್ತಂತೆ! ಕೆಲಸ ಬಿಟ್ಟು ಹಣಕ್ಕಾಗಿ ಕ್ಯೂ ನಿಂತ ಜನರು


ರಾಷ್ಟ್ರೀಯ ಯೋಜನೆ ಎಂದು ಪರಿಗಣಿಸುವಂತೆ ಮನವಿ


ಭದ್ರಾ ಮೇಲ್ದಂಡೆ ಯೋಜನೆಯು ರಾಷ್ಟ್ರೀಯ ಯೋಜನೆಯಾಗಿ ಘೋಷಿಸಲು ಎಲ್ಲಾ ಅರ್ಹತೆ ಹೊಂದಿದ್ದು ಈಗಾಗಲೇ ಅವಶ್ಯವಿರುವ ಎಲ್ಲ ಪೂರಕ ಅನುಮೋದನೆಗಳನ್ನು ಕೇಂದ್ರ ಜಲ ಆಯೋಗ ಮತ್ತು ಕೇಂದ್ರ ಸರ್ಕಾರದ ವಿವಿಧ ನಿರ್ದೇಶನಾಲಯಗಳಿಂದ ಪಡೆದುಕೊಂಡಿರುತ್ತದೆ. ಕೇಂದ್ರದ ಜಲಶಕ್ತಿ ಮಂತ್ರಾಲಯ ಜೂನ್ 15ರಂದು ನಡೆದ 14ನೇ ಉನ್ನತಾಧಿಕಾರ ಸಮಿತಿಯ ಸಭೆಯಲ್ಲಿ ಸದರಿ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಪರಿಗಣಿಸಲು ಕೇಂದ್ರ ಸಚಿವ ಸಂಪುಟಕ್ಕೆ ಶಿಫಾರಸು ಮಾಡಿದೆ.


21 ಸಾವಿರ ಕೋಟಿ ವೆಚ್ಚದ ಭದ್ರಾ ಯೋಜನೆ


ಸದರಿ ಯೋಜನೆಗೆ ತಗಲುವ ಒಟ್ಟಾರೆ ವೆಚ್ಚವು 21,473.67 ಕೋಟಿ ರೂಪಾಯಿಗಳಾಗಿದ್ದು ರಾಷ್ಟ್ರೀಯ ಯೋಜನೆಯಾಗಿ ಪರಿಗಣಿತವಾದ ನಂತರ ಕೇಂದ್ರ ಸರ್ಕಾರ ಈ ಯೋಜನೆಗೆ ರೂ 16125.48 (ಸೂಕ್ಷ್ಮ ನೀರಾವರಿ ಹೊರತುಪಡಿಸಿ) ಕೋಟಿ ರೂಪಾಯಿ ವೆಚ್ಚದಲ್ಲಿ ಶೇಕಡ 60 ರಷ್ಟು ಅಂದರೆ ರೂ 9675.29 ಕೋಟಿಗಳನ್ನು ಭರಿಸಲಿದೆ.


ರಾಷ್ಟ್ರೀಯ ಯೋಜನೆ ಅಂತ ಘೋಷಣೆ


ಅತಿ ಶೀಘ್ರದಲ್ಲಿ ಕೇಂದ್ರ ಸಚಿವ ಸಂಪುಟ ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸಲು ಸಂಬಂಧಿಸಿದಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಕೇಂದ್ರ ಜಲಸಂಪನ್ಮೂಲ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಮನವರಿಕೆ ಮಾಡಲಾಗಿದೆ. ಕೇಂದ್ರ ಸರ್ಕಾರ ರಾಷ್ಟ್ರೀಯ ಯೋಜನೆಯಾಗಿ ಘೋಷಿಸಲು ಒಪ್ಪಿಗೆ ಸೂಚಿಸಿದ್ದಾರೆ. ಇದು ಕರ್ನಾಟಕದ ಮೊದಲನೆಯ ರಾಷ್ಟ್ರೀಯ ಯೋಜನೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ ಎಂದು ತಿಳಿಸಿದ್ದಾರೆ.


ಮಹದಾಯಿ ಯೋಜನೆ ಬಗ್ಗೆ ಚರ್ಚೆ


ಮಹದಾಯಿ ಯೋಜನೆಯ ಕುರಿತು ಕೇಂದ್ರ ಜಲಸಂಪನ್ಮೂಲ ಸಚಿವ ಗಜೆಂದ್ರ ಸಿಂಗ್ ಶೇಖಾವತ್ ಅವರಿಗೆ ವಿಶೇಷ ಮನವಿ ಸಲ್ಲಿಸಲಾಯಿತು. ಕೇಂದ್ರ ಜಲಸಂಪನ್ಮೂಲ ಸಚಿವರು ಮಹಾದಾಯಿ ಯೋಜನೆಗೆ ಅನುಮೋದನೆ ನೀಡುವ ಕುರಿತು ಸಕಾರಾತ್ಮಕ ಪ್ರತಿಕ್ರಿಯೆ ನೀಡಿದರು. ಕೂಡಲೇ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನಗಳನ್ನು ನೀಡಿದರು. ಈ ಭೇಟಿಯ ಸಂದರ್ಭದಲ್ಲಿ ಮೇಕೆದಾಟು ಯೋಜನೆಯ ಕುರಿತು ವಿವರವಾಗಿ ಪ್ರಸ್ತಾಪಿಸಲಾಯಿತು ಎಂದು ತಿಳಿಸಿದ್ದಾರೆ.


ಕೃಷ್ಣ ಮೇಲ್ದಂಡೆ ಯೋಜನೆ ಬಗ್ಗೆ ಚರ್ಚೆ


ಕೃಷ್ಣಾ ಮೇಲ್ದಂಡೆ ಯೋಜನೆಯ ಮೂರನೆ ಹಂತದ ಕಾಮಗಾರಿಗಳಿಗೆ 13 ಸಾವಿರ ಕೋಟಿ ರೂಪಾಯಿಗಳನ್ನು ಈಗಾಗಲೇ ವೆಚ್ಚ ಮಾಡಲಾಗಿದ್ದು ಕೇಂದ್ರ ಸರ್ಕಾರದ ಅಧಿಕೃತ ಗೆಜೆಟ್ ನಲ್ಲಿ ಕೃಷ್ಣಾ  ಜಲ ವಿವಾದ ಎರಡನೇ ನ್ಯಾಯಾಧೀಕರಣದ ಐತೀರ್ಪನ್ನು ಗೆಜೆಟ್ ನಲ್ಲಿ ಪ್ರಕಟಿಸುವ ಮೂಲಕ ಕರ್ನಾಟಕದ ಈ ಪ್ರತಿಷ್ಠಿತ ಯೋಜನೆಗೆ ನ್ಯಾಯ ಒದಗಿಸಬೇಕೆಂದು ವಿನಂತಿಸಲಾಯಿತು.


ಇದನ್ನೂ ಓದಿ: Assam Flood: ಅಸ್ಸಾಂನಲ್ಲಿ ಪ್ರವಾಹ, ಭೂಕುಸಿತ! ಇಲ್ಲಿವೆ ಕೆಲವು ಚಿತ್ರಗಳು

top videos


  ಕೇಂದ್ರ ಸರ್ಕಾರ ಕರ್ನಾಟಕದ ಎಲ್ಲ ಮನವಿಗಳನ್ನು ಪುರಸ್ಕರಿಸಿ ಕರ್ನಾಟಕಕ್ಕೆಅನುಕೂಲವಾಗುವ ರೀತಿಯಲ್ಲಿ ನಿರ್ಣಯಗಳನ್ನು ಕೈಗೊಳ್ಳಲಿದೆ ಎಂಬ ವಿಶ್ವಾಸ ನನಗಿದೆ ಎಂದು ಗೋವಿಂದ ಕಾರಜೋಳ ತಿಳಿಸಿದ್ದಾರೆ.

  First published: