HOME » NEWS » National-international » GRADUATE ENGINEERING APPRENTICES APPLY ONLINE BEFORE NOVEMBER 23 HG

BEL Recruitment 2020: ಗ್ರಾಜುಯೇಟ್ ಇಂಜಿನಿಯರಿಂಗ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ; ವೇತನ ಎಷ್ಟು ಗೊತ್ತಾ?

ವಿದ್ಯಾರ್ಹತೆ:  ಬಿ.ಇ ಅಥವಾ ಬಿ.ಟೆಕ್ ವಿದ್ಯಾರ್ಹತೆಯನ್ನು ಪಡೆದ ಅಭ್ಯರ್ಥಿಗಳು ಗ್ರಾಜುಯೇಟ್ ಇಂಜಿನಿಯರಿಂಗ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿಸಲ್ಲಿಸಬಹುದು.

news18-kannada
Updated:November 6, 2020, 1:29 PM IST
BEL Recruitment 2020: ಗ್ರಾಜುಯೇಟ್ ಇಂಜಿನಿಯರಿಂಗ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ; ವೇತನ ಎಷ್ಟು ಗೊತ್ತಾ?
ಸಾಂದರ್ಭಿಕ ಚಿತ್ರ
  • Share this:
ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) 50 ಗ್ರಾಜುಯೇಟ್ ಇಂಜಿನಿಯರಿಂಗ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಭ್ಯರ್ಥಿಗಳು ಅರ್ಜಿಸಲ್ಲಿಸಬಹುದಾಗಿದ್ದು, ನವೆಂಬರ್​​ 23, 2020 ಕೊನೆಯ ದಿನಾಂಕವಾಗಿದೆ.

ವಿದ್ಯಾರ್ಹತೆ:  ಬಿ.ಇ ಅಥವಾ ಬಿ.ಟೆಕ್ ವಿದ್ಯಾರ್ಹತೆಯನ್ನು ಪಡೆದ ಅಭ್ಯರ್ಥಿಗಳು ಗ್ರಾಜುಯೇಟ್ ಇಂಜಿನಿಯರಿಂಗ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿಸಲ್ಲಿಸಬಹುದು.

ವಯೋಮಿತಿ: ಡಿಸೆಂಬರ್ 31,2020ರ ಅನ್ವಯ ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳಿಗೆ ಗರಿಷ್ಟ 25 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಪ.ಜಾ/ಪ.ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 5 ವರ್ಷ, ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ವೇತನ: ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 11,110/-ರೂ ಸ್ಟೈಫೆಂಡ್ ನೀಡಲಾಗುವುದು.

ಆಯ್ಕೆ ಹೇಗೆ?: ಮೆರಿಟ್ ಆಧಾರದ ಮೇಲೆ ಮತ್ತು ಬಿ.ಇ/ಬಿ.ಟೆಕ್ ನಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ: ಯಾವುದೇ ಅರ್ಜಿ ಶುಲ್ಕ ಪಾವತಿಸದೆ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸುವುದು ಹೇಗೆ?: ಅರ್ಜಿ ಸಲ್ಲಿಸುವ ಅಸಕ್ತ ಅಭ್ಯರ್ಥಿಗಳು ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ ನ ಅಧಿಕೃತ ವೆಬ್‌ಸೈಟ್ https://bel-india.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಓದಿ ನಂತರ ಭರ್ತಿ ಮಾಡುವ ಮೂಲಕ ಅರ್ಜಿ ಸಲ್ಲಿಸಬೇಕು. ನವೆಂಬರ್ 23,2020 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.
First published: November 6, 2020, 1:29 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories