Coronavirus | ಮಹಾರಾಷ್ಟ್ರದಲ್ಲಿ ಬೆಳಗ್ಗೆ 7ರಿಂದ 11ಗಂಟೆಯವರೆಗೆ ಮಾತ್ರ ದಿನಸಿ ಅಂಗಡಿ ತೆರೆಯಲು ಅವಕಾಶ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೋನಾ ಎರಡನೇ ಅಲೆಯಿಂದಾಗಿ ಸೋಂಕಿತರ ಪ್ರಕರಣಗಳು ತೀವ್ರಗತಿಯಲ್ಲಿ ಏರಿಕೆಯಾಗುತ್ತಿದೆ. ಭಾನುವಾರವೊಂದರಲ್ಲೇ ಸುಮಾರು 24,000 ಸೋಂಕಿತರ ಪ್ರಕರಣಗಳು ದಾಖಲಾಗಿವೆ. ಸದ್ಯ ದೆಹಲಿಯಲ್ಲಿ 29.74% ರವರೆಗೆ ಏರಿಕೆಯಾಗಿದ್ದು, ಪ್ರತಿ ಮೂವರಲ್ಲಿ ಒಬ್ಬ ಸೋಂಕಿತರಿದ್ದಾರೆ ಎಂದು ಅಂಕಿ ಅಂಶಗಳಿಂದ ತಿಳಿದುಬಂದಿದೆ.

ಸಾಂದರ್ಭಿಕ ಚಿತ್ರ.

ಸಾಂದರ್ಭಿಕ ಚಿತ್ರ.

 • Share this:
  ದೇಶದಲ್ಲಿ ಮಾರಕ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ಮಹಾರಾಷ್ಟ್ರದಲ್ಲಿ ಅತಿ ವೇಗವಾಗಿ ಸೋಂಕು ಹಬ್ಬುತ್ತಿದೆ. ಈ ಹಿನ್ನೆಲೆಯಲ್ಲಿ ಸೋಂಕು ನಿಯಂತ್ರಣಕ್ಕಾಗಿ ಮಹಾರಾಷ್ಟ್ರ ರಾಜ್ಯ ಸರ್ಕಾರ ಹಲವು ಕ್ರಮಗಳನ್ನು ಜಾರಿಗೆ ತರುತ್ತಿದೆ. ಇದೀಗ ಮತ್ತೆ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದ್ದು, ಇಂದಿನಿಂದ ಅಗತ್ಯ ವಸ್ತುಗಳ ಮಾರಾಟ ಅಂಗಡಿಗಳು ಬೆಳಗ್ಗೆ 7ರಿಂದ 11 ಗಂಟೆಯವರೆಗೆ ಮಾತ್ರ ತೆರೆಯಲು ಅವಕಾಶ ನೀಡಿದೆ. 

  ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳನ್ನು ಗಮನದಲ್ಲಿ ಇಟ್ಟುಕೊಂಡು ಮಹಾರಾಷ್ಟ್ರ ಸರ್ಕಾರ ಕೋವಿಡ್ ಮಾನದಂಡಗಳನ್ನು ಹೆಚ್ಚಿಸಿದೆ. ಏಪ್ರಿಲ್ 20 ರಿಂದ ದಿನಸಿ ಮತ್ತು ಇತರ ಅಂಗಡಿಗಳು ಬೆಳಗ್ಗೆ 7 ರಿಂದ 11 ರವರೆಗೆ ತೆರೆದಿರಲು ಅವಕಾಶವಿರುತ್ತದೆ. ಜೊತೆಗೆ ವಾರಂತ್ಯದ ದಿನಗಳಲ್ಲಿ ಲಾಕ್​ಡೌನ್​ ಮುಂದುವರೆಯಲಿದೆ.

  ದೇಶದಲ್ಲಿ ಎರಡನೇ ಸುತ್ತಿನಲ್ಲಿ ಮಾರಕ‌ ಕಾಯಿಲೆ ಕೊರೋನಾ ಅಲೆ ವ್ಯಾಪಕವಾಗಿ ಹರಡುತ್ತಿದ್ದು ಆತಂಕವನ್ನು ಸೃಷ್ಟಿಸುತ್ತಿದೆ. ಕೊರೋನಾ ಸೋಂಕು ಹರಡುವಿಕೆ ಶರವೇಗವನ್ನು ಪಡೆದುಕೊಂಡಿದೆ.‌ ಹಲವು ನಿರ್ಬಂಧಗಳ ನಡುವೆಯೂ ಇಷ್ಟು ದೊಡ್ಡ ಪ್ರಮಾಣದಲ್ಲಿ ಕೊರೋನಾ ಸೋಂಕಿತರು ಪತ್ತೆ ಆಗುತ್ತಿದ್ದಾರೆ‌.‌ ಏಪ್ರಿಲ್ 4ರಿಂದ ದಿನ ಒಂದರಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಜನರು ಸೋಂಕು ಪೀಡಿತರಾಗಿದ್ದರು. ಏಪ್ರಿಲ್ 14ರಿಂದ ದಿನ ಒಂದರಲ್ಲಿ ಎರಡು ಲಕ್ಷಕ್ಕೂ ‌ಹೆಚ್ಚು‌ ಕೊರೋನಾ ಸೋಂಕು ಪೀಡಿತರು ಪತ್ತೆಯಾಗುತ್ತಿದ್ದರು. ಈಗ ದಿನ‌ ಒಂದರಲ್ಲಿ ಎರಡೂವರೆ ಲಕ್ಷಕ್ಕೂ ಹೆಚ್ಚು ಪ್ರಕರಣಗಳು ಗೋಚರಿಸಲು ಆರಂಭಿಸಿವೆ.

  ಭಾರತದಲ್ಲಿ ಸೋಮವಾರ 2,59,170 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು ಈ ಪೈಕಿ ಗುಣ ಆಗಿರುವವರು 1,54,761 ಜನ ಮಾತ್ರ. ಇದರಿಂದ ದೇಶದಲ್ಲಿ ಈವರೆಗೆ ಕೊರೋನಾ ಸೋಂಕು ಪೀಡಿತರಾದವರ ಸಂಖ್ಯೆ 1,53,21,089ಕ್ಕೆ ಏರಿಕೆ ಆಗಿದೆ.‌ ಇದಲ್ಲದೆ ದಿನದಿಂದ ದಿನಕ್ಕೆ ಕೊರೋನಾ ರೋಗಕ್ಕೆ ಬಲಿ ಆಗುತ್ತಿರುವವರ ಸಂಖ್ಯೆ ಕೂಡ‌ ಹೆಚ್ಚಾಗಿದ್ದು ದೇಶದಲ್ಲಿ ಈಗ ಸತತವಾಗಿ ಏಳನೇ ದಿನವು ಕೂಡ ಒಂದೇ ದಿನ ಸಾವಿರಕ್ಕೂ ಹೆಚ್ಚು ಜನ‌ ಸಾವನ್ನಪ್ಪಿದ್ದಾರೆ. ಸೋಮವಾರ 1,761 ಜನರು ಬಲಿ ಆಗಿದ್ದು ಈವರೆಗೆ ಮಹಾಮಾರಿ ಕೊರೋನಾಗೆ ಬಲಿ ಆದವರ ಸಂಖ್ಯೆ 1,80,530ಕ್ಕೆ ಏರಿಕೆ ಆಗಿದೆ.

  ಇದನ್ನು ಓದಿ: ದೆಹಲಿ ಲಾಕ್‌ಡೌನ್‌: ಮದ್ಯದಂಗಡಿಗಳ ಮುಂದೆ ಜನಸಾಗರ, ಕೊರೋನಾಗೆ ಕ್ಯಾರೇ ಎನ್ನದ ಜನತೆ

  ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೋನಾ ಎರಡನೇ ಅಲೆಯಿಂದಾಗಿ ಸೋಂಕಿತರ ಪ್ರಕರಣಗಳು ತೀವ್ರಗತಿಯಲ್ಲಿ ಏರಿಕೆಯಾಗುತ್ತಿದೆ. ಭಾನುವಾರವೊಂದರಲ್ಲೇ ಸುಮಾರು 24,000 ಸೋಂಕಿತರ ಪ್ರಕರಣಗಳು ದಾಖಲಾಗಿವೆ. ಸದ್ಯ ದೆಹಲಿಯಲ್ಲಿ 29.74% ರವರೆಗೆ ಏರಿಕೆಯಾಗಿದ್ದು, ಪ್ರತಿ ಮೂವರಲ್ಲಿ ಒಬ್ಬ ಸೋಂಕಿತರಿದ್ದಾರೆ ಎಂದು ಅಂಕಿ ಅಂಶಗಳಿಂದ ತಿಳಿದುಬಂದಿದೆ. ಹಲವಾರು ವ್ಯರ್ಥ ಪ್ರಯತ್ನಗಳ ಬಳಿಕ ಈಗ ದೆಹಲಿ ಸರ್ಕಾರವು ಏಪ್ರಿಲ್ 19 ರಂದು ರಾಷ್ಟ್ರ ರಾಜಧಾನಿಯಲ್ಲಿ ಒಂದು ವಾರದವರೆಗೆ ಲಾಕ್ ಡೌನ್ ವಿಧಿಸಿದೆ.

  ಕೊರೋನಾ ಹತೋಟಿಗೆ ತರುವ ನಿಟ್ಟಿನಲ್ಲಿ ದೆಹಲಿ ಸರ್ಕಾರವು ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಒಂದು ವಾರಗಳ ಕಾಲ ಲಾಕ್‌ಡೌನ್ ಘೋಷಿಸಿದೆ. ಪತ್ರಿಕಾಗೋಷ್ಠಿ ನಡೆಸಿದ ದೆಹಲಿ ಮುಖ್ಯಮಂತ್ರಿ ಕ್ರೇಜಿವಾಲ್, " ದೆಹಲಿಗರೆಲ್ಲರೂ ಒಂದೇ ಕುಟುಂಬದಂತೇ ಇದ್ದಾರೆ. ಈ ಹಿಂದೆ ಮಾಡಿದ ಲಾಕ್‌ಡೌನ್‌ ಅನ್ನು ಯಶಸ್ವಿಯಾಗಿ ನಿಭಾಯಿಸಿ ಕೊರೋನಾವನ್ನು ಹತೋಟಿಗೆ ತಂದಿದ್ದರು. ಈಗಲೂ ಸಹ ನಮ್ಮ ದೆಹಲಿಗರು ಯಶಸ್ವಿಯಾಗಿ ಕೊರೋನಾವನ್ನು ಜಯಿಸುವರು." ಎಂದು ಹೇಳಿದರು. ಈ ಲಾಕ್ ಡೌನ್ ಸಮಯದಲ್ಲಿ ಕೊರೋನಾ ವಿರುದ್ಧ ಹೋರಾಡಲು ಅಗತ್ಯವಿರುವ ಆಮ್ಲಜನಕ ಮತ್ತು ರೆಮ್‌ಡೆಸಿವಿರ್ ಔಷಧಿಗಳ ಅಭಾವವನ್ನು ನಿವಾರಿಸಲಾಗುವುದು ಎಂದು ಹೇಳಿದರು. ಆಷ್ಟೇ ಅಲ್ಲದೇ ವಲಸಿಗರು ತಮ್ಮ ಊರಿಗೆ ಹೋಗದೇ ದೆಹಲಿಯಲ್ಲೇ ಇರಬೇಕೆಂದು ಕ್ರೇಜಿವಾಲ್ ಮನವಿ ಮಾಡಿದರು.
  Published by:HR Ramesh
  First published: