ಬಹು ನಿರೀಕ್ಷೆ ಹುಟ್ಟಿಸಿದ್ದ ಖ್ಯಾತ ಕ್ರಿಕೆಟಿಗ ರವೀಂದ್ರ ಜಡೇಜಾ ಅವರ (Ravindra Jadeja Wife) ಪತ್ನಿ ರಿವಾಬಾ ಜಡೇಜಾ (Rivaba Jadeja) ಗುಜರಾತ್ ಚುನಾವಣೆಯ ಮತ ಎಣಿಕೆಯಲ್ಲಿ ಶೇಕಡಾ 50ಕ್ಕಿಂತ ಹೆಚ್ಚು ಮತಗಳನ್ನು ಗಳಿಸುವ ಮೂಲಕ (Gujarat Election Result 2022) ಮುನ್ನಡೆ ಸಾಧಿಸಿದ್ದಾರೆ. ಆದರೆ ಆಮ್ ಆದ್ಮಿ ಪಕ್ಷದ (AAP) ಅಭ್ಯರ್ಥಿ ರಿವಾಬಾ ಜಡೇಜಾಗೆ ಪ್ರಬಲ ಪೈಪೋಟಿ ನೀಡುತ್ತಿದ್ದಾರೆ. ಜಾಮ್ನಗರ ಕ್ಷೇತ್ರದಲ್ಲಿ (Jamnagar) ಸ್ಪರ್ಧಿಸಿರುವ ರಿವಾಬಾ ಜಡೇಜಾ ಗೆಲ್ಲುವ ಕುರಿತು ಬಿಜೆಪಿ ನಾಯಕರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಜಡೇಜಾ ಪತ್ನಿ ರಿವಾಭಾ ಜಡೇಜಾ ಬಿಜೆಪಿಯಿಂದ ಸ್ಪರ್ಧಿಸಿದ ಜಾಮ್ನಗರ ಉತ್ತರ ವಿಧಾನಸಭಾ ಕ್ಷೇತ್ರದಲ್ಲೇ ರವೀಂದ್ರ ಜಡೇಜಾ ಅವರ ಸಹೋದರಿ ನೈನಾ ಜಡೇಜಾ ಕಾಂಗ್ರೆಸ್ ಪರ ಭರ್ಜರಿ ಪ್ರಚಾರ ಕೈಗೊಂಡಿದ್ದರು.
23,000 ಮತಗಳ ಮುನ್ನಡೆ
ಇತ್ತೀಚಿನ ಅಪ್ಡೇಟ್ಗಳ ಪ್ರಕಾರ ರವೀಂದ್ರ ಜಡೇಜಾ ಪತ್ನಿ ರಿವಾಬಾ ಜಡೇಕಾ 23,000 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.
ಮೆಕ್ಯಾನಿಕಲ್ ಇಂಜಿನಿಯರಿಂಗ್ ಓದಿರುವ ರಿವಾಬಾ
ಇನ್ನು ರವೀಂದ್ರ ಜಡೇಜಾ ಅವರ ಪತ್ನಿ ರಿವಾಬಾ ಜಡೇಜಾ ಜೀವನದ ಬಗ್ಗೆ ನೋಡೋದಾದ್ರೆ 1990 ಜನಿಸಿದರು. ರಿವಾಬಾ ಜಡೇಜಾ ಅವರ ತಂದೆ ಉದ್ಯಮಿ. ರಿವಾಬಾ ಮೆಕ್ಯಾನಿಕಲ್ ಇಂಜಿನಿಯರಿಂಗ್ನಲ್ಲಿ ತನ್ನ ಪದವಿಯನ್ನು ಪೂರ್ಣಗೊಳಿಸಿದ್ದಾರೆ. ರಿವಾಬಾ ಅವರು 2016 ರಲ್ಲಿ ಟೀಂ ಇಂಡಿಯಾದ ಹಿರಿಯ ಆಲ್ರೌಂಡರ್ ರವೀಂದ್ರ ಜಡೇಜಾ ಅವರನ್ನು ವಿವಾಹವಾಗಿದ್ದರು.
ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಸೇರಿದ್ದ ರಿವಾಬಾ
ರಿವಾಬಾ 2019 ರ ಲೋಕಸಭೆ ಚುನಾವಣೆಗೆ ಮುನ್ನ ಬಿಜೆಪಿಗೆ ಸೇರ್ಪಡೆಗೊಂಡಿದ್ದರು. ಚುನಾವಣಾ ಅಫಿಡವಿಟ್ನಲ್ಲಿ ಉಲ್ಲೇಖಿಸಿರುವ ವಿವರಗಳ ಪ್ರಕಾರ, ರಿವಾಬಾ ಜಡೇಜಾ ಅವರ ಆಸ್ತಿ 97 ಕೋಟಿ ರೂ. ಎಂದು ತಿಳಿಸಿದ್ದಾರೆ.
ಬಹು ನಿರೀಕ್ಷೆ ಹುಟ್ಟಿಸಿದ್ದ ಖ್ಯಾತ ಕ್ರಿಕೆಟಿಗ ರವೀಂದ್ರ ಜಡೇಜಾ ಅವರ ಪತ್ನಿ ರಿವಾಬಾ ಜಡೇಜಾ ಗುಜರಾತ್ ಚುನಾವಣೆಯಲ್ಲಿ ಭರ್ಜರಿ ಜಯ ದಾಖಲಿಸಿದ್ದಾರೆ. ಬಿಜೆಪಿ ತನ್ನ ಹಾಲಿ ಶಾಸಕ ಧರ್ಮೇಂದ್ರ ಸಿಂಗ್ ಜಡೇಜಾ ಅವರನ್ನು ಕೈಬಿಟ್ಟು ರಿವಾಬಾಗೆ ಮಣೆ ಹಾಕಿತ್ತು.
ಡಿಸೆಂಬರ್ 12 ರಂದು ಪ್ರಮಾಣವಚನ ಸಮಾರಂಭ
ಗುಜರಾತ್ ವಿಧಾನಸಭಾ ಚುನಾವಣೆಯ ಫಲಿತಾಂಶದ ಚಿತ್ರಣ ನಿಚ್ಚಳವಾಗಿದ್ದು, ಭಾರತೀಯ ಜನತಾ ಪಕ್ಷ ಏಳನೇ ಬಾರಿಗೆ ಗೆಲುವು ಸಾಧಿಸುವ ಲಕ್ಷಣ ಕಾಣುತ್ತಿದೆ. ಇಲ್ಲಿಯವರೆಗಿನ ಚುನಾವಣಾ ಫಲಿತಾಂಶಗಳ ಪ್ರಕಾರ, ಗುಜರಾತ್ನಲ್ಲಿ ಬಿಜೆಪಿ ಬಹುಮತ ಪಡೆದಿದ್ದು, ಪಕ್ಷ ಈಗ ಸರ್ಕಾರ ರಚನೆಯ ಕಸರತ್ತಿನಲ್ಲಿ ತೊಡಗಿದೆ. ಇದೇ ವೇಳೆ ಗುಜರಾತ್ನಲ್ಲಿ ಡಿ.12ರಂದು ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದ್ದು, ಭೂಪೇಂದ್ರಭಾಯಿ ಪಟೇಲ್ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಸಿ.ಆರ್.ಪಾಟೀಲ್ ಘೋಷಿಸಿದ್ದಾರೆ.
ಇದನ್ನೂ ಓದಿ: Gujarat Election Result 2022: ಮೊರ್ಬಿ ದುರಂತದಲ್ಲಿ ಹಲವರ ಪ್ರಾಣ ಕಾಪಾಡಿದ್ದ ಕಾಂತಿಲಾಲ್ಗೆ ಭಾರೀ ಮುನ್ನಡೆ!
ಡಿಸೆಂಬರ್ 12 ರಂದು ಮಧ್ಯಾಹ್ನ 2 ಗಂಟೆಗೆ ಗುಜರಾತ್ ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ರಾಜ್ಯ ಬಿಜೆಪಿ ಮುಖ್ಯಸ್ಥ ಸಿ.ಆರ್.ಪಾಟೀಲ್ ತಿಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಪ್ರಮಾಣ ವಚನ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಯಾವ ಪಕ್ಷವನ್ನು ವಿರೋಧ ಪಕ್ಷವೆಂದು ಪರಿಗಣಿಸಲಾಗಿದೆ ಎಂಬುದಕ್ಕೆ ಪ್ರತಿಕ್ರಿಯಿಸಿದ ಸಿ.ಆರ್.ಪಾಟೀಲ್, ನಾವು ಕಾಂಗ್ರೆಸ್ ಅನ್ನು ಮಾತ್ರ ವಿರೋಧ ಪಕ್ಷವೆಂದು ಪರಿಗಣಿಸುತ್ತೇವೆ ಎಂದು ಹೇಳಿದರು. ಆಮ್ ಆದ್ಮಿ ಪಕ್ಷಕ್ಕೆ ಇಲ್ಲೇನೂ ಇರಲಿಲ್ಲ. ಅವರು ಜಾರಿಗೊಳಿಸಲಾಗದ ಭರವಸೆಗಳನ್ನು ನೀಡಿದರು ಎಂದಿದ್ದಾರೆ. ಇನ್ನು ಗಾಂಧಿನಗರ ಹೆಲಿಪ್ಯಾಡ್ ಮೈದಾನದಲ್ಲಿ ಈ ಪ್ರಮಾಣ ವಚನ ಸಮಾರಂಭ ನಡೆಯಲಿದೆ ಎಂಬುವುದು ಉಲ್ಲೇಖನೀಯ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ