Gujarat Political Crisis: ಗುಜರಾತ್ ನೂತನ ಸಿಎಂ ಆಗಿ ಭೂಪೇಂದ್ರ ಪಟೇಲ್ ಇಂದು ಪ್ರಮಾಣವಚನ ಸ್ವೀಕಾರ

ಭೂಪೇಂದ್ರ ಪಟೇಲ್ ಅವರು ಗುಜರಾತಿನ ಮಾಜಿ ಮುಖ್ಯಮಂತ್ರಿ ಮತ್ತು ಉತ್ತರ ಪ್ರದೇಶದ ಹಾಲಿ ರಾಜ್ಯಪಾಲೆ ಆನಂದಿಬೆನ್‌ ಪಟೇಲ್‌ (Anandhiben Patel) ಅವರ ನಿಕಟವರ್ತಿ.‌ ಆನಂದಿಬೆನ್‌ ಪ್ರತಿನಿಧಿಸಿದ್ದ ವಿಧಾನಸಭಾ ಕ್ಷೇತ್ರ ಘಟ್ಲೋಡಿಯಾದಿಂದಲೇ ಗೆದ್ದು ಶಾಸಕರಾಗಿದ್ದಾರೆ.

ಭೂಪೇಂದ್ರ ಪಟೇಲ್

ಭೂಪೇಂದ್ರ ಪಟೇಲ್

  • Share this:
ಅಹಮದಾಬಾದ್ (ಸೆಪ್ಟೆಂಬರ್ 13): ದಿಢೀರ್ ಬೆಳವಣಿಗೆಯಲ್ಲಿ ಗುಜರಾತ್​ ಮುಖ್ಯಮಂತ್ರಿ (Gujarath Chief Minister) ವಿಜಯ್​ ರೂಪಾಣಿ (Vijay Rupani) ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದಂತೆ ಇದೇ ಮೊದಲ ಬಾರಿಗೆ (2017ರಲ್ಲಿ) ಶಾಸಕರಾಗಿ ಆಯ್ಕೆ ಆಗಿರುವ ಹಿರಿಯ ಶಾಸಕ ಭೂಪೇಂದ್ರ ಪಟೇಲ್ (Bhupendra Patel) ಅವರನ್ನು ನಿನ್ನೆ (ಸೆಪ್ಟೆಂಬರ್ 12) ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ (BJP Legislative Party Meeting) ಆಯ್ಕೆ ಮಾಡಲಾಗಿದೆ. ಈ ಮೂಲಕ ನೂತನ ಮುಖ್ಯಮಂತ್ರಿ ಎಂದು‌ ಘೋಷಣೆ ಮಾಡಲಾಗಿದೆ. ಈ ಬೆಳವಣಿಗೆ ರಾಷ್ಟ್ರೀಯ ಮಟ್ಟದಲ್ಲೂ ಸಂಚಲನ ಮೂಡಿಸಿದ್ದು ಇಂದು 59 ವರ್ಷದ ಭೂಪೇಂದ್ರ ಪಟೇಲ್ ಗುಜರಾತಿನ ಮುಖ್ಯಮಂತ್ರಿ ಆಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಮಧ್ಯಾಹ್ನ 2.20ಕ್ಕೆ ಗುಜರಾತಿನ ರಾಜಭವನದಲ್ಲಿ ಪ್ರಮಾಣವಚನ ಕಾರ್ಯಕ್ರಮ ನಡೆಯಲಿದ್ದು ಕೇಂದ್ರ ಗೃಹ ಸಚಿವ ಅಮಿತ್ ಶಾ (Union Home Minister Amith Sha), ಕೇಂದ್ರ ಕೃಷಿ ಸಚಿವ ಹಾಗೂ ಗುಜರಾತ್ ರಾಜಕೀಯ ಬೆಳವಣಿಗೆಗಳ ಬಿಜೆಪಿ ವೀಕ್ಷಕ ನರೇಂದ್ರ ಸಿಂಗ್ ಥೋಮರ್ (Union Agriculture Minister and Observer of Gujarath Political Development of BJP, Narendar Sing Tomar), ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ (Union Health Minister Munsuk Mandoviya),  ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Chief Minister of Karnataka, Basavaraja Bommai), ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್, ಚೌಹಾಣ್ (Chief Minister of Madhya Pradesh Shivaraj Sing Chowan), ನಿರ್ಗಮಿತ ಮುಖ್ಯಮಂತ್ರಿ ವಿಜಯ್ ರೂಪಾಣಿ ಮತ್ತಿತರರು ಭಾಗವಹಿಸಲಿದ್ದಾರೆ.

ಸಿವಿಲ್‌ ಎಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ ಮಾಡಿರುವ ಭೂಪೇಂದ್ರ ಪಟೇಲ್ 2010ರಿಂದ 2015ರವರೆಗೆ ಅಹಮದಾಬಾದ್‌ ನಗರ ಪಾಲಿಕೆಯ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಕೆಲಾ ಮಾಡಿದ್ದಾರೆ. ಬಳಿಕ‌ 2015–17ರವರೆಗೆ ಅಹಮದಾಬಾದ್‌ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಕೆಲಸ ಮಾಡಿದ್ದಾರೆ. ಇದಾದ ಮೇಲೆ 2017ರಲ್ಲಿ ಅವರು ಘಟ್ಲೋಡಿಯಾ ಕ್ಷೇತ್ರದಿಂದ ಮೊದಲ ಬಾರಿ ವಿಧಾನಸಭಾ ಚುನಾವಣೆ ಎದುರಿಸಿ ಗೆದ್ದು ಶಾಸಕರಾದರು. 1.17 ಲಕ್ಷ ಮತಗಳ ಅಂತರದಿಂದ ಗೆಲುವು‌ ಸಾಧಿಸಿ ದಾಖಲೆಯನ್ನೂ ಬರೆದಿದ್ದರು. ಈಗ ಗುಜರಾತಿನಲ್ಲಿ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾದಾಗಲೇ ಮುಖ್ಯಮಂತ್ರಿಯಾದ ದಾಖಲೆಯನ್ನೂ ಮಾಡಿದ್ದಾರೆ. ಕರ್ನಾಟಕದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ (H.D. Kumaraswamy) ಇಂಥದೊಂದು ದಾಖಲೆ ಮಾಡಿದ್ದರು.

ಇದನ್ನೂ ಓದಿ:Rape Case: ಶಿರಡಿಯಿಂದ ಮನೆಗೆ ವಾಪಸ್ಸಾಗುತ್ತಿದ್ದ ಬಾಲಕಿ ಮೇಲೆ ಅತ್ಯಾಚಾರ; ರೈಲ್ವೆ ನಿಲ್ದಾಣದಲ್ಲೇ ಕೃತ್ಯ ಎಸಗಿದ ಕಾಮುಕ

ಭೂಪೇಂದ್ರ ಪಟೇಲ್ ಅವರು ಗುಜರಾತಿನ ಮಾಜಿ ಮುಖ್ಯಮಂತ್ರಿ ಮತ್ತು ಉತ್ತರ ಪ್ರದೇಶದ ಹಾಲಿ ರಾಜ್ಯಪಾಲೆ ಆನಂದಿಬೆನ್‌ ಪಟೇಲ್‌ (Anandhiben Patel) ಅವರ ನಿಕಟವರ್ತಿ.‌ ಆನಂದಿಬೆನ್‌ ಪ್ರತಿನಿಧಿಸಿದ್ದ ವಿಧಾನಸಭಾ ಕ್ಷೇತ್ರ ಘಟ್ಲೋಡಿಯಾದಿಂದಲೇ ಗೆದ್ದು ಶಾಸಕರಾಗಿದ್ದಾರೆ. ಜೊತೆಗೆ ಈ ಕ್ಷೇತ್ರ ಸಚಿವ ಅಮಿತ್‌ ಶಾ ಲೋಕಸಭೆಯನ್ನು ಪ್ರತಿನಿಧಿಸಿರುವ ಗಾಂಧಿನಗರ ಲೋಕಸಭಾ ಕ್ಷೇತ್ರದ ಭಾಗವಾಗಿದೆ. ಹಾಗಾಗಿ ಅಮಿತ್ ಶಾ ಅವರಿಗೂ ಭೂಪೇಂದ್ರ ಪಟೇಲ್ ಚಿರಪರಿಚಿತ. ಇವು ಕೂಡ ಮೊದಲ ಬಾರಿಯ ಶಾಸಕ ಭೂಪೇಂದ್ರ ಪಟೇಲ್ ಮುಖ್ಯಮಂತ್ರಿಯಾಗಿ‌‌ ಹೊರಹೊಮ್ಮಲು ಕಾರಣ ಎಂದು ಹೇಳಲಾಗುತ್ತಿದೆ.

ಇದ್ದಕ್ಕಿದ್ದಂತೆ ವಿಜಯ್ ರೂಪಾಣಿ ರಾಜೀನಾಮೆ ನೀಡಿದ್ದೇಕೆ? ಇದರ ಹಿಂದಿನ ಲೆಕ್ಕಾಚಾರ ಏನು ಎಂಬಿತ್ಯಾದಿ ಕುತೂಹಲ ಮೂಡಿದ್ದವು. ಗುಜರಾತ್ ವಿಧಾನಸಭಾ ಚುನಾವಣೆಗೆ (Gujarat Assembly Election)ಬರೊಬ್ಬರಿ ಇನ್ನು 14 ತಿಂಗಳು ಕಾಲಾವಕಾಶ‌ ಇದೆ. ಈ‌ ಹಂತದಲ್ಲಿ ಬಿಜೆಪಿ ಹೈಕಮಾಂಡ್ (BJO High Command) ನಾಯಕರು ಗುಜರಾತಿನಲ್ಲಿ ಮುಖ್ಯಮಂತ್ರಿ ಬದಲಿಸಿ ಅಚ್ಚರಿ ಮೂಡಿಸಿದ್ದರು. ಇತ್ತೀಚೆಗೆ ಉತ್ತರಖಂಡ, ಕರ್ನಾಟಕದಲ್ಲೂ ಮುಖ್ಯಮಂತ್ರಿ ಬದಲಾವಣೆ ಮಾಡಿ ಮುಂದಿನ‌‌ ಚುನಾವಣೆಗಳಿಗೆ ಅಣಿಯಾಗುತ್ತಿರುವ ಬಿಜೆಪಿ ಹೈಕಮಾಂಡ್ ಗುಜರಾತಿನಲ್ಲೂ ಮುಖ್ಯಮಂತ್ರಿ ಬದಲಾವಣೆಯ ಅಸ್ತ್ರವನ್ನೇ ಬಳಸಿದೆ. ಕರ್ನಾಟಕದಲ್ಲಿ ಲಿಂಗಾಯತ ಸಮುದಾಯದ ನಾಯಕನಿಗೆ ಮುಖ್ಯಮಂತ್ರಿ ಕಟ್ಟಬೇಕು ಎಂದು ನಿಶ್ಚಯಿಸಿದಂತೆ ಗುಜರಾತಿನಲ್ಲಿ ಪಟೇಲ್ ಸಮುದಾಯಕ್ಕೆ ಮಣೆ ಹಾಕಿದೆ.

ಗುಜರಾತ್ ವಿಧಾನಸಭಾ ಚುನಾವಣೆ ಪ್ರಧಾನ ಮಂತ್ರಿ ನರೇಂದ್ರ ಮೋದಿ (Prime Minister Narendara Modi) ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ (Union Home Minister Amith Sha) ಅವರ ಪಾಲಿಗೆ ಅತ್ಯಂತ ಪ್ರತಿಷ್ಠೆಯ ಚುನಾವಣೆ. ಗುಜರಾತ್ ಅವರದೇ ರಾಜ್ಯ ಎನ್ನುವ ಕಾರಣಕ್ಕೆ ಇದು ಮಹತ್ವದ ಚುನಾವಣೆ. ಎಲ್ಲೆಡೆ ಸೋತರೂ ಪರವಾಗಿಲ್ಲ. ತವರು ರಾಜ್ಯದಲ್ಲಿ ಮಾತ್ರ ಮುಖಭಂಗ ಅನುಭವಿಸಬಾರದು ಅಂತಾ ಮೋದಿ ಮತ್ತು ಅಮಿತ್ ಶಾ ಗುಜರಾತ್ ಚುನಾವಣೆ ಬಗ್ಗೆ ಹೆಚ್ಚು ಗಮನಹರಿಸಿದ್ದಾರೆ. ಗುಜರಾತಿನಲ್ಲಿ ಗೆಲ್ಲಲೇ‌ಬೇಕು ಎಂಬುದು ಅವರ ದೃಢ ಸಂಕಲ್ಪ. ಆದರೆ ವಿಜಯ್ ರೂಪಾಣಿ ನಿರೀಕ್ಷಿತ ಮಟ್ಟದಲ್ಲಿ ಜನಪ್ರಿಯರಾಗಿಲ್ಲ. ಇವರದೇ ನೇತೃತ್ವದಲ್ಲಿ ಚುನಾವಣೆಗೆ ಹೋದರೆ ಯಡವಟ್ಟಾಗಿ ಬಿಡಬಹುದು ಎಂದು ರೂಪಾಣಿ ರಾಜೀನಾಮೆ ಪಡೆಯಲಾಗಿದೆ ಎಂದು ಹೇಳಲಾಗುತ್ತಿತ್ತು. ಈಗ ಭೂಪೇಂದ್ರ ಪಟೇಲ್ ಅವರಿಗೆ ಅವಕಾಶ ನೀಡಲಾಗಿದೆ.

ಹಾಗೆ ನೋಡಿದರೆ ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾಣಿ ಬಗ್ಗೆ ಅಲ್ಲಿ ಅಸಮಾಧಾನ, ಆಕ್ರೋಶ, ಬಂಡಾಯಗಳೇನೂ ಇರಲಿಲ್ಲ. ಒಳ್ಳೆಯವರು ಎಂದೇ ಹೆಸರು ಮಾಡಿದ್ದರು. ಆದರೆ ಅವರ ಆಡಳಿತದಲ್ಲಿ ಚುರುಕಿರಲಿಲ್ಲ. ಕೊರೋನಾ ಕಾಲದಲ್ಲಿ ಜನರಿಗೆ ಸರಿಯಾಗಿ ಸ್ಪಂದಿಸಲಿಲ್ಲ. 'ಮುಂದೆ ಬಂದರೆ ಹಾಯದ, ಹಿಂದೆ ಬಂದರೆ ಒದೆಯದ' ಇವರಿಂದ ಮುಂದಿನ ವಿಧಾನಸಭಾ ಚುನಾವಣೆ ಗೆಲ್ಲಲು ಸಾಧ್ಯವೇ ಇಲ್ಲ ಎಂದು ಸ್ವತಃ ತಮ್ಮದೇ ಅಭ್ಯರ್ಥಿಯಾದರೂ ವಿಜಯ್ ರೂಪಾಣಿಗೆ ರಾಜೀನಾಮೆ ನೀಡುವಂತೆ ಅಮಿತ್ ಶಾ ಶಾಕಿಂಗ್ ಸೂಚನೆ ನೀಡಿದ್ದಾರೆ. ಅವರ ಜಾಗಕ್ಕೆ ಪಟೇಲ್ ಸಮುದಾಯದ ನಾಯಕ ಭೂಪೇಂದ್ರ ಪಟೇಲ್ ಅವರನ್ನು ಕೂರಿಸಲಾಗಿದೆ.

ಇದನ್ನೂ ಓದಿ:Morning Digest: ಕರ್ನಾಟಕದಲ್ಲಿ ಮುಂದುವರೆದ ಮಳೆ, ಇಂದಿನಿಂದ ವಿಧಾನಮಂಡಲ ಅಧಿವೇಶನ; ಬೆಳಗಿನ ಟಾಪ್ ನ್ಯೂಸ್​ಗಳು

ವಿಜಯ್​ ರೂಪಾಣಿ ರಾಜೀನಾಮೆಯಿಂದ ತೆರವಾಗಿರುವ ಮುಖ್ಯಮಂತ್ರಿ ಸ್ಥಾನ ಯಾರ ಪಾಲಾಗುತ್ತದೆ ಎಂಬ ಕುತೂಹಲ ತೀವ್ರವಾಗಿತ್ತು. ಉಪ ಮುಖ್ಯಮಂತ್ರಿ ನಿತಿನ್ ಪಟೇಲ್ (Nithin Patel), ಪಟೇಲ್ ಸಮುದಾಯದ ನಾಯಕರಾದ ಸಿ.ಆರ್. ಪಟೇಲ್ (CR Patel), ಪ್ರಫುಲ್ಲಾ ಕೇಡಾ ಪಟೇಲ್ ಹೆಸರುಗಳು ಚರ್ಚೆಯಾಗುತ್ತಿದ್ದವು. ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲೂ ನಿತಿನ್ ಪಟೇಲ್ ಹೆಸರು ಕೇಳಿಬಂದ ಕಾರಣಕ್ಕೆ ಅವರ ಹೆಸರು ಮುಂಚೂಣಿಯಲ್ಲಿತ್ತು. ಗುಜರಾತಿನಲ್ಲಿ ನಿರ್ಣಾಯಕ ಪಾತ್ರ ವಹಿಸಲಿರುವ ಪಟೇಲ್ ಸಮುದಾಯವನ್ನು (Patel Community) ತನ್ನತ್ತ ಸೆಳೆಯಲು  ಪಟೇಲ್ ಸಮುದಾಯದ ನಾಯಕರಿಗೆ ಈ ಬಾರಿ ಅವಕಾಶ ಸಿಗಬಹುದು ಎಂದು ಹೇಳಲಾಗುತ್ತಿತ್ತು. ಈ ನಡುವೆ ಆಶ್ವರ್ಯಕರ ರೀತಿಯಲ್ಲಿ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ (Union Health Minister Munsuk Mandoviya) ಹೆಸರು ಕೂಡ ಕೇಳಲ್ಪಟ್ಟಿತ್ತು.

ಬಿಎಸ್​ವೈ ಬಳಿಕ ಬಿಜೆಪಿಯ 3ನೇ ಸಿಎಂ ಪದತ್ಯಾಗ

ಕಳೆದ ಕೆಲವು ವಾರಗಳಿಂದ ರಾಷ್ಟ್ರೀಯ ಪಕ್ಷವಾದ ಭಾರತೀಯ ಜನತಾ ಪಕ್ಷದಲ್ಲಿ ಮುಖ್ಯಮಂತ್ರಿಗಳ ಪದತ್ಯಾಗ ನಡೆಯುತ್ತಿದೆ. ಈ ರೀತಿ ಪದತ್ಯಾಗ ಮಾಡಿದ ಮೂರನೇ ಸಿಎಂ ವಿಜಯ ರೂಪಾಣಿಯಾಗಿದ್ದಾರೆ. ಇದಕ್ಕೂ ಮುನ್ನ ಕರ್ನಾಟಕದಲ್ಲಿ ಬಿ.ಎಸ್​. ಯಡಿಯೂರಪ್ಪ (B.S. Yadiyurappa) ಅವರು ಮುಖ್ಯಮಂತ್ರಿ ಸ್ಥಾನದಿಂದ ಕೆಳಗೆ ಇಳಿದಿದ್ದರು. ಇದಾದ ಬಳಿಕ ಉತ್ತರ ಖಂಡ ಸಿಎಂ ತಿರಾಂತ್​ ಸಿಂಗ್​ ರಾವತ್​ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
Published by:Latha CG
First published: