ಹಿಂಸಾಚಾರಕ್ಕೆ ತಿರುಗಿದ ಗುಜ್ಜರ್​ ಸಮುದಾಯದ ಪ್ರತಿಭಟನೆ; ಪೊಲೀಸರ ಮೇಲೆ ಕಲ್ಲು ತೂರಾಟ

ಪ್ರತಿಭಟನಾಕಾರರು ಸ್ಥಳದಲ್ಲಿದ್ದ ವಾಹನಗಳನ್ನು ಜಖಂಗೊಳಿಸಿದ್ದಾರೆ. ಕೆಲ ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಸವಿ ಮಧೋಪುರ ಬಳಿ ಅನೇಕರು ರೈಲ್ವೆ ಹಳಿ ಮೇಲೆ ಕುಳಿತು ಧರಣಿ ನಡೆಸಿದ್ದಾರೆ. ಇದರಿಂದಾಗ ಈ ಮಾರ್ಗದಲ್ಲಿ ಸಂಚರಿಸಬೇಕಿದ್ದ ಅನೇಕ ರೈಲುಗಳನ್ನು ರದ್ದು ಮಾಡಲಾಯಿತು.

Rajesh Duggumane | news18
Updated:February 10, 2019, 5:37 PM IST
ಹಿಂಸಾಚಾರಕ್ಕೆ ತಿರುಗಿದ ಗುಜ್ಜರ್​ ಸಮುದಾಯದ ಪ್ರತಿಭಟನೆ; ಪೊಲೀಸರ ಮೇಲೆ ಕಲ್ಲು ತೂರಾಟ
ಸಾಂದರ್ಭಿಕ ಚಿತ್ರ
Rajesh Duggumane | news18
Updated: February 10, 2019, 5:37 PM IST
ಜೈಪುರ (ಫೆ.10): ಮೀಸಲಾತಿ ನೀಡುವಂತೆ ಆಗ್ರಹಿಸಿ ರಾಜಸ್ಥಾನದಲ್ಲಿ ಗುಜ್ಜರ್​ ಸಮುದಾಯದವರು ನಡೆಸುತ್ತಿರುವ ಪ್ರತಿಭಟನೆ ಭಾನುವಾರ ಹಿಂಸಾಚಾರಕ್ಕೆ ತಿರುಗಿದೆ. ಪ್ರತಿಭಟನಾಕಾರರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದು, ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಗುಂಡು ಹಾರಿಸಿದ್ದಾರೆ.

ರಾಜಸ್ಥಾನದಲ್ಲಿ ಗುಜ್ಜರ ಸಮುದಾಯದವರಿಗೆ ಶಿಕ್ಷಣ ಹಾಗೂ ಉದ್ಯೋಗ ಕ್ಷೇತ್ರಕ್ಕೆ ಶೇ.5 ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿ ಕಳೆದ ಮೂರು ದಿನಗಳಿಂದ ಪ್ರತಿಭಟನೆ ನಡೆಯುತ್ತಿದೆ. ಇಷ್ಟು ದಿನ ಶಾಂತ ರೀತಿಯಲ್ಲಿ ನಡೆಯುತ್ತಿದ್ದ ಪ್ರತಿಭಟನೆ ಭಾನುವಾರ ಏಕಾಏಕಿ ಹಿಂಸಾಚಾರಕ್ಕೆ ತಿರುಗಿದೆ.

ಪ್ರತಿಭಟನಾಕಾರರು ಸ್ಥಳದಲ್ಲಿದ್ದ ವಾಹನಗಳನ್ನು ಜಖಂಗೊಳಿಸಿದ್ದಾರೆ. ಕೆಲ ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಸವಿ ಮಧೋಪುರ ಬಳಿ ಅನೇಕರು ರೈಲ್ವೆ ಹಳಿ ಮೇಲೆ ಕುಳಿತು ಧರಣಿ ನಡೆಸಿದ್ದಾರೆ. ಇದರಿಂದಾಗ ಈ ಮಾರ್ಗದಲ್ಲಿ ಸಂಚರಿಸಬೇಕಿದ್ದ ಅನೇಕ ರೈಲುಗಳನ್ನು ರದ್ದು ಮಾಡಲಾಯಿತು.

ಇದನ್ನೂ ಓದಿ: ದೆಹಲಿಯಲ್ಲಿ ಜೀನ್ಸ್​, ಬೇರೆ ಕಡೆ ಸೀರೆ- ಕುಂಕುಮ; ಪ್ರಿಯಾಂಕಾ ಗಾಂಧಿ ಕುರಿತು ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ ಬಿಜೆಪಿ

ಇನ್ನು ಧೋಲ್ಪುರ ಹಾಗೂ ಗ್ವಾಲಿಯರ್​ ನಡುವೆ ಸಂಪರ್ಕ ಕಲ್ಪಿಸುವ ಹೆದ್ದಾರಿಯಲ್ಲಿ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಪೊಲೀಸರು ಗುಂಡು ಹಾರಿಸುವ ಮೂಲಕ ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಯಶಸ್ವಿಯಾದರು. ಈ ವೇಳೆ ಯಾವುದೇ ಪ್ರಾಣಹಾನಿ ಉಂಟಾಗಿಲ್ಲ.

ವಿಧಾನಸಭಾ ಚುನಾವಣೆಗೂ ಮೊದಲು ಶೇ.5 ಮೀಸಲಾತಿ ನೀಡುವುದಾಗಿ ಗುಜ್ಜರ್​ ಸಮುದಾಯಕ್ಕೆ ಕಾಂಗ್ರೆಸ್​ ಆಶ್ವಾಸನೆ ನೀಡಿತ್ತು. ಆದರೆ, ಕಾಂಗ್ರೆಸ್​ ಅಧಿಕಾರಕ್ಕೆ ಬಂದ ಹೊರತಾಗಿಯೂ ಮೀಸಲಾತಿ ಸಿಕ್ಕಿರಲಿಲ್ಲ. ಇದು ಗುಜ್ಜರ್​ ಸಮುದಾಯದವರ ಕೋಪಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ಟಿಎಂಸಿ ಶಾಸಕ ಬಿಸ್ವಾಸ್ ಕೊಲೆ ಪ್ರಕರಣ; ಬಿಜೆಪಿ ನಾಯಕ ಮುಕುಲ್​ ರಾಯ್​ ವಿರುದ್ಧ ಎಫ್​ಐಆರ್ ದಾಖಲು
Loading...

First published:February 10, 2019
ಮತ್ತಷ್ಟು ಓದಿರಿ
Loading...
ಮುಂದಿನ ಸುದ್ದಿ
Loading...