ಉತ್ತರಾಖಂಡದ ಡೆಹ್ರಾಡೂನ್ ನಲ್ಲಿ (Dehradun) ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ (incessant rainfall) ರಸ್ತೆಯೊಂದು ಶುಕ್ರವಾರ ನದಿಯಲ್ಲಿ ಕೊಚ್ಚಿಕೊಂಡು ಹೋಗಿದೆ. ಕಳೆದ 48 ಗಂಟೆಗಳಿಂದ ಡೆಹ್ರಾಡೂನ್ ನಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯು ಭಾರೀ ಅನಾಹುತ ಉಂಟು ಮಾಡಿದೆ. ಇದರಿಂದಾಗಿ ಮಾಲ್ದೇವತಾ-ಸಹಸ್ರಧಾರ ಸಂಪರ್ಕ ರಸ್ತೆ ನದಿಯಲ್ಲಿ ಹಲವು ಮೀಟರ್ಗಳಷ್ಟು ಮುಳುಗಿದೆ. ಡೆಹ್ರಾಡೂನ್ ಜಿಲ್ಲಾಡಳಿತದಿಂದ ಬಂದ ಮಾಹಿತಿಯ ಪ್ರಕಾರ, ಈ ಘಟನೆ ಖೇರಿ ಗ್ರಾಮದಲ್ಲಿ ನಡೆದಿದೆ. ನದಿಯಲ್ಲಿ ರಸ್ತೆಯಲ್ಲಿ ಕೊಚ್ಚಿಕೊಂಡು ಹೋಗುತ್ತಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಭಾರೀ ಮಳೆಯಿಂದಾಗಿ ರಸ್ತೆಯ ಮೇಲೆಲ್ಲಾ ಭಾರೀ ನೀರು ಹರಿಯುತ್ತಿದೆ. ತಗ್ಗು ಪ್ರದೇಶಗಳಲ್ಲಿ ನೀರು ನಿಂತು ಕೆರೆಯಂತಾಗಿದೆ. ಭಾರೀ ಪ್ರವಾಹದ ನೀರಿನಿಂದಾಗಿ ರಸ್ತೆಯ ಮೇಲೆ ಹಲವು ವಾಹನಗಳು ತೇಲಿಕೊಂಡು ಹೋಗುತ್ತಿರುವುದು ಕಂಡು ಬಂದಿದೆ. ಡೆಹ್ರಾಡೂನ್ನಲ್ಲಿ ಸೋಮವಾರದಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಉತ್ತರಾಖಂಡ ಪ್ರವಾಹ ಪರಿಸ್ಥಿತಿ ಎದುರಿಸುತ್ತಿದೆ. ಇದು ಈ ಪ್ರದೇಶದಲ್ಲಿ ವ್ಯಾಪಕ ಸಮಸ್ಯೆ ಉಂಟು ಮಾಡಿದೆ.
#WATCH| Uttarakhand: Maldevta-Sahastradhara Link Road caved in and merged with a river following incessant rainfall in Dehradun. pic.twitter.com/v91A82UaN5
— ANI (@ANI) August 27, 2021
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ರಾಜ್ಯದ ಕರಾವಳಿ(Coastal), ಮಲೆನಾಡು(Malnad), ದಕ್ಷಿಣ ಒಳನಾಡು(South Interior) ಹಾಗೂ ಉತ್ತರ ಒಳನಾಡಿನಲ್ಲಿ(North Interior) ಕಳೆದ ಕೆಲ ದಿನಗಳಿಂದ ಮಳೆಯಾಗುತ್ತಿದ್ದು, ಇಂದೂ ಸಹ ಮಳೆ(Rainfall) ಮುಂದುವರೆಯಲಿದೆ. ಆ. 28ರಿಂದ 2 ದಿನ ಈ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಶಿವಮೊಗ್ಗ, ರಾಮನಗರ, ಕೊಡಗು, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ ಮತ್ತು ಕೋಲಾರ ಈ ಜಿಲ್ಲೆಗಳಲ್ಲಿ ಅಧಿಕ ಮಳೆಯಾಗಲಿದೆ.
ರಾಜ್ಯದಲ್ಲಿ ಕರಾವಳಿ ಮತ್ತು ದಕ್ಷಿಣ ಒಳನಾಡು ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಕಳೆದ ಕೆಲ ದಿನಗಳಿಂದ ವರುಣನ ಅಬ್ಬರ ಮುಂದುವರೆದಿದೆ. ಕೆಲವೆಡೆ ಜಿಟಿ ಜಿಟಿ ಮಳೆಯಾದರೆ, ಇನ್ನೂ ಕೆಲವೆಡೆ ಧಾರಾಕಾರ ಮಳೆ ಸುರಿದಿದೆ. ಭಾರತೀಯ ಹವಾಮಾನ ಇಲಾಖೆಯ(IMD-India Meteorological Department) ಮಾಹಿತಿ ಪ್ರಕಾರ, ರಾಜ್ಯದ ಇಂದು ಕರಾವಳಿ ಮತ್ತು ಮಲೆನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಉಳಿದಂತೆ ಉತ್ತರ ಒಳನಾಡು(NIK) ಮತ್ತು ದಕ್ಷಿಣ ಒಳನಾಡಿನಲ್ಲೂ(SIK) ಇಂದು ಮಳೆ ಮುಂದುವರೆಯಲಿದೆ.
ಇದನ್ನು ಓದಿ: Karnataka Dams Water Level: ರಾಜ್ಯದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಇಂತಿದೆ
ಜುಲೈ ತಿಂಗಳಲ್ಲಿ ವರುಣನ ಆರ್ಭಟಕ್ಕೆ ಮಲೆನಾಡು, ಕರಾವಳಿ ಮತ್ತು ಉತ್ತರ ಕರ್ನಾಟಕದ ಜನರು ಅಕ್ಷರಶಃ ತತ್ತರಿಸಿ ಹೋಗಿದ್ದರು. ಈಗ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಮತ್ತೆ ಮಳೆರಾಯನ ಆರ್ಭಟ ಶುರುವಾಗಿದೆ. ಅದರಲ್ಲೂ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಭಾಗಗಳಲ್ಲಿ ವರುಣನ ಅಬ್ಬರ ಮುಂದುವರೆದಿದೆ. ಇಂದು ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗಲಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಳಗಾವಿ, ಬೀದರ್, ಗದಗ, ರಾಯಚೂರು, ಧಾರವಾಡ, ಹಾವೇರಿ, ಕಲಬುರ್ಗಿ, ವಿಜಯಪುರ, ಕೊಪ್ಪಳ, ಯಾದಗಿರಿಯಲ್ಲಿ ಇಂದು ಮಳೆಯ ಪ್ರಮಾಣ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ