ಹಿಮಾಚಲ ಪ್ರದೇಶದ (Himachal Pradesh) ಹೊಸ ಮುಖ್ಯಮಂತ್ರಿಯಾಗಿ (New Chief Minister) ಸುಖ್ವಿಂದರ್ ಸಿಂಗ್ ಸುಖು (Sukhwindar Singh Sukhu) ಪ್ರಮಾಣ ವಚನ (Oath Taking) ಸ್ವೀಕರಿಸಿದರು. ಹಿಮಾಚಲ ಪ್ರದೇಶದ ಉಪಮುಖ್ಯಮಂತ್ರಿಯಾಗಿ ಮುಖೇಶ್ ಅಗ್ನಿಹೋತ್ರಿ ಪ್ರಮಾಣ ವಚನ ಸ್ವೀಕರಿಸಿದರು. ಹಿಮಾಚಲ ಪ್ರದೇಶದ 15ನೇ ಮುಖ್ಯಮಂತ್ರಿಯಾಗಿ ಸುಖ್ವಿಂದರ್ ಸಿಂಗ್ ಸುಖು ಪ್ರಮಾಣ ವಚನ ಸ್ವೀಕರಿಸಿದರು. ಸುಖ್ವಿಂದರ್ ಸಿಂಗ್ ಸುಖು ಅವರು ಕಾಂಗ್ರೆಸ್ ಮಾಜಿ ರಾಜ್ಯ ಮುಖ್ಯಸ್ಥರಾಗಿದ್ದರು. ಚುನಾವಣೆಯಲ್ಲಿ ನಾವು 10 ಭರವಸೆ ನೀಡಿದ್ದೇವೆ. ಇನ್ನು ಅವುಗಳನ್ನು ಕಾರ್ಯಗತಗೊಳಿಸುತ್ತೇವೆ. ಪಾರದರ್ಶಕ ಮತ್ತು ಪ್ರಾಮಾಣಿಕ ಆಡಳಿತ ನಡೆಸುತ್ತೇವೆ ಎಂದು ನೂತನ ಸಿಎಂ ಸುಖ್ವಿಂದರ್ ಸಿಂಗ್ ಸುಖು ಹೇಳಿದರು.
ಹಿಮಾಚಲ ಪ್ರದೇಶದ ನೂತನ ಸಿಎಂ ಆಗಿ ಸುಖ್ವಿಂದರ್ ಸಿಂಗ್ ಸುಖು ಪ್ರಮಾಣವಚನ
ಹಿಮಾಚಲ ಪ್ರದೇಶ, ಶಿಮ್ಲಾದ ಐತಿಹಾಸಿಕ ರಿಡ್ಜ್ ಮೈದಾನದಲ್ಲಿ ಪ್ರಮಾಣ ವಚನ ಕಾರ್ಯಕ್ರಮ ನಡೆಯಿತು. ಸಮಾರಂಭದಲ್ಲಿ 58 ವರ್ಷದ ಸುಖ್ವಿಂದರ್ ಸಿಂಗ್ ಸುಖು ಅವರು ಹೊಸ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದರು.
ಹಿಮಾಚಲ ಪ್ರದೇಶದ 15ನೇ ಮುಖ್ಯಮಂತ್ರಿಯಾಗಿ ಸುಖ್ವಿಂದರ್ ಸಿಂಗ್ ಸುಖು ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರು ಸುಖ್ವಿಂದರ್ ಸಿಂಗ್ ಸುಖು ಅವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು.
ಸಮಾರಂಭದಲ್ಲಿ ಕಾಂಗ್ರೆಸ್ ನಾಯಕರು, ಗಣ್ಯರ ಉಪಸ್ಥಿತಿ
ಸಮಾರಂಭದಲ್ಲಿ ಕಾಂಗ್ರೆಸ್ ಪಕ್ಷದ ನಾಯಕರಾದ ರಾಹುಲ್ ಗಾಂಧಿ, ಕಾಂಗ್ರೆಸ್ ಹಿರಿಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕಾ ಗಾಂಧಿ ವಾದ್ರಾ, ಛತ್ತೀಸ್ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್, ರಾಜಸ್ಥಾನದ ಸಿಎಂ ಅಶೋಕ್ ಗೆಹ್ಲೋಟ್ ಉಪಸ್ಥಿತರಿದ್ದರು.
ಇತ್ತ ಮಾಜಿ ಕೇಂದ್ರ ಸಚಿವ ಆನಂದ್ ಶರ್ಮಾ, ಹರಿಯಾಣದ ಮಾಜಿ ಸಿಎಂ ಭೂಪಿಂದರ್ ಸಿಂಗ್ ಹೂಡಾ, ಕಾಂಗ್ರೆಸ್ ಹಿಮಾಚಲ ಪ್ರದೇಶ ಉಸ್ತುವಾರಿ ರಾಜೀವ್ ಶುಕ್ಲಾ, ರಾಜ್ಯ ಕಾಂಗ್ರೆಸ್ ಮುಖ್ಯಸ್ಥೆ ಪ್ರತಿಭಾ ಸಿಂಗ್ ಮತ್ತು ಹಿರಿಯ ನಾಯಕ ಸಚಿನ್ ಪೈಲಟ್ ಪ್ರಮಾಣವಚನ ಸಮಾರಂಭದಲ್ಲಿ ಭಾಗಿಯಾಗಿದ್ದರು.
ಚುನಾವಣೆ ವೇಳೆ ನೀಡಿದ ಹತ್ತು ಭರವಸೆಗಳ ಈಡೇರಿಸುತ್ತೇವೆ
ಇನ್ನು ಚುನಾವಣೆ ವೇಳೆ ಹಿಮಾಚಲ ಪ್ರದೇಶದ ಜನತೆಗೆ ನೀಡಿರುವ ಹತ್ತು ಭರವಸೆ ಈಡೇರಿಸಲು ಕೆಲಸ ಮಾಡುತ್ತೇವೆ. ಪಾರದರ್ಶಕ ಮತ್ತು ಪ್ರಾಮಾಣಿಕ ಆಡಳಿತ ನಡೆಸುತ್ತೇವೆ. ಮೊದಲ ಕ್ಯಾಬಿನೆಟ್ ಸಭೆಯಲ್ಲಿ ಹಳೆಯ ಪಿಂಚಣಿ ಯೋಜನೆ ಜಾರಿಗೆ ತರುತ್ತೇವೆ.
ನಾವು ವ್ಯವಸ್ಥೆಯನ್ನು ಬದಲಿಸುತ್ತೇವೆ ಎಂದು ಜನರಿಗೆ ಆಶ್ವಾಸನೆ ನೀಡಿದ್ದಾರೆ. ಪಕ್ಷವು ಜನರಿಗೆ ನೀಡಿದ ಭರವಸೆ ಈಡೇರಿಸುವ ಜವಾಬ್ದಾರಿ ನನ್ನ ಮೇಲಿದೆ. ಹೊಸ ಬದಲಾವಣೆಗೆ ಶ್ರಮ ಮತ್ತು ಹೋರಾಟ ಮಾಡ್ಬೇಕಿದೆ ಎಂದು ಸುಖು ಹೇಳಿದ್ದಾರೆ.
ಸುಖವಿಂದರ್ ಸಿಂಗ್ ಸುಖು ಅವರಿಗೆ ಅಭಿನಂದಿಸಿದ ಪ್ರಧಾನಿ ಮೋದಿ
ಹಿಮಾಚಲ ಪ್ರದೇಶದ ನೂತನ ಸಿಎಂ ಸುಖವಿಂದರ್ ಸಿಂಗ್ ಸುಖು ಅವರಿಗೆ ಪ್ರಧಾನಿ ಮೋದಿ ಅಭಿನಂದನೆ ಸಲ್ಲಿಸಿ ಟ್ವೀಟ್ ಮಾಡಿದ್ದಾರೆ. ಹಿಮಾಚಲ ಪ್ರದೇಶದ ಅಭಿವೃದ್ಧಿಗೆ ಬೇಕಾದ ಎಲ್ಲಾ ಸಹಕಾರವನ್ನು ಕೇಂದ್ರ ನೀಡಲಿದೆ ಎಂದು ಟ್ವೀಟ್ ನಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ: ಪ್ರಧಾನಿ ಮೋದಿ ಮನ್ ಕಿ ಬಾತ್ ಹೆಸರಲ್ಲಿ ಪುಸ್ತಕ; ವಂಚಕ ಅರೆಸ್ಟ್
ಹಿಮಾಚಲ ಪ್ರದೇಶದ ನದೌನ್ ಕ್ಷೇತ್ರದಿಂದ ಸುಖ್ವಿಂದರ್ ಸಿಂಗ್ ಸುಖು ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಚುನಾವಣಾ ಸಮಿತಿಯ ಮುಖ್ಯಸ್ಥರಾಗಿಯೂ ಕೆಲಸ ಮಾಡಿದ್ದಾರೆ. ಸುಖ್ವಿಂದರ್ ಸಿಂಗ್ ಸುಖು ಕಾನೂನು ಪದವೀಧರರಾಗಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ