Acharya Dharmendra: ರಾಮ ಮಂದಿರ ಹೋರಾಟದ ಆಚಾರ್ಯ ಧರ್ಮೇಂದ್ರ ಇನ್ನಿಲ್ಲ

Acharya Dharmendra Passes Away: ತಮ್ಮ ಆವೇಶಭರಿತ ಭಾಷಣಗಳಿಗೆ ಹೆಸರಾದ 80 ವರ್ಷದ ಹಿಂದೂ ಮುಖಂಡ ಆಚಾರ್ಯ ಧರ್ಮೇಂದ್ರ ಅವರು ಕರುಳಿನ ಕಾಯಿಲೆಯಿಂದ ಬಳಲುತ್ತಿದ್ದರು.

ಆಚಾರ್ಯ ಧರ್ಮೇಂದ್ರ

ಆಚಾರ್ಯ ಧರ್ಮೇಂದ್ರ

  • Share this:
ಜೈಪುರ: ಶ್ರೀ ರಾಮ ಮಂದಿರ (Ram Mandir) ಹೋರಾಟದಲ್ಲಿ ಸಕ್ರಿಯರಾಗಿದ್ದ ಹಿಂದೂ ಮುಖಂಡ ಆಚಾರ್ಯ ಧರ್ಮೇಂದ್ರ (Hindu leader Acharya Dharmendra) ನಿಧನರಾಗಿದ್ದಾರೆ. ತಮ್ಮ ಆವೇಶಭರಿತ ಭಾಷಣಗಳಿಗೆ ಹೆಸರಾದ 80 ವರ್ಷದ ಹಿಂದೂ ಮುಖಂಡ ಆಚಾರ್ಯ ಧರ್ಮೇಂದ್ರ ಅವರು ಕರುಳಿನ ಕಾಯಿಲೆಯಿಂದ ಬಳಲುತ್ತಿದ್ದರು. ಅವರನ್ನು ಜೈಪುರದ (Jaipur)  ಸವಾಯಿ ಮಾನ್ ಸಿಂಗ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲೇ  ಆಚಾರ್ಯ ಧರ್ಮೇಂದ್ರ ಅವರು ಕೊನೆಯುಸಿರೆಳೆದಿದ್ದಾರೆ.

ದೇಶದಲ್ಲಿ ಈ ಹಿಂದೆ ನಡೆದಿದ್ದ ಬಾಬ್ರಿ ಧ್ವಂಸ ಪ್ರಕರಣದಲ್ಲಿ ಆಚಾರ್ಯ ಧರ್ಮೇಂದ್ರ, ಲಾಲ್ ಕೃಷ್ಣ ಅಡ್ವಾಣಿ, ಮುರಳಿ ಮನೋಹರ್ ಜೋಶಿ, ಕಲ್ಯಾಣ್ ಸಿಂಗ್ ಮತ್ತು ಉಮಾಭಾರತಿ ಅವರನ್ನು ಆರೋಪಿಗಳೆಂದು ಪರಿಗಣಿಸಲಾಗಿತ್ತು. ಗೋವುಗಳ ಕಲ್ಯಾಣಕ್ಕಾಗಿ ಧರ್ಮೇಂದ್ರ ಆಚಾರ್ಯ ಅವರು ಒಮ್ಮೆ 52 ದಿನಗಳ ಕಾಲ ಉಪವಾಸ ಮಾಡಿದ್ದರು. ಮಹಾತ್ಮಾ ಗಾಂಧಿ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ ಕೆಲಕಾಲ ಸುದ್ದಿಯಲ್ಲಿದ್ದರು.

ರಾಮ ಜನ್ಮಭೂಮಿ ಮಂದಿರ ಚಳವಳಿಯಲ್ಲಿ ಸಕ್ರಿಯ
ಅಲ್ಲದೇ ಆಚಾರ್ಯ ಧರ್ಮೇಂದ್ರ ಅವರು ಮಹಾತ್ಮ ರಾಮಚಂದ್ರ ವೀರ ಮಹಾರಾಜರ ಪುತ್ರ ಆಚಾರ್ಯ ಧರ್ಮೇಂದ್ರ ಅವರು ರಾಮ ಜನ್ಮಭೂಮಿ ಮಂದಿರ ಚಳವಳಿಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು. ಅವರು ತಮ್ಮ ಇಡೀ ಜೀವನವನ್ನು ಹಿಂದೂ, ಹಿಂದೂತ್ವ ಮತ್ತು ಹಿಂದೂಸ್ತಾನದ ಪ್ರಗತಿಗೆ ಮುಡಿಪಾಗಿಟ್ಟಿದ್ದರು. 

13 ವರ್ಷದವರಿದ್ದಾಗಲೇ ವಜ್ರಂಗ್ ಎಂಬ ಪತ್ರಿಕೆ ಸ್ಥಾಪನೆ
ಆಚಾರ್ಯ ಧರ್ಮೇಂದ್ರ ಅವರು ಕೇವಲ 13 ವರ್ಷದವರಾಗಿದ್ದಾಗ ವಜ್ರಂಗ್ ಎಂಬ ಪತ್ರಿಕೆಯನ್ನು ಸ್ಥಾಪಿಸಿದರು. ಅವರು ವಿಶ್ವ ಹಿಂದೂ ಪರಿಷತ್ತಿನ ಕೇಂದ್ರ ಮಾರ್ಗದರ್ಶನ ಮಂಡಳಿಯಲ್ಲಿ ಸೇವೆ ಸಲ್ಲಿಸಿದ್ದರು. ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಸಂತಾಪ
ಹಿಂದೂ ಮುಖಂಡ ಆಚಾರ್ಯ ಧರ್ಮೇಂದ್ರ ಅವರ ನಿಧನಕ್ಕೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಸಂತಾಪ ಸೂಚಿಸಿದ್ದಾರೆ. ಶ್ರೀಮದ್ ಪಂಚಖಂಡ ಪೀಠಾಧೀಶ್ವರ ಆಚಾರ್ಯ ಧರ್ಮೇಂದ್ರ ಜಿ ಅವರ ನಿಧನ ಸನಾತನ ಧರ್ಮಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಟ್ವೀಟ್ ಮಾಡುವ ಮೂಲಕ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಸಂತಾಪ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಬೇಬಿ ಪೌಡರ್ ಬಳಕೆದಾರರೇ ಗಮನಿಸಿ, Johnson & Johnson ಬೇಬಿ ಪೌಡರ್ ಲೈಸೆನ್ಸ್ ರದ್ದು

ಸಂಚು ರೂಪಿಸಿ ರಾಜಶೇಖರ್ ರೆಡ್ಡಿ ಕೊಲೆ; ವೈಎಸ್ ಶರ್ಮಿಳಾ ಗಂಭೀರ ಆರೋಪ
ನನ್ನ ತಂದೆ, ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ವೈಎಸ್ ರಾಜಶೇಖರ್ ರೆಡ್ಡಿ ಅವರನ್ನು ಸಂಚು ರೂಪಿಸಿ ಕೊಲೆ ಮಾಡಲಾಗಿದೆ ಎಂದು ವೈಎಸ್ಆರ್ ತೆಲಂಗಾಣ ಪಕ್ಷದ ಅಧ್ಯಕ್ಷೆ ವೈಎಸ್ ಶರ್ಮಿಳಾ  ಗಂಭೀರ ಆರೋಪ ಮಾಡಿದ್ದಾರೆ. ನನ್ನ ತಂದೆ ವೈ ಎಸ್ ರಾಜಶೇಖರ್ ರೆಡ್ಡಿ ಸಾವಿನ ಹಿಂದೆ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರ ಕೈವಾಡವಿದೆ. ನನ್ನನ್ನೂ ಕೊಲೆ ಮಾಡಲು ಕುತಂತ್ರ ರೂಪಿಸಲಾಗುತ್ತಿದೆ. ಆದರೆ ನಾನು ಅಂತಹ ಕುತಂತ್ರಗಳಿಗೆ ಜಗ್ಗುವುದಿಲ್ಲ ಎಂದು ಶರ್ಮಿಳಾ ಆರೋಪಿಸಿದ್ದಾರೆ. ಅವರ ಈ ಹೇಳಿಕೆ ರಾಜಕೀಯ ಸಂಚಲನವನ್ನೇ ಸೃಷ್ಟಿಸಿದೆ.

ಇದನ್ನೂ ಓದಿ: Viral News: ಹುಟ್ಟಿ 9 ವರ್ಷ ಆದ್ಮೇಲೆ ಮಗಳಿಗೆ ಹೆಸರಿಟ್ಟ ದಂಪತಿ - ಕಾರಣ ಮುಖ್ಯಮಂತ್ರಿ!

ರಾಜ್ಯದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ಬಗ್ಗೆ ಮಾತನಾಡಿದರೆ ಆಡಳಿತ ಪಕ್ಷದ ನಾಯಕರಿಗೆ ನಡುಕ ಏಕೆ ಎಂದು ಶರ್ಮಿಳಾ ಪ್ರಶ್ನೆ ಎತ್ತಿದ್ದಾರೆ.
Published by:ಗುರುಗಣೇಶ ಡಬ್ಗುಳಿ
First published: