Sushma ChakreSushma Chakre
|
news18-kannada Updated:May 17, 2020, 5:56 PM IST
ಸಾಂದರ್ಭಿಕ ಚಿತ್ರ
ಶ್ರೀನಗರ (ಮೇ 17): ಜಮ್ಮು ಮತ್ತು ಕಾಶ್ಮೀರದ ದೋಡಾದಲ್ಲಿ ಇಂದು ಭಾರತೀಯ ಭದ್ರತಾ ಪಡೆ ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದೆ. ಈ ದಾಳಿಯಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಓರ್ವ ಉಗ್ರನನ್ನು ಹೊಡೆದುರುಳಿಸಿದೆ. ಈ ಕಾರ್ಯಾಚರಣೆಯಲ್ಲಿ ಭಾರತೀಯ ಸೇನೆಯ ಯೋಧ ಕೂಡ ಹುತಾತ್ಮರಾಗಿದ್ದಾರೆ.
ಈ ಬಗ್ಗೆ ಜಮ್ಮುವಿನ ಐಜಿಪಿ ಮುಖೇಶ್ ಸಿಂಗ್ ಮಾಹಿತಿ ನೀಡಿದ್ದಾರೆ. ಜಮ್ಮುವಿನ ಗುಂಡ್ನಾ ದೋಡಾ ಎಂಬಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯ ಉಗ್ರರು ಅಡಗಿ ಕುಳಿತಿರುವ ಬಗ್ಗೆ ಮಾಹಿತಿ ಸಿಕ್ಕಿತ್ತು. ಹೀಗಾಗಿ, ಸೇನಾಪಡೆಯ ಸಿಬ್ಬಂದಿ ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿತ್ತು. ಈ ವೇಳೆ ನಡೆಸಿದ ಎನ್ಕೌಂಟರ್ನಲ್ಲಿ ಓರ್ವ ಉಗ್ರನನ್ನು ಹತ್ಯೆ ಮಾಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಕರ್ನಾಟಕದಲ್ಲಿ ಇನ್ನೆರಡು ದಿನ ಲಾಕ್ಡೌನ್ ವಿಸ್ತರಣೆ; ಸಿಎಂ ಯಡಿಯೂರಪ್ಪ ನಿರ್ಧಾರ
ಘಟನೆ ನಡೆದ ಸ್ಥಳದಲ್ಲಿ ಇನ್ನೂ ಸಾಕಷ್ಟು ಉಗ್ರರು ಅಡಗಿರುವ ಬಗ್ಗೆ ಸುಳಿವು ಸಿಕ್ಕಿದೆ. ಹೀಗಾಗಿ, ಕಾರ್ಯಾಚರಣೆ ಮುಂದುರೆದಿದೆ. ಕೆಲವು ದಿನಗಳ ಹಿಂದೆ ಕಾಶ್ಮೀರದಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯ ನಾಯಕ ರಿಯಾಜ್ ನಾಯ್ಕೋನನ್ನು ಭದ್ರತಾ ಪಡೆಯ ಸಿಬ್ಬಂದಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದರು. ಬಳಿಕ, ರಿಯಾಜ್ ಜೊತೆಗೆ ನಂಟು ಹೊಂದಿದ್ದ ಕೆಲವರನ್ನು ಬಂಧಿಸಿದ್ದರು.
First published:
May 17, 2020, 5:55 PM IST