ಸಿಎಎ ವಿರುದ್ಧದ ಪ್ರತಿಭಟನೆ ವೇಳೆ ಗುಂಡಿನ ದಾಳಿ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಗೃಹ ಸಚಿವ ಅಮಿತ್ ಶಾ ಸೂಚನೆ

ಇನ್ನು ವಿದ್ಯಾರ್ಥಿಗಳ ಮೇಲೆ ಗುಂಡಿನ ದಾಳಿ ನಡೆಸಿದ ಆರೋಪಿ ಅಪ್ರಾಪ್ತ ಎಂದು ಪೊಲೀಸ್ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಗುಂಡಿನ ದಾಳಿಯಿಂದ ವಿದ್ಯಾರ್ಥಿ ಶಾದಾಬ್ ಫಾರೂಖ್ ಕಾಲಿಗೆ ಗಾಯವಾಗಿದ್ದು, ಚಿಕಿತ್ಸೆಗಾಗಿ ದೆಹಲಿಯ ಏಮ್ಸ್​ ಆಸ್ಪತ್ರೆಗೆ ದಾಖಲಿಸಲಾಗಿದೆ.

HR Ramesh | news18-kannada
Updated:January 30, 2020, 9:39 PM IST
ಸಿಎಎ ವಿರುದ್ಧದ ಪ್ರತಿಭಟನೆ ವೇಳೆ ಗುಂಡಿನ ದಾಳಿ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಗೃಹ ಸಚಿವ ಅಮಿತ್ ಶಾ ಸೂಚನೆ
ಅಮಿತ್ ಶಾ
  • Share this:
ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ಜಾಮಿಯಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಮೇಲೆ ಗುಂಡಿನ ದಾಳಿ ನಡೆಸಿದ ಪ್ರಕರಣ ಸಂಬಂಧ ಗೃಹ ಸಚಿವ ಅಮಿತ್ ಶಾ ಅವರು ಟ್ವೀಟ್ ಮಾಡಿದ್ದಾರೆ.

ಜಾಮಿಯಾ ವಿವಿ ಬಳಿ ಗುಂಡಿನ ದಾಳಿ ಪ್ರಕರಣವನ್ನು ದೆಹಲಿ ಪೊಲೀಸ್ ಕಮಿಷನರ್ ತನಿಖೆಗೆ ವರ್ಗಾಯಿಸಲಾಗಿದೆ. ಪ್ರವೀಣ್ ರಂಜನ್ ಅವರು ಇಡೀ ಘಟನೆಯ ಬಗ್ಗೆ ತನಿಖೆ ನಡೆಸಲಿದ್ದಾರೆ. ಈ ರೀತಿಯ ಘಟನೆಗಳನ್ನು ಕೇಂದ್ರ ಸರ್ಕಾರ ಸಹಿಸುವುದಿಲ್ಲ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಅಮಿತ್ ಶಾ ಅವರು ಟ್ವೀಟ್ ಮಾಡಿದ್ದಾರೆ.
ಅಮಿತ್ ಶಾ ಅವರು ಟ್ವೀಟ್ ಮಾಡಿದ ಬಳಿಕ ಅದನ್ನು ರಿಟ್ವೀಟ್ ಮಾಡಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಇಂತಹ ಘಟನೆಗಳು ಮರುಕಳಿಸದಂತೆ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಒತ್ತಾಯಿಸಿದ್ದಾರೆ.ये दिल्ली में क्या हो रहा है? दिल्ली की क़ानून व्यवस्था बिगड़ती जा रही है। कृपया दिल्ली की क़ानून व्यवस्था को सम्भालिये https://t.co/jtBtDqncNDಇನ್ನು ವಿದ್ಯಾರ್ಥಿಗಳ ಮೇಲೆ ಗುಂಡಿನ ದಾಳಿ ನಡೆಸಿದ ಆರೋಪಿ ಅಪ್ರಾಪ್ತ ಎಂದು ಪೊಲೀಸ್ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಗುಂಡಿನ ದಾಳಿಯಿಂದ ವಿದ್ಯಾರ್ಥಿ ಶಾದಾಬ್ ಫಾರೂಖ್ ಕಾಲಿಗೆ ಗಾಯವಾಗಿದ್ದು, ಚಿಕಿತ್ಸೆಗಾಗಿ ದೆಹಲಿಯ ಏಮ್ಸ್​ ಆಸ್ಪತ್ರೆಗೆ ದಾಖಲಿಸಲಾಗಿದೆ.

 
First published: January 30, 2020, 9:39 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading