ನಿರ್ಭಯಾ ಪ್ರಕರಣ: ಅಪರಾಧಿ ಮುಕೇಶ್ ಸಿಂಗ್ ಕ್ಷಮಾದಾನ ಮನವಿ ತಿರಸ್ಕರಿಸುವಂತೆ ರಾಷ್ಟ್ರಪತಿಗೆ ಗೃಹ ಸಚಿವಾಲಯ ಶಿಫಾರಸು

ದೆಹಲಿ ಹೈಕೋರ್ಟ್ ಈ ನಾಲ್ವರಿಗೆ ಈಗಾಗಲೇ ಡೆತ್ ವಾರೆಂಟ್ ಹೊರಡಿಸಿದೆ. ಜನವರಿ 22, ಬೆಳಗ್ಗೆ 7ಗಂಟೆಗೆ ನೇಣಿಗೇರಿಸಲು ಸಮಯ ನಿಗದಿಯಾಗಿತ್ತು. ಆದರೆ, ಕ್ಷಮಾದಾನ ಅರ್ಜಿ ಹಾಗೂ ಸರ್ಕಾರಗಳ ಔದಾಸೀನ್ಯದಿಂದಾಗಿ ಅಪರಾಧಿಗಳನ್ನು ನೇಣಿಗೇರಿಸುವುದು ವಿಳಂಬವಾಗುತ್ತಾ ಬಂದಿದೆ.

news18
Updated:January 17, 2020, 1:02 PM IST
ನಿರ್ಭಯಾ ಪ್ರಕರಣ: ಅಪರಾಧಿ ಮುಕೇಶ್ ಸಿಂಗ್ ಕ್ಷಮಾದಾನ ಮನವಿ ತಿರಸ್ಕರಿಸುವಂತೆ ರಾಷ್ಟ್ರಪತಿಗೆ ಗೃಹ ಸಚಿವಾಲಯ ಶಿಫಾರಸು
ರೇಖಾಚಿತ್ರ- ಮೀರ್ ಸುಹೈಲ್
  • News18
  • Last Updated: January 17, 2020, 1:02 PM IST
  • Share this:
ನವದೆಹಲಿ(ಜ. 17): ನಿರ್ಭಯಾ ಪ್ರಕರಣದಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ನಾಲ್ವರು ಅತ್ಯಾಚಾರಿಗಳ ಪೈಕಿ ಮುಕೇಶ್ ಸಿಂಗ್ ಎಂಬಾತ ಕ್ಷಮಾದಾನ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ರಾಷ್ಟ್ರಪತಿಗಳ ಅವಗಾಹನೆಗೆ ಕಳುಹಿಸಿಕೊಡಲಾಗಿದೆ. ಆದರೆ, ಮುಕೇಶ್ ಸಿಂಗ್​ನ ಈ ಮನವಿಯನ್ನು ತಿರಸ್ಕರಿಸುವಂತೆ ಕೇಂದ್ರ ಗೃಹ ಸಚಿವಾಲಯ ಶಿಫಾರಸೂ ಕೂಡ ಮಾಡಿದೆ.

ಮುಕೇಶ್ ಸಿಂಗ್ ಕೆಲ ದಿನಗಳ ಹಿಂದೆ ತನಗೆ ಕ್ಷಮಾದಾನ ನೀಡುವಂತೆ ಮನವಿ ಮಾಡಿಕೊಂಡಿದ್ದ. ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಗುರುವಾರ ಈ ಮನವಿಯನ್ನು ಗೃಹ ಸಚಿವಾಲಯಕ್ಕೆ ರವಾನಿಸಿದ್ದರು. ಮನವಿ ತಿರಸ್ಕರಿಸುವಂತೆ ಶಿಫಾರಸು ಮಾಡಿದ್ದರು.

ಇದನ್ನೂ ಓದಿ: ಸರ್ಕಾರ ನಮಗಲ್ಲ, ಅಪರಾಧಿಗಳಿಗೆ ಸಹಾಯ ಮಾಡುತ್ತಿದೆ; ನಿರ್ಭಯಾ ತಾಯಿಯಿಂದ ಗಂಭೀರ ಆರೋಪ

2012ರಲ್ಲಿ ದೆಹಲಿಯಲ್ಲಿ ಆರು ಮಂದಿ ಸೇರಿ ನಿರ್ಭಯಾ(ಹೆಸರು ಬದಲಿಸಲಾಗಿದೆ) ಮೇಲೆ ಅಮಾನುಷ ರೀತಿಯಲ್ಲಿ ಸಾಮೂಹಿಕ ಅತ್ಯಾಚಾರ ಎಸಗಿದ್ದರು. ಕೆಲ ದಿನಗಳ ಜೀವನ್ಮರಣ ಹೋರಾಟದ ಬಳಿಕ ಆಕೆ ಸಾವನ್ನಪ್ಪಿದ್ದರು. ಪೊಲೀಸರು ಎಲ್ಲಾ 6 ಮಂದಿಯನ್ನು ಬಂಧಿಸಿದ್ದರು. ಅವರಲ್ಲಿ ಒಬ್ಬ ಬಾಲಾಪರಾಧಿಯಾಗಿದ್ದು, ಆತನಿಗೆ ಬಾಲಾಪರಾಧ ನಿಯಮದ ಪ್ರಕಾರ ಶಿಕ್ಷೆಯಾಗಿದೆ. ರಾಮ್ ಸಿಂಗ್ ಎಂಬ ಪ್ರಮುಖ ಆರೋಪಿಯು ತಿಹಾರ್ ಜೈಲಿನಲ್ಲೇ ನೇಣಿಗೆ ಶರಣಾಗಿದ್ದ. ಉಳಿದ ನಾಲ್ವರಿಗೆ ಮರಣದಂಡನೆ ಶಿಕ್ಷೆಯಾಗಿದೆ. ಆದರೆ, ಮೇಲ್ಮನವಿ, ಕ್ಷಮಾದಾನ ಅರ್ಜಿಗಳ ಕಾರಣದಿಂದಾಗಿ ಅವರನ್ನು ಗಲ್ಲಿಗೇರಿಸುವುದು ತಡವಾಗಿದೆ.

ದೆಹಲಿ ಹೈಕೋರ್ಟ್ ಈ ನಾಲ್ವರಿಗೆ ಈಗಾಗಲೇ ಡೆತ್ ವಾರೆಂಟ್ ಹೊರಡಿಸಿದೆ. ಜನವರಿ 22, ಬೆಳಗ್ಗೆ 7ಗಂಟೆಗೆ ನೇಣಿಗೇರಿಸಲು ಸಮಯ ನಿಗದಿಯಾಗಿತ್ತು. ಆದರೆ, ಕ್ಷಮಾದಾನ ಅರ್ಜಿ  ಹಾಗೂ ಸರ್ಕಾರಗಳ ಔದಾಸೀನ್ಯದಿಂದಾಗಿ ಅಪರಾಧಿಗಳನ್ನು ನೇಣಿಗೇರಿಸುವುದು ವಿಳಂಬವಾಗುತ್ತಾ ಬಂದಿದೆ. ನಿರ್ಭಯಾಳ ತಾಯಿ ಕೂಡ ಇದೇ ವಿಚಾರವಾಗಿ ನಿನ್ನೆ ಆಕ್ರೋಶ ವ್ಯಕ್ತಪಡಿಸಿದ್ದರು. ಅಪರಾಧಿಗಳಿಗೆ ಶಿಕ್ಷೆಯಾಗುವುದಕ್ಕಿಂತ ತಮಗೆಯೇ ಶಿಕ್ಷೆಯಾಗುತ್ತಿರುವ ಭಾವನೆ ಬರುತ್ತಿದೆ ಎಂದು ಅಳಲು ತೋಡಿಕೊಂಡಿದ್ದರು.

ಕ್ಷಣಕ್ಷಣದ ಬ್ರೇಕಿಂಗ್ ನ್ಯೂಸ್ ಅಲರ್ಟ್​ಗಾಗಿ ನಿಮ್ಮ ನ್ಯೂಸ್18 ಕನ್ನಡವನ್ನು ಫೇಸ್​ಬುಕ್ ಮೆಸೆಂಜರ್​ನಲ್ಲಿ ಸಬ್ಸ್​ಕ್ರೈಬ್ ಮಾಡಿ.

First published:January 17, 2020
ಮತ್ತಷ್ಟು ಓದಿರಿ
ಮುಂದಿನ ಸುದ್ದಿ