Supreme Court| ಲಖೀಂಪುರ್​ ಖೇರಿ ಹಿಂಸಾಚಾರ ಪ್ರಕರಣದಲ್ಲಿ ಎಷ್ಟು ಜನರನ್ನು ಬಂಧಿಸಿದ್ದೀರಿ? ವರದಿ ಕೇಳಿದ ಸುಪ್ರೀಂ

ನಾಲ್ವರು ರೈತರು, ಒಬ್ಬ ಪತ್ರಕರ್ತ ಮತ್ತು ಮೂವರು ಬಿಜೆಪಿ ಕಾರ್ಯಕರ್ತರು ಹತ್ಯೆಯಾಗಿರುವ ಪ್ರಕರಣದಲ್ಲಿ ಮುಖ್ಯವಾಗಿ ಉತ್ತರ ಪ್ರದೇಶ ತೆಗೆದುಕೊಂಡಿರುವ ಕ್ರಮಗಳು ಮತ್ತು ತನಿಖೆಯ ವರದಿ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ.

ಪ್ರಾತಿನಿಧಿಕ ಚಿತ್ರ.

ಪ್ರಾತಿನಿಧಿಕ ಚಿತ್ರ.

 • Share this:
  ನವ ದೆಹಲಿ (ಅಕ್ಟೋಬರ್​ 07); ಪ್ರತಿಭಟನೆ ಮಾಡುತ್ತಿದ್ದ ರೈತರ ಮೇಲೆ ಕಾರು ಹರಿಸಿರುವ ಉತ್ತರ ಪ್ರದೇಶದ ಲಖಿಂಪುರ್ ಖೇರಿ ಹಿಂಸಾಚಾರ (Lakhimpur Kheri Violence ) ಪ್ರಕರಣದಲ್ಲಿ ರೈತರು ಸೇರಿದಂತೆ ಒಟ್ಟು 9 ಜನ ಮೃತಪಟ್ಟಿದ್ದಾರೆ. ಹೀಗಾಗಿ ರಾಷ್ಟ್ರಾದ್ಯಂತ ಕ್ರಮಕ್ಕೆ ಆಗ್ರಹಿಸಿ ಒತ್ತಾಯ ಕೇಳಿಬಂದಿತ್ತು. ಪರಿಣಾಮ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದೇಶದ ಸರ್ವೋಚ್ಚ ನ್ಯಾಯಾಲಯವು (Supreme Court) ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದು ಅದರ ವಿಚಾರಣೆ ಇಂದು ಆರಂಭಿಸಿದೆ. ವಿಚಾರಣೆ ವೇಳೆ ಕೋರ್ಟ್​, "ಲಖೀಂಪುರ್​ ಹತ್ಯಾಕಾಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ಉತ್ತರಪ್ರದೇಶ ಪೊಲೀಸರು ಎಷ್ಟು ಜನರನ್ನು ಬಂಧಿಸಿದ್ದೀರಿ? ಈ ಬಗ್ಗೆ ನಾಳೆಯ ಒಳಗೆ ಸರ್ವೋಚ್ಚ ನ್ಯಾಯಾಲಯಕ್ಕೆ ವರದಿ ಸಲ್ಲಿಸಿ" ಎಂದು ತಾಕೀತು ಮಾಡಿದೆ.

  ನಾಲ್ವರು ರೈತರು, ಒಬ್ಬ ಪತ್ರಕರ್ತ ಮತ್ತು ಮೂವರು ಬಿಜೆಪಿ ಕಾರ್ಯಕರ್ತರು ಹತ್ಯೆಯಾಗಿರುವ ಪ್ರಕರಣದಲ್ಲಿ ಮುಖ್ಯವಾಗಿ ಉತ್ತರ ಪ್ರದೇಶ ತೆಗೆದುಕೊಂಡಿರುವ ಕ್ರಮಗಳು ಮತ್ತು ತನಿಖೆಯ ವರದಿ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ.

  ಇದು ದುರದೃಷ್ಟಕರ ಘಟನೆ. ನೀವು ಯಾರ ವಿರುದ್ಧ ಎಫ್ಐಆರ್ ದಾಖಲಿಸಿದ್ದೀರಿ? ನೀವು ಎಷ್ಟು ಜನರನ್ನು ಬಂಧಿಸಿದ್ದೀರಿ? ಎಂದು ಸುಪ್ರೀಂ ಕೋರ್ಟ್ ಉತ್ತರ ಪ್ರದೇಶ ಸರ್ಕಾರವನ್ನು ಪ್ರಶ್ನಿಸಿದೆ.

  ಇನ್ನೊಂದೆಡೆ ಲಖಿಂಪುರ್ ಖೇರಿ ಜಿಲ್ಲೆಯಲ್ಲಿ ನಡೆದ ಹತ್ಯಾಕಾಂಡದಲ್ಲಿ ರೈತರು, ಪತ್ರಕರ್ತ ಸೇರಿದಂತೆ 8 ಜನರು ಸಾವನಪ್ಪಿದ ಪ್ರಕರಣವನ್ನು ನಿವೃತ್ತ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದ ಸಮಿತಿಯು ತನಿಖೆ ನಡೆಸಲಿದೆ ಎಂದು ಉತ್ತರ ಪ್ರದೇಶ ಸರ್ಕಾರ ಘೋಷಿಸಿದೆ.

  ಅಲಹಾಬಾದ್ ಹೈಕೋರ್ಟ್ ನಿವೃತ್ತ ನ್ಯಾಯಾಧೀಶ ಪ್ರದೀಪ್ ಕುಮಾರ್ ಶ್ರೀವಾಸ್ತವ ನೇತೃತ್ವದಲ್ಲಿ ಏಕಸದಸ್ಯ ತನಿಖಾ ಆಯೋಗ ತನಿಖೆ ನಡೆಸಲಿದೆ ಎಂದು ಉತ್ತರ ಪ್ರದೇಶ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅವನಿಶ್ ಕುಮಾರ್ ಅವಸ್ಥಿ ತಿಳಿಸಿದ್ದಾರೆ. ಎರಡು ತಿಂಗಳ ಅವಧಿಯಲ್ಲಿ ತನಿಖೆಯನ್ನು ಪೂರ್ಣಗೊಳಿಸಿ ವರದಿ ನೀಡುವಂತೆ ಆಯೋಗಕ್ಕೆ ತಿಳಿಸಲಾಗಿದೆ.

  ಘಟನೆಗೆ ಸಂಬಂಧಪಟ್ಟಂತೆ ಸುಪ್ರೀಂ ಕೋರ್ಟ್ ಸ್ವಯಂಪ್ರೇರಿತವಾಗಿ ಸುಮೋಟೋ ಪ್ರಕರಣ ದಾಖಲಿಸಿಕೊಂಡಿದೆ. ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್. ವಿ ರಮಣ ನೇತೃತ್ವದ ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಹಿಮಾ ಕೊಹ್ಲಿ ಅವರನ್ನು ಒಳಗೊಂಡ ಸುಪ್ರೀಂ ಕೋರ್ಟ್ ಪೀಠವು ಇಂದು ಪ್ರಕರಣದ ವಿಚಾರಣೆ ನಡೆಸಲಿದೆ.

  ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾಗಾಗಿ ಪೊಲೀಸರು ಶೋಧ ನಡೆಸಿದ್ದಾರೆ. ಜೊತೆಗೆ ಶೀಘ್ರವೇ ಆಶಿಶ್ ಬಂಧನವಾಗಲಿದೆ ಎಂದು ಉತ್ತರ ಪ್ರದೇಶ ಪೊಲೀಸ್ ಐಜಿ ಲಕ್ಷ್ಮಿ ಸಿಂಗ್ ಅವರು ಹೇಳಿದ್ದಾರೆ.

  ಏನಿದು ಪ್ರಕರಣ?;

  ಕೇಂದ್ರ ಸಚಿವ ಅಜಯ್​ ಮಿಶ್ರಾ ಮತ್ತು ಡಿಸಿಎಂ ಕೇಶವ ಪ್ರಸಾದ್​ ಮೌರ್ಯ ಕಳೆದ ಭಾನುವಾರ ಉತ್ತರ ಪ್ರದೇಶದ ಲಖೀಮ್​ಪುರ್​ಗೆ ಆಗಮಿಸಿದ್ದರು. ಆದರೆ, ಅವರ ಈ ಭೇಟಿಯನ್ನು ತಡೆಯುವ ಸಲುವಾಗಿ ರೈತ ಪ್ರತಿಭಟನಾಕಾರರು ಹೆಲಿಪ್ಯಾಡ್​ಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದರು. ಹೀಗಾಗಿ ಅಜಯ್ ಮಿಶ್ರಾ ಸೇರಿದಂತೆ ಇನ್ನಿತರರು ರಸ್ತೆ ಮಾರ್ಗವಾಗಿಯೇ ಲಖಿಮಪುರಕ್ಕೆ ತೆರಳಿದ್ದರು. ಕಾರ್ಯಕ್ರಮದ ನಂತರ ಹಿಂದಿರುಗುತ್ತಿದ್ದ ವೇಳೆ ರೈತರ ಗುಂಪು ಕಪ್ಪು ಬಾವುಟ ಪ್ರದರ್ಶಿಸಿ ಕೇಂದ್ರದ ವಿರುದ್ಧ ಘೋಷಣೆಗಳನ್ನು ಕೂಗಿದ್ದರು.

  ಇದನ್ನೂ ಓದಿ: Lakhimpur Kheri Violence| ರಾಹುಲ್ ಗಾಂಧಿ ಭಲೇ ನಾಟಕಕಾರ; ಉತ್ತರಪ್ರದೇಶ ಸಚಿವ ಸಿದ್ಧಾರ್ಥ್​ ನಾಥ್ ಸಿಂಗ್ ಕಿಡಿ

  ಈ ವೇಳೆ ಸಚಿವರ ಪುತ್ರ ರೈತರ ಮೇಲೆ ಕಾರ್ ಚಲಾಯಿಸಿದ್ದಾರೆ. ಈ ಘಟನೆಯಲ್ಲಿ 4 ಜನ ರೈತರು ಸ್ಥಳದಲ್ಲೇ ಮೃತಪಟ್ಟಿದ್ದರೆ, ನಂತರ ನಡೆದ ಗಲಭೆಯಲ್ಲಿ 5 ಜನ ಪ್ರಾಣ ಕಳೆದುಕೊಂಡಿದ್ದಾರೆ. ಹಿಂಸಾಚಾರದಲ್ಲಿ ಓರ್ವ ಪ್ರತಕರ್ತನೂ ಮೃತಪಟ್ಟಿದ್ದು ಕಾರಣ ಇನ್ನೂ ತಿಳಿದುಬಂದಿಲ್ಲ. ಈ ಘಟನೆ ನಂತರ ಲಖೀಮ್​ಪುರ್​ನಲ್ಲಿ ಭಾರೀ ಹಿಂಸಾಚಾರ ಭುಗಿಲೆದ್ದಿದೆ. ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಒಕ್ಕೂಟ ಸರ್ಕಾರದ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ವಿರುದ್ಧ ಕೊಲೆ ಪ್ರಕರಣವನ್ನು ದಾಖಲಿಸಿದೆ. ಅಲ್ಲದೆ, ಇನ್ನೂ ಇತರ 13 ಜನರ ವಿರುದ್ಧ ಎಫ್‌ಐಆರ್‌‌ ದಾಖಲಿಸಲಾಗಿದೆ.
  Published by:MAshok Kumar
  First published: