ಲೆಬನಾನ್‌ ಬಂದರು ಪ್ರದೇಶದಲ್ಲಿ ಭಾರೀ ಸ್ಫೋಟ; ಕನಿಷ್ಠ 10 ಮಂದಿ ಸಾವು, ನೂರಾರು ಜನರಿಗೆ ಗಾಯ

ಸ್ಪೋಟದ ರುವಾರಿ ಯಾರು? ಮತ್ತು ಈ ಸ್ಪೋಟಕ್ಕೆ ಕಾರಣ ಏನು? ಎಂಬ ಕುರಿತು ಈವರೆಗೆ ತಿಳಿದುಬಂದಿಲ್ಲ ಎಂದು ಲೆಬನಾನ್ ಸರ್ಕಾರದ ಅಧಿಕಾರಿಗಳು ಅಂತಾರಾಷ್ಟ್ರೀಯ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಲೆಬನಾನ್‌ನಲ್ಲಿ ಸ್ಫೋಟವಾಗಿರುವ ದೃಶ್ಯ.

ಲೆಬನಾನ್‌ನಲ್ಲಿ ಸ್ಫೋಟವಾಗಿರುವ ದೃಶ್ಯ.

 • Share this:
  ಬೈರುತ್‌ (ಆಗಸ್ಟ್‌ 04); ಲೆಬನಾನ್ ರಾಜಧಾನಿ ಬೈರುತ್ ನಗರದ ಬಂದರು ಪ್ರದೇಶದಲ್ಲಿ ಇಂದು ಸಂಭವಿಸಿರುವ ಭಾರೀ ಸ್ಟೋಟದಿಂದಾಗಿ ಕನಿಷ್ಠ ಹತ್ತು ಮಂದಿ ಸಾವನ್ನಪ್ಪಿದ್ದು, ನೂರಾರು ಜನ ಗಾಯಗೊಂಡಿದ್ದಾರೆ ಎಂದು ಆ ದೇಶದ ಆರೋಗ್ಯ ಸಚಿವ ಹಮದ್ ಹಸನ್ ತಿಳಿಸಿದ್ದಾರೆ.

  ಕಳೆದ ಹಲವು ವರ್ಷಗಳಿಂದ ಯುದ್ಧಭೂಮಿಯಂತಾಗಿರುವ ಲೆಬನಾನ್‌ನಲ್ಲಿ ಕಳೆದ ಕೆಲ ದಿನಗಳಿಂದ ಗುಂಡಿನ ಮೊರೆತ ನಿಶ್ಯಬ್ಧತೆಯನ್ನು ತಬ್ಬಿತ್ತು. ಆದರೆ, ಇಂದು ಬೈರುತ್ ನಗರದ ಬಂದರಿನಲ್ಲಿ ಸಂಭವಿಸಿರುವ ಭಾರೀ ಸ್ಪೋಟವು ಲೆಬನಾನ್‌ನಲ್ಲಿ ಮತ್ತೆ ಆಘಾತದ ತರಂಗಗಳನ್ನು ಎಬ್ಬಿಸಿವೆ. ಈ ಸ್ಪೋಟದಲ್ಲಿ ಕನಿಷ್ಠ ಹತ್ತು ಮಂದಿ ಸತ್ತಿದ್ದು, ನೂರಾರು ಜನ ಗಾಯಗೊಂಡಿದ್ದಾರೆ. ಇದಷ್ಟೇ ಅಲ್ಲದೆ ಹಲವಾರು ಮನೆಗಳು ಹಾನಿಗೊಳಗಾಗಿವೆ ಎಂದು ವರದಿಯಾಗಿದೆ.  ಆದರೆ, ಸ್ಪೋಟದ ರುವಾರಿ ಯಾರು? ಮತ್ತು ಈ ಸ್ಪೋಟಕ್ಕೆ ಕಾರಣ ಏನು? ಎಂಬ ಕುರಿತು ಈವರೆಗೆ ತಿಳಿದುಬಂದಿಲ್ಲ ಎಂದು ಲೆಬನಾನ್ ಸರ್ಕಾರದ ಅಧಿಕಾರಿಗಳು ಅಂತಾರಾಷ್ಟ್ರೀಯ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

  lebanon
  ಸ್ಫೋಟವಾಗಿರುವ ಸ್ಥಳ.


  ಸ್ಪೋಟದ ವಿಡಿಯೋ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ದೃಶ್ಯದಲ್ಲಿ ಸ್ಪೋಟ ಸಂಭವಿಸಿದ ತಕ್ಷಣ ಕಿತ್ತಳೆ ಬಣ್ಣದಲ್ಲಿ ಗೋಪುರ ಆಕಾರದಲ್ಲಿ ಹೊಗೆ ಆಕಾಶದ ಎತ್ತರಕ್ಕೆ ಹಾರಿದೆ. ಅಲ್ಲದೆ, ಶಬ್ಧದ ತೀವ್ರತೆ ದೊಡ್ಡ ತರಂಗಗಳನ್ನು ಸೃಷ್ಟಿಸಿದೆ. ಪರಿಣಾಮ ಬಂದರು ಪ್ರದೇಶದಲ್ಲಿದ್ದ ಗೋದಾಮುಗಳು ಕಿಟಕಿ ಗಾಜುಗಳು ಮತ್ತು ಬಾಗಿಲುಗಳು ಹಾನಿಗೊಳಗಾಗಿವೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
  Published by:MAshok Kumar
  First published: