• ಹೋಂ
 • »
 • ನ್ಯೂಸ್
 • »
 • ದೇಶ-ವಿದೇಶ
 • »
 • Nitish Kumar: ನಾನು ಪ್ರಧಾನಿ ಸ್ಥಾನದ ಆಕಾಂಕ್ಷಿಯಲ್ಲ ಅಂದ್ರು ನಿತೀಶ್ ಕುಮಾರ್! ಬಿಹಾರ ಸಿಎಂ ಮನದಲ್ಲಿ ಏನಿದೆ?

Nitish Kumar: ನಾನು ಪ್ರಧಾನಿ ಸ್ಥಾನದ ಆಕಾಂಕ್ಷಿಯಲ್ಲ ಅಂದ್ರು ನಿತೀಶ್ ಕುಮಾರ್! ಬಿಹಾರ ಸಿಎಂ ಮನದಲ್ಲಿ ಏನಿದೆ?

ಬಿಹಾರ ಸಿಎಂ ನಿತೀಶ್ ಕುಮಾರ್

ಬಿಹಾರ ಸಿಎಂ ನಿತೀಶ್ ಕುಮಾರ್

2024ರ ಲೋಕಸಭೆ ಚುನಾವಣೆಗೆ ಪ್ರತಿಪಕ್ಷಗಳನ್ನು ಒಟ್ಟಿಗೆ ಕೂಡಿಸುವುದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ನಡೆಸಿದ ಈ ಸಭೆಯ ಉದ್ದೇಶ ಆಗಿದೆ. ದೇಶದಲ್ಲಿ ಈಗಾಗಲೇ ಪ್ರತಿಪಕ್ಷಗಳು 2024ರ ಚುನಾವಣೆಗೆ ಯೋಜನೆ ರೂಪಿಸುತ್ತಿವೆ. ಆದರೆ ನಿತೀಶ್ ಕುಮಾರ್ ಇಂಥದ್ದೊಂದು ಹೇಳಿಕೆ ನೀಡಿದ್ದಾರೆ.

ಮುಂದೆ ಓದಿ ...
 • Share this:

ದೇಶದಲ್ಲಿ ಈಗಾಗಲೇ ಪ್ರತಿಪಕ್ಷಗಳು 2024ರ ಚುನಾವಣೆಗೆ ಯೋಜನೆ ರೂಪಿಸುತ್ತಿವೆ. ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮಂಗಳವಾರ ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷದ (Aam Admi Party) ಸಂಚಾಲಕ ಮತ್ತು ದೆಹಲಿ ಮುಖ್ಯಮಂತ್ರಿ (Delhi CM) ಅರವಿಂದ್ ಕೇಜ್ರಿವಾಲ್ ಅವರನ್ನು ಭೇಟಿಯಾದರು. 2024ರ ಲೋಕಸಭೆ ಚುನಾವಣೆಗೆ ಪ್ರತಿಪಕ್ಷಗಳನ್ನು ಒಟ್ಟಿಗೆ ಕೂಡಿಸುವುದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ನಡೆಸಿದ ಈ ಸಭೆಯ ಉದ್ದೇಶ ಆಗಿದೆ. ಉಭಯ ನಾಯಕರ ಸಭೆಯಲ್ಲಿ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಜನತಾ ದಳ ಯುನೈಟೆಡ್ (JDU) ನಾಯಕ ಸಂಜಯ್ ಝಾ ಸೇರಿದಂತೆ ಅನೇಕ ನಾಯಕರು ಸಭೆಯಲ್ಲಿ ಉಪಸ್ಥಿತರಿದ್ದರು.  


ಸೀತಾರಾಮ್ ಯೆಚೂರಿ ಅವರನ್ನು ಭೇಟಿ ಮಾಡಿದ ನಿತೀಶ್ ಕುಮಾರ್


ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌ ಭೇಟಿ ಮಾಡುವ ಮೊದಲು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಸಿಪಿಐ-ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಮತ್ತು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಸಿಪಿಐ) ಪ್ರಧಾನ ಕಾರ್ಯದರ್ಶಿ ಡಿ. ರಾಜಾ ಅವರನ್ನು ತಮ್ಮ ಪಕ್ಷದ ಕಚೇರಿಯಲ್ಲಿ ಭೇಟಿ ಮಾಡಿದ್ರು.


ನಾನು ಪ್ರಧಾನಿ ಹುದ್ದೆಯ ಆಕಾಂಕ್ಷಿಯಲ್ಲ - ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್


ಈ ವೇಳೆ ಮಾತನಾಡಿರುವ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು, ನಾನು ಪ್ರಧಾನಿ ಹುದ್ದೆಯ ಆಕಾಂಕ್ಷಿಯಲ್ಲ. ಅದನ್ನು ಬಯಸುವುದೂ ಇಲ್ಲ ಎಂದು ಹೇಳಿದ್ದಾರೆ. ಮಂಗಳವಾರ ಸಿಪಿಎಂ ನಾಯಕ ಸೀತಾರಾಮ್ ಯೆಚೂರಿ ಅವರನ್ನು ದೆಹಲಿಯ ತಮ್ಮ ಕಚೇರಿಯಲ್ಲಿ ಭೇಟಿ ಮಾಡಿದ್ದ ಸಿಎಂ ನಿತೀಶ್ ಕುಮಾರ್, ತಾವು ಪ್ರಧಾನಿ ಅಭ್ಯರ್ಥಿ ಎಂಬ ಬಗ್ಗೆ ಎದ್ದಿರುವ ಊಹಾಪೋಹಗಳನ್ನು ನಿರಾಕರಿಸಿದರು.


ಇದನ್ನೂ ಓದಿ: ಚೀನಾ ನಾಗರಿಕರ ಸ್ಥಿತಿ ನರಕ; ಕಂಡು ಕೇಳರಿಯದ ಭೂಕಂಪ


ನಾವೆಲ್ಲರೂ ಒಟ್ಟಾಗಿದ್ದೇವೆ. ಹೀಗಾಗಿ ನಾನು ಇಲ್ಲಿಗೆ ಬಂದಿದ್ದೇನೆ. ವಿವಿಧ ಪಕ್ಷಗಳು ಒಟ್ಟಾಗಿ ಸೇರಿದರೆ ಅದೊಂದು ದೊಡ್ಡ ಬದಲಾವಣೆಗೆ ಕಾರಣ ಆಗಲಿದೆ . ವಿವಿಧ ರಾಜ್ಯಗಳ ಎಡ ಪಕ್ಷಗಳು, ಪ್ರಾದೇಶಿಕ ಪಕ್ಷಗಳು ಮತ್ತು ಕಾಂಗ್ರೆಸ್ ಒಟ್ಟಾದರೆ ಅದೊಂದು ದೊಡ್ಡ ವಿಷಯ ಆಗಲಿದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ತಿಳಿಸಿದರು.


ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ್ದ ನಿತೀಶ್ ಕುಮಾರ್


ಇಂದು ಬೆಳಗ್ಗೆ ನಿತೀಶ್ ಕುಮಾರ್ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದರು. ಮುಂಬರುವ 2024 ರ ಲೋಕಸಭೆ ಚುನಾವಣೆಯ ಕಾರ್ಯತಂತ್ರ ಮತ್ತು ಸಮಾನ ಮನಸ್ಕ ಪಕ್ಷಗಳನ್ನು ಒಟ್ಟಿಗೆ ಸೇರಿಸುವುದು ಹೇಗೆ ಮತ್ತು ರಾಜ್ಯಗಳಲ್ಲಿ ಗೆಲುವು ಸಾಧಿಸುವುದು ಹೇಗೆ ಎಂಬ ಸಾಧ್ಯಾಸಾಧ್ಯತೆಯ ಬಗ್ಗೆ ಚರ್ಚೆ ನಡೆಸಿದರು.


ಅರವಿಂದ್ ಕೇಜ್ರಿವಾಲ್ ಟ್ವೀಟ್


ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ದೆಹಲಿ ಪ್ರವಾಸದ ವೇಳೆ ಕರ್ನಾಟಕದ ಮಾಜಿ ಸಿಎಂ ಹಾಗೂ ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರನ್ನೂ ಭೇಟಿ ಮಾಡಿದ್ದಾರೆ ಚರ್ಚಿಸಿದ್ದಾರೆ. ಈ ಸಭೆಯ ನಂತರ ಅರವಿಂದ್ ಕೇಜ್ರಿವಾಲ್ ಟ್ವೀಟ್ ಮಾಡಿ, ನನ್ನ ಮನೆಗೆ ಭೇಟಿ ನೀಡಿದ ನಿತೀಶ್ ಜಿ ಅವರಿಗೆ ತುಂಬಾ ಧನ್ಯವಾದಗಳು. ದೇಶಕ್ಕೆ ಸಂಬಂಧಪಟ್ಟ ಹಲವು ಗಂಭೀರ ವಿಷಯಗಳ ಬಗ್ಗೆ ಚರ್ಚಿಸಲಾಯಿತು. ಶಿಕ್ಷಣ, ಆರೋಗ್ಯ, ಆಪರೇಷನ್ ಕಮಲ, ಜನರಿಂದ ಚುನಾಯಿತ ಸರ್ಕಾರಗಳ ಪತನದ ಬಗ್ಗೆ ಹಾಗೂ ಶಾಸಕರನ್ನು ಬಹಿರಂಗವಾಗಿ ಖರೀದಿಸುವುದು, ಹೆಚ್ಚುತ್ತಿರುವ ಬಿಜೆಪಿ ಸರ್ಕಾರದ ಭ್ರಷ್ಟಾಚಾರ, ಹಣದುಬ್ಬರ, ನಿರುದ್ಯೋಗದ ಬಗ್ಗೆ ಚರ್ಚೆ ನಡೆಸಲಾಯಿತು ಎಂದು ಹೇಳಿದ್ದಾರೆ.


ಇದನ್ನೂ ಓದಿ: ಯೋಗಿ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದ್ದೇಕೆ ಸುಪ್ರೀಂಕೋರ್ಟ್?

top videos


  ನಿತೀಶ್ ಕುಮಾರ್ ಅವರು ಹರಿಯಾಣದ ಮಾಜಿ ಮುಖ್ಯಮಂತ್ರಿ ಮತ್ತು ಭಾರತೀಯ ರಾಷ್ಟ್ರೀಯ ಲೋಕದಳ (ಐಎನ್‌ಎಲ್‌ಡಿ) ಮುಖ್ಯಸ್ಥ ಓಂ ಪ್ರಕಾಶ್ ಚೌತಾಲಾ ಅವರನ್ನು ಮಧ್ಯಾಹ್ನ ಭೇಟಿಯಾಗಿದ್ದಾರೆ. 2024 ಕ್ಕೆ ಪ್ರತಿಪಕ್ಷಗಳ ಒಗ್ಗಟ್ಟು ಪ್ರದರ್ಶನಕ್ಕೆ ಕಾರ್ಯತಂತ್ರ ರೂಪಿಸುತ್ತಿವೆ. 2024 ರ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ವಿರುದ್ಧ ಐಕ್ಯ ಹೋರಾಟಕ್ಕಾಗಿ ಎಲ್ಲಾ ವಿರೋಧ ಪಕ್ಷಗಳನ್ನು ಒಗ್ಗೂಡಿಸಲು ಜೆಡಿಯು ನಾಯಕರು ಪ್ರಯತ್ನಿಸುತ್ತಿದ್ದಾರೆ.

  First published: