ಚುನಾವಣಾ ಆಯುಕ್ತ ಅಶೋಕ್ ಲವಾಸಾ ಅವರ ಪತ್ನಿಗೆ ನೊಟೀಸ್ ಜಾರಿ ಮಾಡಿದ ಆದಾಯ ತೆರಿಗೆ ಇಲಾಖೆ

ಮೂಲಗಳ ಪ್ರಕಾರ ಚುನಾವಣಾ ಆಯುಕ್ತ ಅಶೋಕ್ ಲವಾಸಾ ಭಾರತ ಸರ್ಕಾರದ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಅವರ ಪತ್ನಿ ನೋವೆಲ್ ಸಿಂಘಾಲ್ ಅನೇಕ ಕಂಪೆನಿಗಳಲ್ಲಿ ಸ್ವತಂತ್ರ್ಯ ನಿರ್ದೇಶಕರಾಗಿದ್ದಾರೆ. ಈ ಮುಂಚೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಉದ್ಯೋಗಿ ಆಗಿದ್ದ ಅವರು ನಂತರ ತಮ್ಮ ಕೆಲಸಕ್ಕೆ ರಾಜೀನಾಮೆ ನೀಡಿದ್ದರು.

MAshok Kumar | news18-kannada
Updated:September 23, 2019, 7:00 PM IST
ಚುನಾವಣಾ ಆಯುಕ್ತ ಅಶೋಕ್ ಲವಾಸಾ ಅವರ ಪತ್ನಿಗೆ ನೊಟೀಸ್ ಜಾರಿ ಮಾಡಿದ ಆದಾಯ ತೆರಿಗೆ ಇಲಾಖೆ
ಪ್ರಾತಿನಿಧಿಕ ಚಿತ್ರ.
  • Share this:
ನವ ದೆಹಲಿ (ಸೆಪ್ಟೆಂಬರ್.23); ಅನೇಕ ಕಂಪೆನಿಗಳಲ್ಲಿ ಸ್ವತಂತ್ರ್ಯ ನಿರ್ದೇಶಕರಾಗಿರುವ ಭಾರತೀಯ ಚುನಾವಣಾ ಆಯುಕ್ತ ಅಶೋಕ್ ಲವಾಸಾ ಅವರ ಪತ್ನಿ ನೋವೆಲ್ ಸಿಂಘಾಲ್ ಅವರಿಗೆ ಆದಾಯ ತೆರಿಗೆ ಇಲಾಖೆ ಇಂದು ನೊಟೀಸ್ ಜಾರಿ ಮಾಡಿದೆ.

ಮೂಲಗಳ ಪ್ರಕಾರ ಚುನಾವಣಾ ಆಯುಕ್ತ ಅಶೋಕ್ ಲವಾಸಾ ಭಾರತ ಸರ್ಕಾರದ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಅವರ ಪತ್ನಿ ನೋವೆಲ್ ಸಿಂಘಾಲ್ ಅನೇಕ ಕಂಪೆನಿಗಳಲ್ಲಿ ಸ್ವತಂತ್ರ್ಯ ನಿರ್ದೇಶಕರಾಗಿದ್ದಾರೆ. ಈ ಮುಂಚೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಉದ್ಯೋಗಿ ಆಗಿದ್ದ ಅವರು ನಂತರ ತಮ್ಮ ಕೆಲಸಕ್ಕೆ ರಾಜೀನಾಮೆ ನೀಡಿದ್ದರು.

ಕಳೆದ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಮಾದರಿ ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿದ ಆರೋಪದ ಮೇಲೆ ಅಮಿತ್ ಶಾ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಚುನಾವಣಾ ಆಯೋಗದ ಎದುರು 11 ಪ್ರಕರಣ ದಾಖಲಾಗಿತ್ತು. ಆದರೆ, ಈ ಎಲ್ಲಾ ಪ್ರಕರಣಗಳಲ್ಲಿ ಅವರಿಗೆ ಚುನಾವಣಾ ಆಯೋಗ ಕ್ಲೀನ್ ಚಿಟ್ ನೀಡಿದ್ದರು.

ಈ ಕುರಿತು ಅಸಮಾಧಾನ ಹೊರಹಾಕಿದ್ದ ಅಶೋಕ್ ಲವಾಸಾ “ನನ್ನ ಭಿನ್ನಾಭಿಪ್ರಾಯವನ್ನು ದಾಖಲಿಸದೆ ಇರುವುದರಿಂದ ಚುನಾವಣಾ ಆಯೋಗದ ಸಭೆಯಲ್ಲಿ ಭಾಗವಹಿಸುವುದು ಅರ್ಥಹೀನ” ಎಂದು ಪತ್ರ ಬರೆಯುವ ಮೂಲಕ ತನ್ನ ಪ್ರತಿರೋಧವನ್ನು ಒಡ್ಡಿದ್ದರು. ಅಲ್ಲದೆ, ಪಾರದರ್ಶಕತೆಯ ಕೊರತೆಯ ಕಾರಣದಿಂದಾಗಿ ಚುನಾವಣಾ ನೀತಿ ಸಂಹಿತೆ ಸಂಬಂಧಿತ ದೂರುಗಳ ಕುರಿತ ಸಭೆಯಿಂದಲೂ ಅವರು ದೂರ ಉಳಿದಿದ್ದರು. 

ಈ ಹಿನ್ನೆಲೆಯಲ್ಲಿ ಇದೀಗ ಅವರ ಪತ್ನಿಯ ವಿರುದ್ಧ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ನೊಟೀಸ್ ಜಾರಿ ಮಾಡಿರುವುದು ಸಹ ಹತ್ತಾರು ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಇದನ್ನೂ ಓದಿ : ದೇಶದ ಪ್ರಜೆಗಳಿಗೆ ಶೀಘ್ರದಲ್ಲೆ ವಿವಿದೋದ್ದೇಶ ಗುರುತಿನ ಚೀಟಿ, 2021ರ ವೇಳೆಗೆ ಮೊಬೈಲ್​ನಲ್ಲೇ ಜನಗಣತಿ; ಗೃಹ ಸಚಿವ ಅಮಿತ್ ಶಾ ಘೋಷಣೆ!

First published:September 23, 2019
ಮತ್ತಷ್ಟು ಓದಿರಿ
ಮುಂದಿನ ಸುದ್ದಿ