Crime News| ಲೈಂಗಿಕ ದೌರ್ಜನ್ಯ ಆರೋಪದ ಅಡಿಯಲ್ಲಿ ಕೋಯಮತ್ತೂರಿನ ಐಎಎಫ್​ ಅಧಿಕಾರಿ ಬಂಧನ!

ಕೊಯಮತ್ತೂರು ನಗರದ ಗಾಂಧಿಪುರಂ ಪೊಲೀಸ್ ಠಾಣೆಯ ಮಹಿಳಾ ತಂಡವು ಪ್ರಾಥಮಿಕ ತನಿಖೆಯನ್ನು ನಡೆಸಿದೆ. ಜಿಲ್ಲಾ ನ್ಯಾಯಾಧೀಶರಿಗೆ ಶರಣಾಗಿದ್ದ ಬಂಧಿತ ಅಧಿಕಾರಿ ಛತ್ತೀಸ್‌ಗಢ ಮೂಲದವರಾಗಿದ್ದು, ಆರೋಪಿಯನ್ನು ಉಡುಮಲೈಪೇಟೆ ಜೈಲಿಗೆ ಕಳುಹಿಸಲಾಗಿದೆ.

ಪ್ರಾತಿನಿಧಿಕ ಚಿತ್ರ.

ಪ್ರಾತಿನಿಧಿಕ ಚಿತ್ರ.

  • Share this:
    ಕೋಯಮತ್ತೂರು; ಭಾರತೀಯ ವಾಯುಪಡೆಯ (Indian Airforce) 26 ವರ್ಷದ ಫ್ಲೈಟ್ ಲೆಫ್ಟಿನೆಂಟ್‌ ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು 27 ವರ್ಷದ ಮಹಿಳಾ ಅಧಿಕಾರಿಯೊಬ್ಬರು ದೂರು ನೀಡಿದ ಬೆನ್ನಿಗೆ ಐಎಎಫ್ (IAF) ಅಧಿಕಾರಿಯನ್ನು ಪೊಲೀಸರು ತಮಿಳುನಾಡಿನ (Tamilnadu) ಕೊಯಮತ್ತೂರಿನಲ್ಲಿ (Coimbatore) ಬಂಧಿಸಿದ್ದಾರೆ. ಎರಡು ವಾರಗಳ ಹಿಂದೆ ತಾನು ನೀಡಿದ ದೂರಿನ ಬಗ್ಗೆ ಐಎಎಫ್ ತೆಗೆದುಕೊಂಡ ಕ್ರಮದಿಂದ ತೃಪ್ತಿ ಹೊಂದಿರದ ಕಾರಣ ತಾನು ಪೋಲಿಸ್‌ ಬಳಿ ಹೋಗಬೇಕಾಯಿತು ಎಂದು ಸಂತ್ರಸ್ತೆ ಹೇಳಿದ್ದಾರೆ. ಕೊಯಮತ್ತೂರಿನ ರೆಡ್‌ಫೀಲ್ಡ್ಸ್‌ನಲ್ಲಿರುವ ವಾಯುಪಡೆ ಆಡಳಿತದ ಏರ್ ಫೋರ್ಸ್ ಕಾಲೇಜಿನಲ್ಲಿ ತನ್ನ ಕೊಠಡಿಯೊಳಗೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ಹೇಳಿದ್ದಾರೆ. ಆಕೆ ಏರ್ ಫೋರ್ಸ್ ತರಬೇತಿಗಾಗಿ ಹೋಗಿದ್ದರು.

    ಸಂತ್ರಸ್ತೆಯ ಹೇಳಿಕೆಯ ಪ್ರಕಾರ, ತರಬೇತಿ ಸಮಯದಲ್ಲಿ ಆಟವಾಡುತ್ತಿದ್ದಾಗ ಗಾಯ ಮಾಡಿಕೊಂಡಿದ್ದರು, ತಮ್ಮ ಕೋಣೆಯಲ್ಲಿ ಮಲಗುವ ಮುನ್ನ ಕೆಲವು ಔಷಧಿಗಳನ್ನು ತೆಗೆದುಕೊಂಡಿದ್ದರು. ನಿದ್ದೆಯಿಂದ ಎಚ್ಚೆತ್ತ ಬಳಿಕ ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ತಿಳಿಯಿತು ಎಂದಿದ್ದಾರೆ.

    ವಾಯುಪಡೆಯು ತನ್ನ ದೂರನ್ನು ನಿರ್ವಹಿಸಿದ ಕ್ರಮದ ಬಗ್ಗೆ ಅತೃಪ್ತಿ ಇದೆ ಎಂದು ಮಹಿಳಾ ಅಧಿಕಾರಿ ತಿಳಿಸಿದ ಬಳಿಕ ನಾವು ಈ ಪ್ರಕರಣವನ್ನು ಕೈಗೆತ್ತಿಕೊಂಡಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

    ಕೊಯಮತ್ತೂರು ನಗರದ ಗಾಂಧಿಪುರಂ ಪೊಲೀಸ್ ಠಾಣೆಯ ಮಹಿಳಾ ತಂಡವು ಪ್ರಾಥಮಿಕ ತನಿಖೆಯನ್ನು ನಡೆಸಿದೆ. ಜಿಲ್ಲಾ ನ್ಯಾಯಾಧೀಶರಿಗೆ ಶರಣಾಗಿದ್ದ ಬಂಧಿತ ಅಧಿಕಾರಿ ಛತ್ತೀಸ್‌ಗಢ ಮೂಲದವರಾಗಿದ್ದು, ಆರೋಪಿಯನ್ನು ಉಡುಮಲೈಪೇಟೆ ಜೈಲಿಗೆ ಕಳುಹಿಸಲಾಗಿದೆ.

    ಸಶಸ್ತ್ರ ಪಡೆಗಳ ಸಿಬ್ಬಂದಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ತನಿಖೆ ನಡೆಸುವ ಅಧಿಕಾರ ಪೊಲೀಸರಿಗೆ ಇಲ್ಲ ಎಂದು ಆರೋಪಿ ಪರ ವಕೀಲರು ತಿಳಿಸಿದ್ದಾರೆ. ಇಂತಹ ಪ್ರಕರಣಗಳನ್ನು ರಕ್ಷಣಾ ನ್ಯಾಯಾಲಯದಲ್ಲಿ ಮಾತ್ರ ವಿಚಾರಣೆ ನಡೆಸಬಹುದು ಎಂದು ವಕೀಲರು ಹೇಳಿದ್ದಾರೆ.

    ಇದನ್ನೂ ಓದಿ: Crime News| ಮಹಾರಾಷ್ಟ್ರದಲ್ಲಿ ನಿಧಿಗಾಗಿ ಹೆಂಡತಿಯನ್ನೇ ನರಬಲಿ ನೀಡಲು ಮುಂದಾಗಿದ್ದ ಆಸಾಮಿ ಇದೀಗ ಪೊಲೀಸರ ಅತಿಥಿ!

    ಇತ್ತಿಚೆಗಷ್ಟೇ ಮಧ್ಯಪ್ರದೇಶದ ನೀಮುಚ್ ಜಿಲ್ಲೆಯಲ್ಲಿ ಮೂವರು ಕಾಮುಕರು ತನ್ನ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಮಹಿಳಾ ಪೊಲೀಸ್ ಕಾನ್‌ಸ್ಟೇಬಲ್ ಆರೋಪಿಸಿದ್ದು, ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

    ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ಲಾಕ್​​ಡೌನ್​ ನಿಯಮಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಿ ಸೋಂಕಿನಿಂದ ತಮ್ಮನ್ನು ತಾವು ಕಾಪಾಡಿಕೊಳ್ಳುವ ಪ್ರತಿಜ್ಞೆ ತೆಗೆದುಕೊಳ್ಳಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹಬ್ಬದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು.
    Published by:MAshok Kumar
    First published: