ICMR Recruitment 2020: 80 ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ; ಪದವಿ ಪೂರೈಸಿದವರಿಗೆ ಅವಕಾಶ

ಪದವಿ ವಿದ್ಯಾರ್ಹತೆಯನ್ನು ಪಡೆದಿರುವ ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಹಾಕಬಹುದು.

JOB

JOB

  • Share this:
    ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ಐಸಿಎಂಆರ್) ಸಹಾಯಕ ಹುದ್ದೆಗಳನ್ನು(ಗ್ರೂಪ್​ ಬಿ) ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಸುಮಾರು 80 ಸಹಾಯಕ ಹುದ್ದೆಗಳು ಖಾಲಿ ಇದ್ದು, ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಡಿಸೆಂಬರ್ 3, 2020ರೊಳಗೆ ಅರ್ಜಿಯನ್ನು ಸಲ್ಲಿಸಲು ತಿಳಿಸಿದೆ.

    ವಿದ್ಯಾರ್ಹತೆ:

    ಪದವಿ ವಿದ್ಯಾರ್ಹತೆಯನ್ನು ಪಡೆದಿರುವ ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಹಾಕಬಹುದು.

    ವಯೋಮಿತಿ:

    ಡಿಸೆಂಬರ್ 3,2020ರ ಅನ್ವಯ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅರ್ಹರು.

    ವೇತನ:

    ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ನಲ್ಲಿ ಖಾಲಿ ಇರುವ ಸಹಾಯಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 35,400/- ರಿಂದ 1,12,400/-ರೂ ವೇತನವನ್ನು ನೀಡಲಾಗುವುದು.

    ಆಯ್ಕೆ ಪ್ರಕ್ರಿಯೆ:

    ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

    ಅರ್ಜಿ ಶುಲ್ಕ:

    ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದೆ. ಸಾಮಾನ್ಯ/ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳು 1,500/-ರೂ ಮತ್ತು ಪ.ಜಾ/ಪ.ಪಂ/ಓಬಿಸಿ ಅಭ್ಯರ್ಥಿಗಳು 1,200/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕು.

    ಅರ್ಜಿ ಸಲ್ಲಿಸುವುದು ಹೇಗೆ?:

    ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://www.icmr.gov.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ  ಮಾಹಿತಿಯನ್ನು ಓದಿ  ನಂತರ ಭರ್ತಿ ಮಾಡಬೇಕು.  ಡಿಸೆಂಬರ್ 3,2020 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.
    Published by:Harshith AS
    First published: