HR RameshHR Ramesh
|
news18-kannada Updated:March 18, 2020, 3:31 PM IST
ಓಮರ್ ಅಬ್ದುಲ್ಲಾ
ನವದೆಹಲಿ: ಕಳೆದ ವರ್ಷ ಆಗಸ್ಟ್ನಲ್ಲಿ 370ನೇ ವಿಧಿಯನ್ನು ರದ್ದುಪಡಿಸಿದ ಕ್ಷಣದಿಂದ ಬಂಧನಕ್ಕೊಳಗಾಗಿದ್ದಮಾಜಿ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಅವರನ್ನು ಬಿಡುಗಡೆ ಮಾಡುವುದಾದರೆ ಮುಂದಿನ ವಾರದೊಳಗೆ ಮಾಹಿತಿ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮತ್ತು ಜಮ್ಮು ಮತ್ತು ಕಾಶ್ಮೀರ ಆಡಳಿತಕ್ಕೆ ಸುಪ್ರೀಂಕೋರ್ಟ್ ಬುಧವಾರ ಸೂಚಿಸಿದೆ.
ನ್ಯಾಯಮೂರ್ತಿಗಳಾದ ಅರುಣ್ ಮಿಶ್ರಾ ಮತ್ತು ಎಂ.ಆರ್. ಶಾ ಅವರಿದ್ದ ನ್ಯಾಯಪೀಠವು ಕೇಂದ್ರದ ಪರ ಹಾಜರಾದ ವಕೀಲರಿಗೆ ಬಿಡುಗಡೆ ಮಾಡುವುದಿಲ್ಲ ಎಂದಾದರೆ ಅಬ್ದುಲ್ಲಾ ಅವರ ಸಹೋದರಿ ಸಾರಾ ಅಬ್ದುಲ್ಲಾ ಪೈಲಟ್ ಅವರು ಸಲ್ಲಿಸಿರುವ ಮನವಿಯನ್ನು ವಿಚಾರಣೆ ನಡೆಸಲಾಗುವುದು ಎಂದು ತಿಳಿಸಿದೆ.
ನೀವು ಅವರನ್ನು ಬಿಡುಗಡೆ ಮಾಡುವ ಬಗ್ಗೆ ಯೋಚಿಸಿದ್ದರೆ, ಶೀಘ್ರದಲ್ಲೇ ಅವರನ್ನು ಬಿಡುಗಡೆ ಮಾಡಿ. ಇಲ್ಲದಿದ್ದರೆ ಮನವಿಯ ಅರ್ಹತೆಯ ಮೇರೆಗೆ ವಿಚಾರಣೆ ನಡೆಸುತ್ತೇವೆ ಎಂದು ನ್ಯಾಯಪೀಠ ಹೇಳಿದೆ.
ಈ ವಿಷಯದಲ್ಲಿ ಹಾಜರಾಗಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಮತ್ತೊಂದು ನ್ಯಾಯಾಲಯದಲ್ಲಿ ವಾದ ಮಂಡಿಸುತ್ತಿದ್ದಾರೆ ಎಂದು ಕೇಂದ್ರದ ಪರ ವಕೀಲರು ಮತ್ತು ಜಮ್ಮು-ಕಾಶ್ಮೀರದ ಆಡಳಿತವು ನ್ಯಾಯಾಲಯಕ್ಕೆ ತಿಳಿಸಿದ ನಂತರ ನ್ಯಾಯಪೀಠ ಹೀಗೆ ಹೇಳಿದೆ.
ಅರ್ಜಿದಾರರ ಪರ ಹಾಜರಾದ ಹಿರಿಯ ವಕೀಲ ಕಪಿಲ್ ಸಿಬಾಲ್, ಈ ವಿಷಯದ ವಿಚಾರಣೆ ನಡೆಸಲು ನ್ಯಾಯಾಲಯವು ಬೇಗನೆ ದಿನಾಂಕ ನಿಗದಿಪಡಿಸಬೇಕು ಎಂದು ಕೇಳಿಕೊಂಡರು.
ಇದಕ್ಕೆ ನ್ಯಾಯಪೀಠ ಸುಪ್ರೀಂಕೋರ್ಟ್ನಲ್ಲಿ ಕೇವಲ ಆರು ಪೀಠಗಳು ಮಾತ್ರ ಕಾರ್ಯನಿರ್ವಹಿಸುತ್ತಿವೆ ಮತ್ತು ಈ ಕೇಸ್ ಗೆ ಮುಂದಿನ ದಿನ ಯಾವಾಗ ಬರುತ್ತದೆ ಎಂದು ಹೇಳಲಾಗುವುದಿಲ್ಲ ಎಂದಿದೆ. "ಬಹುಶಃ ಮುಂದಿನ ವಾರ ನಾವು ಇದರ ವಿಚಾರಣೆ ನಡೆಸುತ್ತೇವೆ," ಎಂದು ನ್ಯಾಯಪೀಠ ಹೇಳಿದೆ.
ಇದನ್ನು ಓದಿ: ವರ್ಷದಿಂದ ಕಾದರೂ ಭೇಟಿಗೆ ಅವಕಾಶ ಕೊಟ್ಟಿಲ್ಲ, ಈಗ ನೀವೇ ಬರುತ್ತೀದ್ದೀರಿ; ದಿಗ್ವಿಜಯ್ ಸಿಂಗ್ಗೆ ರೆಬೆಲ್ ಶಾಸಕರ ಟೀಕೆಓಮರ್ ಅಬ್ದುಲ್ಲಾ ಮತ್ತು ಇನ್ನಿತರ ನಾಯಕರು, ಪೀಪಲ್ಸ್ ಡೆಮಾಕ್ರೆಟಿಕ್ ಪಾರ್ಟಿ (ಪಿಡಿಪಿ) ಅಧ್ಯಕ್ಷ ಮೆಹಬೂಬಾ ಮುಫ್ತಿ ಇನ್ನೂ ಮೊದಲಾದವರನ್ನು ಕಳೆದ ವರ್ಷ ಆಗಸ್ಟ್ 5ರಿಂದ ಬಂಧನಲ್ಲಿರಿಸಲಾಗಿತ್ತು. ಸಾರ್ವಜನಿಕ ರಕ್ಷಣಾ ಕಾಯ್ದೆ(ಪಿಎಸ್ಎ)ಯಡಿ ಸೆಪ್ಟೆಂಬರ್ 15ರಂದು ಪ್ರಕರಣ ದಾಖಲಿಸಲಾಗಿತ್ತು.
ವರದಿ: ಸಂಧ್ಯಾ ಎಂ
First published:
March 18, 2020, 3:31 PM IST