HOME » NEWS » National-international » IISC RECRUITMENT 2020 PROJECT LEAD AND DESIGNER POSTS HG

IISc Recruitment 2020: ಪ್ರಾಜೆಕ್ಟ್ ಲೀಡ್ ಮತ್ತು ಡಿಸೈನರ್ ಹುದ್ದೆಗಳಿಗೆ ಅರ್ಜಿ ಆಹ್ವಾನ: ಎಂ.ಟೆಕ್​ ವಿದ್ಯಾರ್ಹತೆ ಪಡೆದವರಿಗೆ ಅವಕಾಶ

ವಯೋಮಿತಿ: ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

news18-kannada
Updated:December 16, 2020, 8:44 PM IST
IISc Recruitment 2020: ಪ್ರಾಜೆಕ್ಟ್ ಲೀಡ್ ಮತ್ತು ಡಿಸೈನರ್ ಹುದ್ದೆಗಳಿಗೆ ಅರ್ಜಿ ಆಹ್ವಾನ: ಎಂ.ಟೆಕ್​ ವಿದ್ಯಾರ್ಹತೆ ಪಡೆದವರಿಗೆ ಅವಕಾಶ
jobs
  • Share this:
ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ  ಖಾಲಿ ಇರುವ ಪ್ರಾಜೆಕ್ಟ್ ಲೀಡ್ ಮತ್ತು ಡಿಸೈನರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿ ತಿಳಿಸಿದ್ದು, ಡಿಸೆಂಬರ್ 21, 2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ವಿದ್ಯಾರ್ಹತೆ: ಎಂ.ಇ/ಎಂ.ಟೆಕ್, ಪಿಹೆಚ್,ಡಿ ಮತ್ತು ಬಿ.ಇ/ಬಿ.ಟೆಕ್ ವಿದ್ಯಾರ್ಹತೆಯನ್ನು ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ

ವಯೋಮಿತಿ: ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವೇತನ: ಪ್ರಾಜೆಕ್ಟ್ ಲೀಡ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 87,000 ರಿಂದ 1,86,000ರೂ ವೇತನ ಸಿಗಲಿದೆ. ಡಿಸೈನರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 38,440 ರೂ.ನಿಂದ 96,720 ರೂ. ವೇತನ ಸಿಗಲಿದೆ.

ಆಯ್ಕೆ ಪ್ರಕ್ರಿಯೆ: ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವುದು ಹೇಗೆ?: ಆಸಕ್ತ ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://www.iisc.ac.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯಲ್ಲಿ ಓದಿ ನಂತರ ಮಾಹಿತಿಯನ್ನು ಭರ್ತಿ ಮಾಡಬೇಕು. ನಂತರ office.iken@iisc.ac.in ವಿಳಾಸಕ್ಕೆ ಮೇಲ್ ಮಾಡುವ ಮೂಲಕ ಅರ್ಜಿ ಸಲ್ಲಿಸಬೇಕು.

ಡಿಸೆಂಬರ್ 21,2020ರೊಳಗೆ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕವಾಗಿದೆ.
First published: December 16, 2020, 8:44 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories