ನವ ದೆಹಲಿ (ಜೂನ್ 03); ಕಳೆದ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಅಕ್ರಮ ಎಸಗಿರುವ ಆರೋಪದ ಮೇಲೆ ಸುಪ್ರೀಂ ಕೋರ್ಟ್ ಇಂದು ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ನೊಟೀಸ್ ಜಾರಿ ಮಾಡಿದೆ.
ಕಳೆದ ಚುನಾವಣೆಯಲ್ಲಿ ಹಾಸನದಿಂದ ಜೆಡಿಎಸ್ ಚಿಹ್ನೆಯಲ್ಲಿ ಸ್ಪರ್ಧಿಸಿದ್ದ ಪ್ರಜ್ವಲ್ ರೇವಣ್ಣ ಗೆಲುವು ಸಾಧಿಸಿದ್ದರು. ಆದರೆ, ಚುನಾವಣಾ ಅಫಿಡವಿಟ್ನಲ್ಲಿ ಅವರು ಸುಳ್ಳು ಪ್ರಮಾಣ ಪತ್ರ ನೀಡಿದ್ದಾರೆ. ಹೀಗಾಗಿ ಅವರನ್ನು ಸಂಸದ ಸ್ಥಾನದಿಂದ ವಜಾ ಮಾಡಬೇಕು ಎಂದು ಆರೋಪಿಸಿ ಪ್ರತಿಸ್ಪರ್ಧಿ ಎ.ಮಂಜು ಹೈಕೋರ್ಟ್ ಮೊರೆ ಹೋಗಿದ್ದರು.
ಆದರೆ, ಹೈಕೊರ್ಟ್ ಎ.ಮಂಜು ಅವರ ಅರ್ಜಿಯನ್ನು ವಜಾ ಮಾಡಿತ್ತು. ಹೀಗಾಗಿ ಮಂಜು ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಇಂದು ಅವರು ಸಲ್ಲಿಸಿದ್ದ ಅರ್ಜಿಯನ್ನು ಪರಿಶೀಲಿಸಿರುವ ಸುಪ್ರೀಂ ಕೋರ್ಟ್ ಈ ಪ್ರಕರಣದ ವಿಚಾರಣೆಯನ್ನು ಕೈಗೆತ್ತಿಗೊಳ್ಳಲು ಸಮ್ಮತಿ ಸೂಚಿಸಿದೆ. ಅಲ್ಲದೆ, ಅರ್ಜಿ ಸಂಬಂಧ ಪ್ರತಿಕ್ರಿಯಿಸಲು ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ನೋಟಿಸ್ ಜಾರಿ ಮಾಡಿದೆ.
ಇದನ್ನೂ ಓದಿ : Karnataka Coronavirus: ಕರ್ನಾಟಕದಲ್ಲಿ ಇಂದು 1 ಸಾವು, 267 ಕೊರೋನಾ ಕೇಸ್; 4 ಸಾವಿರದ ಗಡಿ ದಾಟಿದ ಸೋಂಕಿತರ ಸಂಖ್ಯೆ
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ