ಪರೀಕ್ಷಾ ಪೇ ಚರ್ಚಾದಲ್ಲಿ ಇದೇ ಮೊದಲ ಬಾರಿಗೆ 50 ದಿವ್ಯಾಂಗ ವಿದ್ಯಾರ್ಥಿಗಳು ಭಾಗಿ

ಒಟ್ಟು 2 ಸಾವಿರ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. 1,050 ವಿದ್ಯಾರ್ಥಿಗಳು ಪ್ರಬಂಧ ಸ್ಪರ್ಧೆ ಮೂಲಕ ಆಯ್ಕೆಯಾಗಿದ್ದಾರೆ. ಸಂವಾದದ ವೇಳೆ, ಪ್ರಧಾನಿ ಮೋದಿಗೆ ಪ್ರಶ್ನೆ ಕೇಳುವ ವಿದ್ಯಾರ್ಥಿಗಳ ಪಟ್ಟಿಯನ್ನು ಈಗಾಗಲೇ ಸಿದ್ದಪಡಿಸಲಾಗಿದೆ.

Latha CG | news18-kannada
Updated:January 19, 2020, 9:53 AM IST
ಪರೀಕ್ಷಾ ಪೇ ಚರ್ಚಾದಲ್ಲಿ ಇದೇ ಮೊದಲ ಬಾರಿಗೆ 50 ದಿವ್ಯಾಂಗ ವಿದ್ಯಾರ್ಥಿಗಳು ಭಾಗಿ
ನರೇಂದ್ರ ಮೋದಿ
  • Share this:
ನವದೆಹಲಿ(ಜ.19): ನಾಳೆ ನಡೆಯಲಿರುವ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮದಲ್ಲಿ ಇದೇ  ಮೊದಲ ಬಾರಿಗೆ ದೇಶದ ವಿವಿಧ ಶಾಲೆಗಳ 50 ದಿವ್ಯಾಂಗ ವಿದ್ಯಾರ್ಥಿಗಳು ಪ್ರಧಾನಿ ನರೇಂದ್ರ ಮೋದಿ ಜೊತೆ ಸಂವಾದ ನಡೆಸಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಷ್ಟ್ರ ರಾಜಧಾನಿ ನವದೆಹಲಿಯ ಟಾಕತೋರಾ ಸ್ಟೇಡಿಯಂನಲ್ಲಿ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮ ನಡೆಯಲಿದೆ. ಪರೀಕ್ಷಾ ಒತ್ತಡದಿಂದ ಹೊರಬರುವ ಬಗ್ಗೆ ಪ್ರಧಾನಿ ಮೋದಿ ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸಲಿದ್ದಾರೆ. ಇದು ಕಾರ್ಯಕ್ರಮದ ಮೂರನೇ ಆವೃತ್ತಿಯಾಗಿದೆ.

ಇಂದಿನಿಂದ 6 ದಿನಗಳ ಕಾಲ ಸಿಎಂ ಬಿ.ಎಸ್.ಯಡಿಯೂರಪ್ಪ ದಾವೋಸ್ ಪ್ರವಾಸ; ವಿಶ್ವ ಆರ್ಥಿಕ ಸಮಾವೇಶದಲ್ಲಿ ಭಾಗಿ

ಇದೇ ಮೊದಲ ಬಾರಿಗೆ 50 ದಿವ್ಯಾಂಗ ವಿದ್ಯಾರ್ಥಿಗಳು ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದು, ಪ್ರಧಾನಿ ಮೋದಿ ಜೊತೆ ಸಂವಾದ ನಡೆಸಲಿದ್ಧಾರೆ. ವಿವಿಧ ರಾಜ್ಯಗಳ ವಿದ್ಯಾರ್ಥಿಗಳಿಗೆ ಈ ಅವಕಾಶ ಸಿಕ್ಕಿದೆ ಎಂದು ಮಾನವ ಸಂಪನ್ಮೂಲ ಇಲಾಖೆ ಸಚಿವಾಲಯದ ಜಂಟಿ ನಿರ್ದೇಶಕಿ ಆರ್​ಸಿ ಮೀನಾ ತಿಳಿಸಿದ್ದಾರೆ.

'ಪರೀಕ್ಷಾ ಒತ್ತಡವನ್ನು ನಿಭಾಯಿಸು' ಎಂಬ ಪರಿಕಲ್ಪನೆಯಲ್ಲಿ ಚಿತ್ರಕಲೆ ಸ್ಪರ್ಧೆಯನ್ನು ಏರ್ಪಡಿಸಿ, ವಿಶೇಷ ಚೇತನ ಮಕ್ಕಳನ್ನು ಸಂವಾದಕ್ಕೆ ಆಯ್ಕೆ ಮಾಡಲಾಗಿದೆ. ಅತ್ಯುತ್ತಮ ಚಿತ್ರಕಲೆಗಳನ್ನು ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮದ ವೇಳೆ ಪ್ರದರ್ಶನಕ್ಕಿಡಲಾಗುತ್ತದೆ.

ಒಟ್ಟು 2 ಸಾವಿರ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. 1,050 ವಿದ್ಯಾರ್ಥಿಗಳು ಪ್ರಬಂಧ ಸ್ಪರ್ಧೆ ಮೂಲಕ ಆಯ್ಕೆಯಾಗಿದ್ದಾರೆ. ಸಂವಾದದ ವೇಳೆ, ಪ್ರಧಾನಿ ಮೋದಿಗೆ ಪ್ರಶ್ನೆ ಕೇಳುವ ವಿದ್ಯಾರ್ಥಿಗಳ ಪಟ್ಟಿಯನ್ನು ಈಗಾಗಲೇ ಸಿದ್ದಪಡಿಸಲಾಗಿದೆ.

ದೆಹಲಿ ವಿಧಾನಸಭೆ ಚುನಾವಣಾ ಕಣದಲ್ಲಿ ಮೂರು ಪಕ್ಷಗಳದ್ದು ಮೂರು ರೀತಿಯ ಪರಿಸ್ಥಿತಿ!ಕಳೆದ ವರ್ಷ 1.4 ಲಕ್ಷ ವಿದ್ಯಾರ್ಥಿಗಳು ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಬಂಧ ಬರೆದಿದ್ದರು. ಈ ಬಾರಿ 2.6 ಲಕ್ಷ ವಿದ್ಯಾರ್ಥಿಗಳು ಪ್ರಬಂಧ ಬರೆದಿದ್ದಾರೆ. ಈ ಬಾರಿಯ ಕಾರ್ಯಕ್ರಮ ಜನವರಿ 16ರಂದೇ ನಡೆಯಬೇಕಿತ್ತು. ಆದರೆ ದೇಶದೆಲ್ಲೆಡೆ ಹಬ್ಬಗಳ ಆಚರಣೆ ಇದ್ದ ಕಾರಣ ನಾಳೆ ಆಯೋಜನೆ ಮಾಡಲಾಗಿದೆ.

 
First published: January 19, 2020, 9:22 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading