ದೆಹಲಿ ಹಿಂಸಾಚಾರ; ಮಧ್ಯರಾತ್ರಿ ವಿಚಾರಣೆ ನಡೆಸಿ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡಲು ಸೂಚಿಸಿದ ನ್ಯಾಯಾಲಯ

ಗಾಯಗೊಂಡವರ ಬಗ್ಗೆ ಮಾಹಿತಿ ಮತ್ತು ಅವರಿಗೆ ನೀಡಲಾಗುವ ಚಿಕಿತ್ಸೆಯನ್ನೂ ಒಳಗೊಂಡಂತೆ ಅನುಸರಣಾ ವರದಿಯನ್ನು ನ್ಯಾಯಪೀಠಕ್ಕೆ ಸಲ್ಲಿಸುವಂತೆಯೂ ಪೊಲೀಸರಿಗೆ ಸೂಚನೆ ನೀಡಲಾಗಿದೆ. ಮುಂದಿನ ವಿಚಾರಣೆಯನ್ನು ಬುಧವಾರ ಅಂದರೆ ಇಂದು ಮಧ್ಯಾಹ್ನ 2.15 ಕ್ಕೆ ಮುಂದೂಡಲಾಗಿದೆ.

ಈಶಾನ್ಯ ದೆಹಲಿಯಲ್ಲಿ ಭುಗಿಲೆದ್ದಿರುವ ಹಿಂಸಾಚಾರ.

ಈಶಾನ್ಯ ದೆಹಲಿಯಲ್ಲಿ ಭುಗಿಲೆದ್ದಿರುವ ಹಿಂಸಾಚಾರ.

  • Share this:
ನವ ದೆಹಲಿ (ಫೆಬ್ರವರಿ 26); ಸಿಎಎ ಪರ-ವಿರೋಧ ಚಳುವಳಿಯಿಂದ ಹಿಂಸಾಚಾರದ ಕಡೆಗೆ ತಿರುಗಿರುವ ದೆಹಲಿ ಪ್ರಕ್ಷುಬ್ಧ ಪರಿಸ್ಥಿತಿಯ ಕುರಿತು ಮಂಗಳವಾರ ಮಧ್ಯರಾತ್ರಿ ತುರ್ತು ವಿಚಾರಣೆ ನಡೆಸಿರುವ ದೆಹಲಿ ನ್ಯಾಯಾಲಯ ದೆಹಲಿ ಹಿಂಸಾಚಾರದಲ್ಲಿ ಗಾಯಗೊಂಡವರಿಗೆ ತುರ್ತು ಚಿಕಿತ್ಸೆ ನಿಡುವಂತೆ ಪೊಲೀಸರಿಗೆ ನಿರ್ದೆಶನ ನೀಡಿದೆ.

ದೆಹಲಿಯಲ್ಲಿ ಪರಿಸ್ಥಿತಿ ಗಂಭೀರವಾಗಿದ್ದು, ಹಿಂಸಾಚಾರದಲ್ಲಿ ಗಾಯಗೊಂಡವರಿಗೆ ಸೂಕ್ತ ವೈದ್ಯಕೀಯ ಸೌಲಭ್ಯಗಳನ್ನು ನೀಡಬೇಕು, ಸುರಕ್ಷಿತವಾಗಿ ಉತ್ತಮ ಆಸ್ಪತ್ರೆಗಳಿಗೆ ಸಾಗಿಸಿ ಉತ್ತಮ ಚಿಕಿತ್ಸೆ ನಿಡಬೇಕು ಎಂಬ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ನಿನ್ನೆ ರಾತ್ರಿ ನ್ಯಾಯಮೂರ್ತಿ ಎಸ್. ಮುರಳೀಧರ್ ಅವರ ಮನೆಗೆ ತೆರಳಿ ಸಲ್ಲಿಸಲಾಗಿತ್ತು.

ಈ ಅರ್ಜಿಯ ತುರ್ತು ವಿಚಾರಣೆ ನಡೆಸಿರುವ ನ್ಯಾಯಮೂರ್ತಿಗಳಾದ ಎಸ್. ಮುರಳೀಧರ್ ಮತ್ತು ಅನುಪ್ ಬಂಬಾನಿ ಅವರನ್ನೊಳಗೊಂಡ ನ್ಯಾಯಪೀಠ, “ದೆಹಲಿ ಹಿಂಸಾಚಾರದಲ್ಲಿ ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆ ನೀಡಲು ಬೇಕಾಗುವ ಎಲ್ಲಾ ಸಂಪನ್ಮೂಲಗಳನ್ನು ಖಚಿತಪಡಿಸಿಕೊಳ್ಳಿ” ಎಂದು ಪೊಲಿಸರಿಗೆ ಸೂಚನೆ ನೀಡಿದ್ದಾರೆ. ಅಲ್ಲದೆ, ಈ ಆದೇಶವನ್ನು ದೆಹಲಿಯ ಗುರು ತೇಜ್ ಬಹದ್ದೂರ್ ಮತ್ತು ಲೋಕ ನಾಯಕ ಜೈ ಪ್ರಕಾಶ್ ನಾರಾಯಣ್ ಆಸ್ಪತ್ರೆಗಳ ವೈದ್ಯಕೀಯ ಅಧೀಕ್ಷಕರಿಗೆ ತಿಳಿಸಲಾಗುವುದು ಎಂದು ನ್ಯಾಯಪೀಠ ತಿಳಿಸಿದೆ.

ಗಾಯಗೊಂಡವರ ಬಗ್ಗೆ ಮಾಹಿತಿ ಮತ್ತು ಅವರಿಗೆ ನೀಡಲಾಗುವ ಚಿಕಿತ್ಸೆಯನ್ನೂ ಒಳಗೊಂಡಂತೆ ಅನುಸರಣಾ ವರದಿಯನ್ನು ನ್ಯಾಯಪೀಠಕ್ಕೆ ಸಲ್ಲಿಸುವಂತೆಯೂ ಪೊಲೀಸರಿಗೆ ಸೂಚನೆ ನೀಡಲಾಗಿದೆ. ಮುಂದಿನ ವಿಚಾರಣೆಯನ್ನು ಬುಧವಾರ ಅಂದರೆ ಇಂದು ಮಧ್ಯಾಹ್ನ 2.15 ಕ್ಕೆ ಮುಂದೂಡಲಾಗಿದೆ.

ಈಶಾನ್ಯ ದೆಹಲಿಯಲ್ಲಿ ತಿದ್ದುಪಡಿ ಮಾಡಿದ ಪೌರತ್ವ ಕಾನೂನಿನ ಮೇಲೆ ಕೋಮು ಹಿಂಸಾಚಾರವು ಈವರೆಗೆ 18 ಜನರನ್ನು ಬಲಿ ತೆಗೆದುಕೊಂಡಿದೆ. ಪರಿಣಾಮ ಜನ ಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.

ಇದನ್ನೂ ಓದಿ ; ದೆಹಲಿಯ ಹಿಂಸಾಚಾರ ನಿಗ್ರಹಿಸಲು ವಿಶೇಷ ಪೊಲೀಸ್ ಆಯುಕ್ತರಾಗಿ ಎಸ್.ಎನ್. ಶ್ರೀವಾಸ್ತವ ನೇಮಕ
First published: