ಶಿಮ್ಲಾ: ಹಿಮಾಚಲ ಪ್ರದೇಶದ ಕುಲುವಿನಲ್ಲಿ (Himachal Pradesh's Kullu) ಇಂದು ಬೆಳಗ್ಗೆ ಬಸ್ ಪ್ರಪಾತಕ್ಕೆ ಬಿದ್ದ ಪರಿಣಾಮ ಶಾಲಾ ಮಕ್ಕಳು ಸೇರಿದಂತೆ 9 ಮಂದಿ ಪ್ರಯಾಣಿಕರು (Passengers Including Schoolchildren) ಸಾವನ್ನಪ್ಪಿದ್ದಾರೆ ಎಂದು NDTV ವರದಿ ಮಾಡಿದೆ. ಅಪಘಾತದ ತೀವ್ರತೆಗೆ ಬಸ್ ಸಂಪೂರ್ಣ ನಜ್ಜುಗುಜ್ಜಾಗಿದೆ. ಸಾಯಿಂಜ್ಗೆ ಹೋಗುತ್ತಿದ್ದ ಬಸ್ ಬೆಳಿಗ್ಗೆ 8.30 ರ ಸುಮಾರಿಗೆ ಜಂಗ್ಲಾ ಗ್ರಾಮದ ಬಳಿ ಪ್ರಪಾತಕ್ಕೆ ಉರುಳಿದೆ ಎಂದು ಕುಲು ಡೆಪ್ಯುಟಿ ಕಮಿಷನರ್ ಅಶುತೋಷ್ ಗರ್ಗ್ ಅವರು ತಿಳಿಸಿದ್ದಾರೆ. ಜಿಲ್ಲಾ ಅಧಿಕಾರಿಗಳು ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿದ್ದು, ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ಸಾಗಿಸಲಾಗುತ್ತಿದೆ ಎಂದು ಅವರು ಹೇಳಿದರು. ಅಪಘಾತ ಸಂಭವಿಸಿದಾಗ ಕನಿಷ್ಠ 40 ವಿದ್ಯಾರ್ಥಿಗಳು ಬಸ್ನಲ್ಲಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
The bus accident in Kullu, Himachal Pradesh is heart-rending. In this tragic hour my thoughts are with the bereaved families. I hope those injured recover at the earliest. The local administration is providing all possible assistance to those affected: PM @narendramodi
ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ ₹ 2 ಲಕ್ಷ ಪರಿಹಾರ ನೀಡುವುದಾಗಿ ಪ್ರಧಾನಿ ಕಚೇರಿ ಟ್ವೀಟ್ ಮಾಡಿದೆ. ಹಿಮಾಚಲ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬಸ್ ಅಪಘಾತದಿಂದ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ಪಿಎಂಎನ್ಆರ್ಎಫ್ನಿಂದ ತಲಾ ₹ 2 ಲಕ್ಷ ಪರಿಹಾರವನ್ನು ಪ್ರಧಾನಮಂತ್ರಿ ಅನುಮೋದಿಸಿದ್ದಾರೆ. ಗಾಯಾಳುಗಳಿಗೆ ತಲಾ ₹ 50,000 ನೀಡಲಾಗುವುದು ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.
ಘಟನೆ ನಡೆದು ಒಂದೂವರೆ ಗಂಟೆ ಕಳೆದರೂ ಆಡಳಿತ ಯಂತ್ರ ಸ್ಥಳಕ್ಕೆ ಬಂದಿಲ್ಲ. ಇದರಿಂದ ಸ್ಥಳೀಯ ಶಾಸಕ ಸುರೇಂದ್ರ ಶೌರಿ ಮತ್ತು ಎಸ್ಡಿಎಂ ಬಂಜಾರ್ ಗ್ರಾಮಸ್ಥರ ಆಕ್ರೋಶಕ್ಕೆ ಗುರಿಯಾಗಬೇಕಾಯಿತು. ಆಡಳಿತದ ವಿಳಂಬದಿಂದಾಗಿ ಬಸ್ನಡಿ ಸಿಲುಕಿ ಹಲವರು ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಗ್ರಾಮಸ್ಥರು ಆರೋಪಿಸಿದರು. ಕುಲು ಸೈಂಜ್ ಕಣಿವೆಯ ಶೆಂಶಾರ್ ರಸ್ತೆಯ ಜಂಗಲ್ ಬಳಿ ಬಸ್ ಅಪಘಾತದಲ್ಲಿ, 13 ಜನರು ಪ್ರಾಣ ಕಳೆದುಕೊಂಡರು. ಬಸ್ ಚಾಲಕನ ನಿರ್ಲಕ್ಷ್ಯದಿಂದ ಅಪಘಾತ ಸಂಭವಿಸಿದೆ. ರಸ್ತೆಯಲ್ಲಿ ಭೂಕುಸಿತ ಉಂಟಾಗಿ ರಸ್ತೆ ಬಿಗಿಯಾಗಿದೆ ಎಂದು ಹೇಳಲಾಗುತ್ತಿದೆ. ಆದರೆ ಇದನ್ನು ಲೆಕ್ಕಿಸದೆ ಚಾಲಕ ಬಸ್ಸನ್ನು ಅಲ್ಲಿಂದ ಹೊರತರಲು ಯತ್ನಿಸಿದ್ದಾನೆ.
ಈ ವೇಳೆ ಬಸ್ನ ಟೈರ್ ರಸ್ತೆಯಿಂದ ಹೊರಬಿತ್ತು. ನಂತರ ಬಸ್ ನೇರವಾಗಿ 70 ಮೀಟರ್ ಕೆಳಗಿನ ರಸ್ತೆಗೆ ಬಿದ್ದಿದೆ. ಬಸ್ ಬಿದ್ದ ತಕ್ಷಣ ಚಾಲಕ ಗೋಪಾಲ್ ಬಸ್ ನಿಂದ ದೂರದ ಪೊದೆಗೆ ಬಿದ್ದಿದ್ದಾನೆ. ಪ್ರಯಾಣಿಕರ ಕೂಗು ಕೇಳಿದ ಸ್ಥಳೀಯ ಗ್ರಾಮಸ್ಥರು ಸ್ಥಳಕ್ಕೆ ಆಗಮಿಸಿದರು.
Published by:Kavya V
First published:
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ