ತಮಿಳುನಾಡು ವಿಧಾನಸಭಾ ಚುನಾವಣೆಗೆ ಇನ್ನೇನು ನಾಲ್ಕು ದಿನ ಬಾಕಿ ಉಳಿದಿದ್ದು, ಇದಕ್ಕು ಮುನ್ನ ಡಿಎಂಕೆ ನಾಯಕರ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಡಿಎಂಕೆ ನಾಯಕ ಎಂ. ಕೆ ಸ್ಟಾಲಿನ್ ಅಳಿಯ ಶಬರೀಸನ್ ಅವರ ಮನೆ ಮೇಲೆ ಈ ದಾಳಿ ನಡೆದಿದೆ. ಇದೇ ವೇಳೆ ಅಣ್ಣಾನಗರದ ಡಿಎಂಕೆ ಅಭ್ಯರ್ಥಿ ಮೋಹನ್ ಅವರ ಮಗನ ಮನೆ ಮೇಲೂ ದಾಳಿ ನಡೆಸಲಾಗಿದೆ. ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಅವರೊಂದಿಗೆ ಡಿಎಂಕೆ ಕಾರ್ಯತಂತ್ರ ಸಭೆ ನಡೆಸುತ್ತಿದ್ದ ಶಬರೀಸನ್ ನಿವಾಸದ ಮೇಲೂ ದಾಳಿ ನಡೆಸಲಾಗಿದೆ.
Tamil Nadu: Income Tax department search underway at the premises of Sabareesan, son-in-law of DMK president MK Stalin. Apart from his residence, several other places connected to him are also being searched. Details awaited.
ಇತ್ತೀಚೆಗೆ ಡಿಎಂಕೆ ಪ್ರಬಲ ವ್ಯಕ್ತಿ ಇವಿ ವೇಲು ಅವರ ಮನೆ ಮತ್ತು ಕಚೇರಿ ಮೇಲೂ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದರು. ಇದನ್ನು ಬಿಜೆಪಿಯ ಪ್ರೇರಿತ ದಾಳಿ ಎಂದು ಡಿಎಂಕೆ ಆರೋಪಿಸಿತ್ತು. ಈ ದಾಳಿ ವೇಳೆ ತಿರುವಣ್ಣಾಮಲೈನ 10 ಸ್ಥಳಗಳ ಮೇಲೆ ನಡೆಸಿದ ಈ ದಾಳಿಯಲ್ಲಿ ನಗದನ್ನು ವಶ ಪಡಿಸಿಕೊಳ್ಳಲಾಗಿತ್ತು
ಈಗ ಚುನಾವಣೆ ಮುಂದೆ ಎರಡನೇ ಬಾರಿ ಆದಾಯ ತೆರಿಗೆ ಅಧಿಕಾರಿಗಳು ಈ ದಾಳಿ ನಡೆಸಿದ್ದಾರೆ. ಇದೇ ಏಪ್ರಿಲ್ 6ರಂದು ತಮಿಳುನಾಡಿನಲ್ಲಿ ಚುನಾವಣೆ ನಡೆಯಲಿದೆ. 10 ವರ್ಷಗಳ ಬಳಿಕ ಈ ಚುನಾವಣೆಯಲ್ಲಿ ಮತ್ತೆ ಅಧಿಕಾರ ಚುಕ್ಕಾಣಿ ಹಿಡಿಯುವ ವಿಶ್ವಾಸವನ್ನು ಡಿಎಂಕೆ ವ್ಯಕ್ತಪಡಿಸಿದೆ.
Published by:Seema R
First published:
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ